ಸಂಘಟಕ, ಕಾರ್ಮಿಕ ಹೋರಾಟಗಾರ ಅಣ್ಣಪ್ಪ ಪೂಜಾರಿ ಅವರಿಗೆ “ಯುವ ಸಿರಿ’ ಗೌರವ

Team Udayavani, Feb 9, 2021, 6:21 PM IST

“YUVA Siri” honor

ಮುಂಬಯಿ: ನಗರದ ಕನ್ನಡ ಸೇವಾ ಸಂಘ ಪೊವಾಯಿ ಇದರ ಸಂಸ್ಥಾಪಕ ಸದಸ್ಯ, ಮುಂಬಯಿಯಲ್ಲಿ ಕಾರ್ಮಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸಂಘಟಕ, ಹಲವು ಗೌರವಗಳಿಗೆ ಪಾತ್ರರಾದ ಅಣ್ಣಪ್ಪ ಪೂಜಾರಿ ಅವರನ್ನು ಇತ್ತೀಚೆಗೆ ಹುಟ್ಟೂರಿನಲ್ಲಿ ನಡೆದ ಆದಿ ಗ್ರಾಮೋತ್ಸವದಲ್ಲಿ “ಯುವ ಸಿರಿ ಗೌರವ’ ನೀಡಿ ಸಮ್ಮಾನಿಸಲಾಯಿತು.

ಕರ್ನಾಟಕ ವಿಧಾನ ಪರಿಷತ್‌ನ ಮಾಜಿ ಸದಸ್ಯ, ಶಿಕ್ಷಣ ತಜ್ಞ, ಸಾಮಾಜಿಕ ಕಳಕಳಿಯ ಚಿಂತಕ ಕ್ಯಾ| ಗಣೇಶ ಕಾರ್ಣಿಕ್‌ ಅವರು ಗೌರವ ಪ್ರದಾನ ಮಾಡಿದರು. ಗೌರವ ಸ್ವೀಕರಿಸಿ ಮಾತನಾಡಿದ ಅಣ್ಣಪ್ಪ ಪೂಜಾರಿ ಅವರು, ನಾವು ಮುಂಬಯಿಗೆ ಹೊಟ್ಟೆ ಪಾಡಿಗಾಗಿ ಬಂದೆವು. ನಾಲ್ಕು ಜನರಿಗೆ ಉಪಕಾರ ಆಗಲಿ ಎಂಬ ದೃಷ್ಟಿಯಿಂದ ಶೇಖರ ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ಮೂವತ್ತು ಜನ ಸೇರಿ ಪೊವಾಯಿಯಲ್ಲಿ ಕನ್ನಡ ಸೇವಾ ಸಂಘ ಕಟ್ಟಿದೆವು. ನಮ್ಮನ್ನು ಗುರುತಿಸಲಿ ಎಂಬ ಯಾವುದೇ ಆಸೆ ಇರಲಿಲ್ಲ. ನಮ್ಮ ಸೇವೆಯನ್ನು ಗುರುತಿಸಿ 20-25 ವರ್ಷಗಳ ಹಿಂದೆ ಮಾಡಿದ ಸಾಧನೆಯನ್ನು ಗುರುತಿಸಿ ನಾನು ಹುಟ್ಟಿದ ಉಡುಪಿ ಜಿಲ್ಲೆಯಲ್ಲಿ ಗೌರವಿಸಿದ್ದಾರೆ.

ಇದು ನನ್ನ ಪುಣ್ಯ. ಇದನ್ನು ಮುಂಬಯಿ ಕನ್ನಡಿಗರಿಗೆ ಸಮರ್ಪಿಸುತ್ತಿದ್ದೇನೆ. ಮುಂಬಯಿ ಮಹಾನಗರ ಬದುಕಿನ ಪಾಠವನ್ನು ಕಲಿಸಿದ ಹಾಗೆ ಬೇರೆ ಯಾವುದೇ ನಗರವು ಕಲಿಸಲಾರದು. ಮುಂಬಯಿ ಸಾವಿರಾರು ಮಂದಿ ತುಳು – ಕನ್ನಡಿಗರ ಬದುಕನ್ನು ಅರಳಿಸಿದೆ. ಇಂದು ಕರಾವಳಿ ಜಿಲ್ಲೆಯ ಅಭಿವೃದ್ಧಿಯ ಪ್ರತಿಯೊಂದು ಹೆಜ್ಜೆಯಲ್ಲೂ ಒಬ್ಬ ಮುಂಬಯಿ ತುಳು, ಕನ್ನಡಿಗರ ಸೇವೆಯ ಸ್ಪರ್ಶವಿದೆ ಎಂದು ಅವರು ಸಂತಸ ವ್ಯಕ್ತ ಪಡಿಸಿದರು.

ಇದನ್ನೂ ಓದಿ:ನಿಪ್ಪಾಣಿ ನಗರಸಭೆ ಮೇಲಿನ ಭಗವಾ ಧ್ವಜ ತೆರವಿಗೆ ಮಾಹಿತಿ ಸಂಗ್ರಹ

ಕನ್ನಡ ಸೇವಾ ಸಂಘ ಪೊವಾಯಿ ಇದರ ಸಂಸ್ಥಾಪಕ ಅಧ್ಯಕ್ಷ ಡಾ| ಶೇಖರ ಅಜೆಕಾರು ಅಧ್ಯಕ್ಷತೆ ವಹಿಸಿದ್ದರು. ಮುನಿರಾಜ ರೆಂಜಾಳ, ಯೋಗೀಶ್‌ ಮಲ್ಯ ಕಡ್ತಲ, ಸಂಪತ್‌ ಕುಮಾರ್‌ ಜೈನ್‌, ಕಬಡ್ಡಿ ತರಬೇತುದಾರ ರಮೇಶ ಸುವರ್ಣ, ರಾಘವ ದೇವಾಡಿಗ ಕಡ್ತಲ, ಕಾರ್ಕಳ ರೋಟರಿ ಆನ್ಸ್‌ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್‌, ಶೇಖರ ಕಡ್ತಲ ಸಹಿತ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.