Gukesh: ಇತಿಹಾಸ ಬರೆದ 17ರ ಹುಡುಗ; ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದ ಡಿ.ಗುಕೇಶ್
Team Udayavani, Apr 22, 2024, 7:59 AM IST
ಟೊರೆಂಟೊ: ಹದಿಹರೆಯದ ಭಾರತದ ಗ್ರ್ಯಾನ್ ಮಾಸ್ಟರ್ ಡಿ ಗುಕೇಶ್ ಅವರು ಇತಿಹಾಸ ಬರೆದಿದ್ದಾರೆ. ಕ್ಯಾಂಡಿಡೇಟ್ಸ್ ಚೆಸ್ ಟೂರ್ನಮೆಂಟ್ ನಲ್ಲಿ ಚಾಂಪಿಯನ್ ಆಗಿ ಮೂಡಿಬಂದ 17 ವರ್ಷದ ಗುಕೇಶ್, ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಕ್ಯಾಂಡಿಡೇಟ್ಸ್ ಕಪ್ ಗೆದ್ದ ಕೇವಲ ಎರಡನೇ ಭಾರತೀಯನಾಗಿ ಗುಕೇಶ್ ಮೂಡಿಬಂದಿದ್ದಾರೆ. ಈ ಹಿಂದೆ ವಿಶ್ವನಾಥನ್ ಆನಂದ್ ಅವರು ಈ ಸಾಧನೆ ಮಾಡಿದ್ದರು. ಐದು ಬಾರಿಯ ವಿಶ್ವ ಚಾಂಪಿಯನ್ ಆನಂದ್ ಅವರ ವಿಜಯವು 2014 ರಲ್ಲಿ ಕ್ಯಾಂಡಿಡೇಟ್ಸ್ ಚಾಂಪಿಯನ್ ಶಿಪ್ ಗೆದ್ದುಕೊಂಡಿದ್ದರು.
ಅಮೆರಿಕದ ಹಿಕರು ನಕಮುರಾ ವಿರುದ್ಧ ಅಂತಿಮ ಸುತ್ತಿನ ಪಂದ್ಯವನ್ನು ಡ್ರಾ ಮಾಡಿದ ನಂತರ ಗುಕೇಶ್ 14 ಅಂಕಗಳಲ್ಲಿ ಒಂಬತ್ತು ಅಂಕಗಳನ್ನು ಸಂಗ್ರಹಿಸಿದರು.
ಗುಕೇಶ್ ಈ ವರ್ಷದ ಕೊನೆಯಲ್ಲಿ ವಿಶ್ವ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ವಿಶ್ವ ಚಾಂಪಿಯನ್ ಶಿಪ್ ಕಿರೀಟಕ್ಕಾಗಿ ಎದುರಿಸಲಿದ್ದಾರೆ.
Congratulations to @DGukesh for becoming the youngest challenger. The @WacaChess family is so proud of what you have done . I’m personally very proud of how you played and handled tough situations. Enjoy the moment
— Viswanathan Anand (@vishy64theking) April 22, 2024
12 ನೇ ವಯಸ್ಸಿನಲ್ಲಿ ಗ್ರ್ಯಾಂಡ್ ಮಾಸ್ಟರ್ ಪ್ರಶಸ್ತಿಯನ್ನು ಗಳಿಸಿದ ಚೆಸ್ ಇತಿಹಾಸದಲ್ಲಿ ಮೂರನೇ ಕಿರಿಯ ವ್ಯಕ್ತಿಯಾದ ನಂತರ ಗುಕೇಶ್ ಚೆಸ್ ಸಮುದಾಯದಲ್ಲಿ ಹೆಸರು ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.