ಜ.24ಕ್ಕೆ ಬಿಸಿಸಿಐಗೆ ಆಡಳಿತಾಧಿಕಾರಿ ನೇಮಕ


Team Udayavani, Jan 21, 2017, 3:45 AM IST

supreme-court-800.jpg

ನವದೆಹಲಿ: ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ)ಗೆ ಆಡಳಿತಾಧಿಕಾರಿಗಳ ನೇಮಕ ಪ್ರಕ್ರಿಯೆಯನ್ನು ಸರ್ವೋಚ್ಚ ನ್ಯಾಯಾಲಯ ಜ.24ಕ್ಕೆ ಮುಂದೂಡಿದೆ. 

ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಏಕಸದಸ್ಯ ಪೀಠ ಆಡಳಿತಾಧಿಕಾರಿಗಳ ನೇಮಕ ಕುರಿತಂತೆ ವಿಚಾರಣೆಯನ್ನು ಆಲಿಸಿತು. ಜತೆಗೆ  ಹಿರಿಯರ ವಕೀಲರಾದ ಅನಿಲ್‌ ದಿವಾನ್‌ ಮತ್ತು ಗೋಪಾಲ ಸುಬ್ರಹ್ಮಣ್ಯಂ ನ್ಯಾಯಾಲಯಕ್ಕೆ ಸಲ್ಲಿಸಿದ ಬಿಸಿಸಿಐ ಆಡಳಿತಾಧಿಕಾರಿಗಳ ಹೊಸ ಪಟ್ಟಿ ಬಗ್ಗೆ ಚರ್ಚೆ ನಡೆಸಿತು. ಪಟ್ಟಿ ಪರಿಶೀಲಿಸಿದ ನ್ಯಾಯಮೂರ್ತಿಗಳು 9 ಮಂದಿಯ ಪಟ್ಟಿ ಸಂಖ್ಯೆ ಉದ್ದವಾಯಿತು ಎನ್ನುವ ಅಭಿಪ್ರಾಯವನ್ನು ಇದೇ ವೇಳೆ ವ್ಯಕ್ತಪಡಿಸಿದರು.

ಸುಪ್ರೀಂನಿಂದ ನೇಮಕವಾಗಿದ್ದ ಅಮಿಕಸ್‌ ಕ್ಯೂರಿ: ಬಿಸಿಸಿಐನಲ್ಲಿ ಲೋಧಾ ಶಿಫಾರಸು ಜಾರಿಗೊಳಿಸಲು ವಿಫ‌ಲವಾಗಿದ್ದ ಬಿಸಿಸಿಐ ವಿರುದ್ಧ ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ ಚಾಟಿ ಬೀಸಿತ್ತು. ಮಾತು ಕೇಳದ ಬಿಸಿಸಿಐ ಅಧ್ಯಕ್ಷ ಅನುರಾಗ್‌ ಠಾಕೂರ್‌ ಮತ್ತು ಅಜಯ್‌ ಶಿರ್ಕೆ ಅವರನ್ನು ಹುದ್ದೆಯಿಂದ ನ್ಯಾಯಾಲಯ ಪದಚ್ಯುತಗೊಳಿಸಿತ್ತು. ಈ ಬೆನ್ನಲ್ಲೇ ಸರ್ವೋಚ್ಚ ನ್ಯಾಯಾಲಯ ಅಮಿಕಸ್‌ ಕ್ಯೂರಿ (ಮಧ್ಯವರ್ತಿ ವಕೀಲರು) ಹಿರಿಯ ವಕೀಲರನ್ನು ಒಳಗೊಂಡ ಸಮಿತಿಯನ್ನು ನೇಮಿಸಿತ್ತು. ಬಿಸಿಸಿಐಗೆ ಹೊಸ ಆಡಳಿತಾಧಿಕಾರಿಗಳ ಹೆಸರನ್ನು ಆಯ್ಕೆ ಮಾಡುವ ಅಧಿಕಾರವನ್ನು ಕ್ಯೂರಿಗೆ ನೀಡಿತ್ತು. ಅದರಂತೆ ಈಗ ವಕೀಲರು ಒಟ್ಟು 9 ಮಂದಿ ಸದಸ್ಯರ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಹೆಸರು ಗೌಪ್ಯವಾಗಿರಿಸಿ; ನ್ಯಾಯಾಲಯದ ಆದೇಶ: ಸದ್ಯ 9 ಮಂದಿ ಪಟ್ಟಿ ಪ್ರಕಟಗೊಂಡಿದೆ. ಆದರೆ ಪಟ್ಟಿಯಲ್ಲಿ ಇರುವ ಹೆಸರುಗಳು ಇನ್ನೂ ಬಹಿರಂಗಗೊಂಡಿಲ್ಲ. ಜ.24ರವರೆಗೆ ಪಟ್ಟಿಯಲ್ಲಿರುವ ಹೆಸರುಗಳನ್ನು ಗೌಪ್ಯವಾಗಿರಿಸಬೇಕೆಂದು ನ್ಯಾಯಾಲಯ ಅಮಿಕಸ್‌ ಕ್ಯೂರಿಗೆ ಸೂಚಿಸಿದೆ.

ಹಿಂದಿನ ವರದಿ ತಿದ್ದುಪಡಿ ಮಾಡಿದ ನ್ಯಾಯಾಲಯ: ನ್ಯಾಯಾಲಯ ಇದೇ ವೇಳೆ ಕೆಲವೊಂದು ಗೊಂದಲಗಳನ್ನು ತಿದ್ದುಪಡಿ ಮಾಡಿ ಗೊಂದಲ ನಿವಾರಿಸುವ ಪ್ರಯತ್ನ  ನಡೆಸಿತು. ಈ ಹಿಂದೆ ಒಬ್ಬ ವ್ಯಕ್ತಿ ರಾಜ್ಯ ಸಂಸ್ಥೆ ಮತ್ತು ಬಿಸಿಸಿಐ ಸೇರಿ ಒಟ್ಟು 9 ವರ್ಷ ಕಾರ್ಯನಿರ್ವಹಿಸಿದ್ದರೆ ಅಂತಹ ವ್ಯಕ್ತಿಗೆ ಬಿಸಿಸಿಐನಲ್ಲಿ ಅಧಿಕಾರ ಹೊಂದಲು ಅವಕಾಶ ಇಲ್ಲ ಎಂದು ತಿಳಿಸಿತ್ತು. 

ಲೋಧಾ ಪ್ರಕಟಿಸಿದ್ದ ಶಿಫಾರಸುವಿನಲ್ಲಿ ಇಂತಹದೊಂದು ಗೊಂದಲ ಉಂಟಾಗಿತ್ತು, ಇದೀಗ ನ್ಯಾಯಾಲಯ  ಹಿಂದಿನ ವರದಿಯನ್ನು ತಿದ್ದುಪಡಿ ಮಾಡಿದೆ. ರಾಜ್ಯ ಕ್ರಿಕೆಟ್‌ ಸಂಸ್ಥೆ ಮತ್ತು ಬಿಸಿಸಿಐ ಸೇರಿ ಒಟ್ಟು 9 ವರ್ಷ ಆಡಳಿತ ಮಾಡಿದ್ದರೆ ಅದು 9 ವರ್ಷದ ಆಡಳಿತ ಸೇವೆ ಎಂದು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.