“ಎ’ ತಂಡಗಳ ಟೆಸ್ಟ್ ಪಂದ್ಯ: ಭಾರತದ ಬ್ಯಾಟಿಂಗ್ ಮೇಲುಗೈ
Team Udayavani, Nov 17, 2018, 7:00 AM IST
ಮೌಂಟ್ ಮೌಂಗನುಯಿ (ನ್ಯೂಜಿಲ್ಯಾಂಡ್): ಆತಿಥೇಯ ನ್ಯೂಜಿಲ್ಯಾಂಡ್ “ಎ’ ವಿರುದ್ಧ ಆರಂಭಗೊಂಡಿರುವ 4 ದಿನಗಳ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ “ಎ’ ತಂಡ ಉತ್ತಮ ಮಟ್ಟದ ಬ್ಯಾಟಿಂಗ್ ಪ್ರದರ್ಶಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 340 ರನ್ ಪೇರಿಸಿದೆ.
ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ಹನುಮ ವಿಹಾರಿ ಮತ್ತು ಪಾರ್ಥಿವ್ ಪಟೇಲ್ ಅವರ ಅರ್ಧ ಶತಕ ಭಾರತ ಸರದಿಯ ಆಕರ್ಷಣೆ ಆಗಿತ್ತು. ಆರಂಭಕಾರ ಶಾ 62 ರನ್ ಹೊಡೆದರು (88 ಎಸೆತ, 6 ಬೌಂಡರಿ, 1 ಸಿಕ್ಸರ್). ಶಾ-ಮುರಳಿ ವಿಜಯ್ (28) ಮೊದಲ ವಿಕೆಟ್ ಜತೆಯಾಟದಲ್ಲಿ 61 ರನ್ ಒಟ್ಟುಗೂಡಿತು.
ವನ್‌ಡೌನ್‌ನಲ್ಲಿ ಬ್ಯಾಟ್ ಹಿಡಿದು ಬಂದ ಮಾಯಾಂಕ್ ಅಗರ್ವಾಲ್ ಹೆಚ್ಚು ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ಅವರ ಗಳಿಕೆ 65 ರನ್. 108 ಎಸೆತ ಎದುರಿಸಿದ ಅಗರ್ವಾಲ್ 2 ಸಿಕ್ಸರ್ ಹಾಗೂ 10 ಬೌಂಡರಿ ಸಿಡಿಸಿದರು.
ನೂರೈವತ್ತು ಎಸೆತಗಳಿಂದ 86 ರನ್ ಮಾಡಿದ ಹನುಮ ವಿಹಾರಿ ಸದ್ಯ ಭಾರತೀಯ ಸರದಿಯ ಟಾಪ್ ಸ್ಕೋರರ್ ಆಗಿದ್ದಾರೆ (8 ಬೌಂಡರಿ). ಕೀಪರ್ ಪಾರ್ಥಿವ್ ಪಟೇಲ್ 79 ರನ್ ಮಾಡಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ (111 ಎಸೆತ, 10 ಬೌಂಡರಿ). ಆದರೆ ನಾಯಕ ರಹಾನೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು (12). ವಿಹಾರಿ ಔಟಾದೊಡನೆ ದಿನದಾಟವನ್ನು ಕೊನೆಗೊಳಿಸಲಾಯಿತು. ಆಗ 2 ಎಸೆತವಷ್ಟೇ ಬಾಕಿ ಉಳಿದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.