ಸರಣಿಯಲ್ಲಿ 2 ಡೇ-ನೈಟ್ ಟೆಸ್ಟ್: ಆಸೀಸ್ ಯೋಜನೆ
Team Udayavani, Dec 6, 2019, 11:12 PM IST
ಮೆಲ್ಬರ್ನ್: ಭಾರತ ತನ್ನ ಕ್ರಿಕೆಟ್ ಇತಿಹಾಸದ ಮೊದಲ ಡೇ-ನೈಟ್ ಟೆಸ್ಟ್ ಪಂದ್ಯವನ್ನು ಯಶಸ್ವಿಯಾಗಿ ಆಡಿ ಮುಗಿಸಿದೆ. ಮುಂದೆ ಭಾರತ ಪ್ರವಾಸ ಕೈಗೊಳ್ಳಲಿರುವ ತಂಡಗಳು ಕನಿಷ್ಠ ಒಂದು ಹಗಲು-ರಾತ್ರಿ ಪಂದ್ಯದಲ್ಲಾ ದರೂ ಪಾಲ್ಗೊಳ್ಳಬೇಕೆಂಬ ಬಿಸಿಸಿಐ ಯೋಜನೆ ನಿಧಾನವಾಗಿ ಕಾರ್ಯರೂಪಕ್ಕೆ ಬರುವ ಸೂಚನೆಯೊಂದು ಲಭಿಸಿದೆ.
ಇದೇ ವೇಳೆ “ಕ್ರಿಕೆಟ್ ಆಸ್ಟ್ರೇಲಿಯ’ (ಸಿಎ) ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. 2020-21ರ ಸರಣಿಗಾಗಿ ಭಾರತ ತಂಡದ ಆಗಮನದ ವೇಳೆ 2 ಪಿಂಕ್ ಬಾಲ್ ಟೆಸ್ಟ್ ಪಂದ್ಯಗಳನ್ನು ಆಯೋಜಿಸುವ ಯೋಜನೆಯೊಂದನ್ನು ಹಾಕಿಕೊಂಡಿದೆ. ಬಿಸಿಸಿಐ ಜತೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲು ಸಿಎ ನಿರ್ಧರಿಸಿದೆ. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈಗಾಗಲೇ ಪ್ರತಿಕ್ರಿಯಿಸಿದ್ದು, ಸರಣಿಯಲ್ಲಿ 2 ಡೇ-ನೈಟ್ ಟೆಸ್ಟ್ ಪಂದ್ಯ ಜಾಸ್ತಿ ಯಾಯಿತು ಎಂದಿದ್ದಾರೆ.
ಆಸೀಸ್ ಕ್ರಿಕೆಟ್ ನಿಯೋಗ
ಮುಂದಿನ ಜನವರಿಯಲ್ಲಿ ಆಸ್ಟ್ರೇಲಿಯ ತಂಡ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಗಾಗಿ ಭಾರತಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಕ್ರಿಕೆಟ್ ಆಸ್ಟ್ರೇಲಿಯದ ಅಧ್ಯಕ್ಷ ಅರ್ಲ್ ಎಡ್ಡಿಂಗ್ಸ್ ಅವರನ್ನೊಳಗೊಂಡ ಕ್ರಿಕೆಟ್ ನಿಯೋಗ ಕೂಡ ಭಾರತಕ್ಕೆ ಭೇಟಿ ನೀಡಲಿದೆ. 2020-21ರ ಸರಣಿ ವೇಳೆ ನಡೆಸಲಾಗುವ ಹೆಚ್ಚಿನ ಸಂಖ್ಯೆಯ ಡೇ-ನೈಟ್ ಟೆಸ್ಟ್ ಪಂದ್ಯಗಳ ಕುರಿತು ಅದು ಬಿಸಿಸಿಐ ಜತೆ ಮಾತುಕತೆ ನಡೆಸಲಿದೆ.
ಮುಂದಿನ ವರ್ಷಾಂತ್ಯ ಭಾರತ ತಂಡ ಬ್ರಿಸ್ಬೇನ್‌ನಲ್ಲಿ ಮೊದಲ ಟೆಸ್ಟ್ ಆಡಲಿದ್ದು, ಇದು ಬಹುತೇಕ ಡೇ-ನೈಟ್ ಆಗಿರಲಿದೆ. ಇದೇ ಸರಣಿಯ ಇನ್ನೊಂದು ಪಂದ್ಯವನ್ನೂ ಪಿಂಕ್ ಬಾಲ್‌ನಲ್ಲಿ ಆಡಿಸುವುದು ಆಸ್ಟ್ರೇಲಿಯದ ಯೋಜನೆ. ಆಗ ಟೆಸ್ಟ್ ಸರಣಿಯೊಂದರಲ್ಲಿ ಮೊದಲ ಸಲ 2 ಡೇ-ನೈಟ್ ಪಂದ್ಯಗಳನ್ನು ಆಯೋಜಿಸಿದ ಹೆಗ್ಗಳಿಕೆ ಆಸ್ಟ್ರೇಲಿಯದ್ದಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.