ಭಾರತಕ್ಕಿಲ್ಲ ಜೂ. ಏಶ್ಯನ್‌ ಕುಸ್ತಿ ಚಾಂಪಿಯನ್‌ ಶಿಪ್‌ ಆತಿಥ್ಯ


Team Udayavani, Mar 18, 2019, 12:30 AM IST

s-29.jpg

ಹೊಸದಿಲ್ಲಿ: ಭಾರತ- ಪಾಕಿಸ್ಥಾನ ನಡುವಣ ರಾಜಕೀಯ ಸಂಬಂಧ ಇನ್ನಷ್ಟು ಹದಗೆಟ್ಟಿರುವುದು ಕ್ರೀಡಾ ಕೂಟಗಳ ಆತಿಥ್ಯಕ್ಕೂ ತೊಡರುಗಾಲಾಗಿ ಪರಿಣಮಿಸಿದೆ. ಇದಕ್ಕೆ ಸಾಕ್ಷಿಯೆಂಬಂತೆ, ವಿಶ್ವ ಕುಸ್ತಿ ಸಮಿತಿ “ಯುನೈಟೆಡ್‌ ವರ್ಲ್ಡ್ ರೆಸ್ಲಿಂಗ್‌’ (ಯುಡಬ್ಲ್ಯುಡಬ್ಲ್ಯು) ಮುಂಬರುವ ಜೂನಿಯರ್‌ ಏಶ್ಯನ್‌ ಕುಸ್ತಿ ಚಾಂಪಿಯನ್‌ ಶಿಪ್‌ ಆತಿಥ್ಯದ ಅವಕಾಶವನ್ನು ಭಾರತದಿಂದ ಹಿಂದಕ್ಕೆ ಪಡೆದಿದೆ.

ಈ ಕೂಟದ ಮೊದಲ ಅತಿಥೇಯ ರಾಷ್ಟ್ರ ಲೆಬನಾನ್‌ ಹಿಂದೆ ಸರಿದ ಕಾರಣ ಭಾರತ ಆತಿಥ್ಯ ವಹಿಸಿಕೊಳ್ಳಲು ಒಪ್ಪಿತ್ತು. ಆದರೆ ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪಾಕಿಸ್ಥಾನ ಶೂಟರ್‌ಗಳಿಗೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲು ಭಾರತ ವೀಸಾ ನಿರಾಕರಿಸಿತ್ತು. ಭಾರತದ ಈ ನಡೆಯನ್ನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿ (ಐಒಎ) ಖಂಡಿಸಿ, ಭಾರತಕ್ಕೆ ಯಾವುದೇ ವಿಶ್ವ ಮಟ್ಟದ ಕ್ರೀಡಾಕೂಟಗಳ ಅಯೋಜನೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿತ್ತು. ಐಒಎ ನಡೆಯನ್ನು ಅನುಸರಿಸಿರುವ ಯುಡಬ್ಲ್ಯುಡಬ್ಲ್ಯು ಭಾರತೀಯ ಕುಸ್ತಿ ಫೆಡರೇಶನ್‌ನೊಂದಿಗೆ (ಡಬ್ಲ್ಯುಎಫ್ಐ) ಎಲ್ಲ ಸಂಪರ್ಕವನ್ನು ಕಡಿದುಕೊಳ್ಳಲು ನಿರ್ಧರಿಸಿ, ಜೂನಿಯರ್‌ ಏಶ್ಯನ್‌ ಕುಸ್ತಿ ಚಾಂಪಿಯನ್‌ಶಿಪ್‌ ಆತಿಥ್ಯವನ್ನು ಕಸಿದುಕೊಂಡಿದೆ. 

ಥಾಯ್ಲೆಂಡ್‌ಗೆ ಸ್ಥಳಾಂತರ
“ಜೂನಿಯರ್‌ ಏಶ್ಯನ್‌ ಚಾಂಪಿಯನ್‌ಶಿಪ್‌ ಪಂದ್ಯಾವಳಿಯನ್ನು ಭಾರತ ದಿಂದ ಥಾಯ್ಲೆಂಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ಯುಡಬ್ಲ್ಯು ಡಬ್ಲ್ಯು ಈಗಾಗಲೇ ತಿಳಿಸಿದೆ. ಈ ಕೂಟದ ಆಯೋಜನೆಗೆ ನಾವು ಬಿಡ್‌ ಮಾಡಿರಲಿಲ್ಲ. ಯುಡಬ್ಲ್ಯುಡಬ್ಲ್ಯು-ಏಶ್ಯದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದೆವು. ಆದರೆ ಮುಂದಿನ ವರ್ಷ ನಾವು ಆಯೋಜಿಸಬೇಕು ಎಂದುಕೊಂಡಿರುವ ಪ್ರಮುಖ ಕೂಟಗಳಿಗೆ ಇದು ಸಮಸ್ಯೆ ತಂದೊಡ್ಡಲಿದೆ. ಸರಕಾರ ಇದರ ಬಗ್ಗೆ ಗಮನ ಹರಿಸಬೇಕು. ಆದರೆ ಲೋಕಸಭಾ ಚುನಾವಣೆಯ ಮುನ್ನ ಈ ಸಮಸ್ಯೆ ಬಗೆಹರಿಯಬಹುದೆಂಬ ನಿರೀಕ್ಷೆಯಿಲ್ಲ’ ಎಂದು ಡಬ್ಲ್ಯುಎಫ್ಐನ ಜತೆ ಕಾರ್ಯದರ್ಶಿ ವಿನೋದ್‌ ತೋಮರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.