ಐಪಿಎಲ್ ನಿಂದ ಹೊರಬಿದ್ದ ಮುಕೇಶ್ ಚೌಧರಿ; ಹೊಸ ಬೌಲರ್ ಆಯ್ಕೆ ಮಾಡಿದ ಸಿಎಸ್ ಕೆ
Team Udayavani, Mar 31, 2023, 2:58 PM IST
ಅಹಮದಾಬಾದ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಐಪಿಎಲ್ ಸೀಸನ್ 16ನ ಆರಂಭಿಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅಭಿಯಾನ ಆರಂಭಿಸಲಿದೆ.
ಇದೇ ವೇಳೆ ಸಿಎಸ್ ಕೆ ಫ್ರಾಂಚೈಸಿಗೆ ಗಾಯಾಳುಗಳ ಸಮಸ್ಯೆಯೂ ಕಾಡುತ್ತಿದೆ. ಎಡಗೈ ಸೀಮರ್ ಮುಕೇಶ್ ಚೌಧರಿ ಅವರು ಗಾಯದ ಕಾರಣದಿಂದ ಸಂಪೂರ್ಣ ಕೂಟದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಆಕಾಶ್ ಸಿಂಗ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.
ಕಳೆದ ಋತುವಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ 16 ವಿಕೆಟ್‌ಗಳನ್ನು ಕಬಳಿಸಿದ್ದ ಮುಕೇಶ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮುಕೇಶ್ ಕಳೆದ ವರ್ಷದ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಲ್ಲಿ ಒಬ್ಬರಾಗಿದ್ದರು.
2020 ರಲ್ಲಿ ಭಾರತದ ಅಂಡರ್-19 ವಿಶ್ವಕಪ್ ತಂಡದ ಭಾಗವಾಗಿದ್ದ ಆಕಾಶ್ ಸಿಂಗ್ ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಎಡಗೈ ವೇಗಿ ಇದುವರೆಗೆ 9 ಲಿಸ್ಟ್ ಎ ಪಂದ್ಯಗಳು ಮತ್ತು ಐದು ಪ್ರಥಮ ದರ್ಜೆ ಪಂದ್ಯಗಳ ಜೊತೆಗೆ 9 ಟಿ 20 ಪಂದ್ಯಗಳನ್ನು ಆಡಿದ್ದಾರೆ ಮತ್ತು 31 ವಿಕೆಟ್‌ಗಳನ್ನು ಹೊಂದಿದ್ದಾರೆ. 20 ಲಕ್ಷಕ್ಕೆ ಮೂಲಬೆಲೆಗೆ ಆಕಾಶ ಸಿಎಸ್ ಕೆ ಸೇರಿದ್ದಾರೆ.
Charging up our pace cartel with all that young potential! Welcome to the pride, Akash! ⚡🦁#WhistlePodu #Yellove 💛 pic.twitter.com/vgd4CeKpGN
— Chennai Super Kings (@ChennaiIPL) March 30, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.