3rd Test: ಶ್ರೀಲಂಕಾಕ್ಕೆ 8 ವಿಕೆಟ್ ಜಯ: ಇಂಗ್ಲೆಂಡಿಗೆ 2-1 ಟೆಸ್ಟ್ ಸರಣಿ
Team Udayavani, Sep 9, 2024, 11:52 PM IST
ಲಂಡನ್: ಆರಂಭಿಕ ಆಟಗಾರ ಪಥುಮ್ ನಿಸ್ಸಾಂಕ ಅವರ ಅಜೇಯ ಶತಕದ ನೆರವಿನಿಂದ ಶ್ರೀಲಂಕಾ ತಂಡವು ಇಂಗ್ಲೆಂಡ್ ವಿರುದ್ಧದ ಮೂರನೇ ತಥಾ ಅಂತಿಮ ಟೆಸ್ಟ್ ಪಂದ್ಯದಲ್ಲಿ ಎಂಟು ವಿಕೆಟ್‌ಗಳ ಜಯ ಸಾಧಿಸಿದೆ. ಈ ಗೆಲುವಿನಿಂದ ಶ್ರೀಲಂಕಾ ತಂಡವು ವೈಟ್‌ವಾಶ್ ಸೋಲಿನಿಂದ ಪಾರಾಗಿದೆ. ಇದು ಇಂಗ್ಲೆಂಡ್ ನೆಲದಲ್ಲಿ ಶ್ರೀಲಂಕಾ ದಾಖಲಿಸಿದ ನಾಲ್ಕನೇ ಜಯ ಆಗಿದೆ.
ಮೂರನೇ ಪಂದ್ಯದಲ್ಲಿ ಸೋತರೂ ಇಂಗ್ಲೆಂಡ್ ತಂಡವು 2-1 ಅಂತರದಿಂದ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಆದರೆ ಎರಡನೇ ಕ್ಲೀನ್‌ಸ್ವೀಪ್ ಸಾಧನೆ ದಾಖಲಿಸಿಕೊಳ್ಳಲು ಇಂಗ್ಲೆಂಡ್ ತಂಡದಿಂದ ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ಈ ಮೊದಲು ಜುಲೈಯಲ್ಲಿ ವೆಸ್ಟ್‌ಇಂಡೀಸ್ ತಂಡವನ್ನು 3-0 ಅಂತರದಿಂದ ಕ್ಲೀನ್‌ಸ್ವೀಪ್ ಮೂಲಕ ಸೋಲಿಸಿತ್ತು.
ಗೆಲ್ಲಲು 219 ರನ್ ಗಳಿಸುವ ಗುರಿ ಪಡೆದ ಶ್ರೀಲಂಕಾ ತಂಡಕ್ಕೆ ನಿಸ್ಸಾಂಕ ಆಸರೆಯಾದರು. ಅವರ ಆಕರ್ಷಕ ಶತಕದಿಂದಾಗಿ ತಂಡ ಎರಡು ವಿಕೆಟ್ ನಷ್ಟದಲ್ಲಿ 219 ರನ್ ಗಳಿಸಿ ಜಯಭೇರಿ ಬಾರಿಸಿತು. ಬಿರುಸಿನ ಆಟವಾಡಿದ ನಿಸ್ಸಾಂಕ 107 ಎಸೆತ ಎದುರಿಸಿ 13 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 127 ರನ್ ಗಳಿಸಿ ಅಜೇಯರಾಗಿ ಉಳಿದರು. ಇದು ನಿಸ್ಸಾಂಕ ಅವರ ಎರಡನೇ ಟೆಸ್ಟ್ ಶತಕವಾಗಿದೆ. ಅವರ ಮೊದಲ ಶತಕ ವೆಸ್ಟ್‌ಇಂಡೀಸ್ ವಿರುದ್ಧ 2021ರಲ್ಲಿ ಹೊಡೆದಿದ್ದರು.
ಸಂಕ್ಷಿಪ್ತ ಸ್ಕೋರು: ಇಂಗ್ಲೆಂಡ್ 325 ಮತ್ತು 156; ಶ್ರೀಲಂಕಾ 263 ಮತ್ತು ಎರಡು ವಿಕೆಟಿಗೆ 219 (ಪಥುಮ್ ನಿಸ್ಸಾಂಕ 127 ಔಟಾಗದೆ). ಪಂದ್ಯಶ್ರೇಷ್ಠ: ಪಥುಮ್ ನಿಸ್ಸಾಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.