T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Team Udayavani, May 1, 2024, 11:13 AM IST
ನವದೆಹಲಿ: ಮುಂಬರುವ ಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ 15 ಮಂದಿಯ ಬಲಿಷ್ಠ ತಂಡವನ್ನು ಬುಧವಾರ(ಮೇ.1 ರಂದು) ಪ್ರಕಟಿಸಿದೆ.
ಇದೇ ವರ್ಷದ ಜೂನ್ ನಲ್ಲಿ ಆರಂಭವಾಗಲಿರುವ ಚುಟುಕು ಕ್ರಿಕೆಟ್ ವಿಶ್ವಕಪ್ ಗಾಗಿ ಎಲ್ಲಾ ತಂಡಗಳು ತನ್ನ ತಂಡವನ್ನು ಪ್ರಕಟಿಸುತ್ತಿದೆ. ಕಪ್ ಗೆಲ್ಲುವ ಮೆಚ್ಚಿನ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ.
ಮಿಚ್ ಮಾರ್ಷ್ ತಂಡವನ್ನು ಲೀಡ್ ಮಾಡಲಿದ್ದು, ಬ್ಯಾಟಿಂಗ್ ವಿಭಾಗದಲ್ಲಿ ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಟಿಮ್ ಡೇವಿಡ್ ಅವರನ್ನು ಆಯ್ಕೆ ಮಾಡಲಾಗಿದೆ.
ಆಲ್ ರೌಂಡರ್ ವಿಭಾಗದಲ್ಲಿ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ನಂತಹ ಆಟಗಾರರು ಇದ್ದಾರೆ.
ಇನ್ನು ಸ್ಪಿನ್ಸ್ ವಿಭಾಗದಲ್ಲಿ ಪ್ರಮುಖ ಸ್ಪಿನ್ನರ್ ಆಗಿ ಆಡಮ್ ಝಂಪಾ ಕಾಣಿಸಿಕೊಳ್ಳಲಿದ್ದಾರೆ. ಇವರೊಂದಿಗೆ ಆಷ್ಟನ್ ಅಗರ್ ಸಾಥ್ ನೀಡಲಿದ್ದಾರೆ.
ಇನ್ನು ವೇಗಿಗಳಲ್ಲಿ ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಕೈಬಿಟ್ಟ ಪ್ರಮುಖ ಆಟಗಾರರು: ಮಧ್ಯಮ ಕ್ರಮಾಂಕದ ಆಟಗಾ ಸ್ಟೀಮ್ ಸ್ಮಿತ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಆರನ್ ಹಾರ್ಡಿ, ಮ್ಯಾಟ್ ಶಾರ್ಟ್, ಕ್ಸೇವಿಯರ್ ಬಾರ್ಟ್ಲೆಟ್, ಜೇಸನ್ ಬೆಹ್ರೆಂಡಾರ್ಫ್ ಮತ್ತು ಸ್ಪೆನ್ಸರ್ ಜಾನ್ಸನ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿಲ್ಲ.
ಇನ್ನು ಐಪಿಎಲ್ ನಲ್ಲಿ ಸ್ಫೋಟಕ ಬ್ಯಾಟಿಂಗ್ ಶೈಲಿಯಿಂದ ಮಿಂಚುತ್ತಿರುವ ಯುವ ಆಟಗಾರ ಜೇಕ್ ಪ್ರೇಸರ್ ವಿಶ್ವಕಪ್ ಗೆ ಆಯ್ಕೆ ಆಗುತ್ತಾರೆ ಎನ್ನಲಾಗುತ್ತಿತ್ತು. ಆದರೆ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.
ಆಸ್ಟ್ರೇಲಿಯಾ ತನ್ನ ವಿಶ್ವಕಪ್ ಅಭಿಯಾನವನ್ನು ಜೂನ್ 6 ರಂದು ಬಾರ್ಬಡೋಸ್‌ನಲ್ಲಿ ಓಮನ್ ವಿರುದ್ಧ ಪ್ರಾರಂಭಿಸಲಿದೆ.
Do you like Australia’s #T20WorldCup squad?
More info: https://t.co/Xp4MyWl9vG pic.twitter.com/bF4POwDDQn
— cricket.com.au (@cricketcomau) May 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.