ಲಿಂಗಾಯತ ನಾಯಕತ್ವಕ್ಕೆ ಶಾ ಜೈ: ಎಚ್‌ಡಿಕೆ ಬ್ರಾಹ್ಮಣ ಸಿಎಂ ಅಸ್ತ್ರಕ್ಕೆ ಪ್ರತ್ಯಸ್ತ್ರ


Team Udayavani, Feb 12, 2023, 1:19 AM IST

ಲಿಂಗಾಯತ ನಾಯಕತ್ವಕ್ಕೆ ಶಾ ಜೈ: ಎಚ್‌ಡಿಕೆ ಬ್ರಾಹ್ಮಣ ಸಿಎಂ ಅಸ್ತ್ರಕ್ಕೆ ಪ್ರತ್ಯಸ್ತ್ರ

ಪುತ್ತೂರು/ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಯೋಗಿಸಿದ್ದ “ಬ್ರಾಹ್ಮಣ ಸಿಎಂ’ ಅಸ್ತ್ರದಿಂದ ಇಕ್ಕಟ್ಟಿಗೆ ಸಿಲುಕಿದ್ದ ರಾಜ್ಯ ಬಿಜೆಪಿ ನಾಯಕರ ರಕ್ಷಣೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮುಂದಾಗಿದ್ದು, ಹಿಂದುತ್ವದ ಭದ್ರ ನೆಲೆಯಾದ ಕರಾವಳಿಯಿಂದಲೇ “ಲಿಂಗಾಯತ ನಾಯಕತ್ವ’ದ ಸಂದೇಶ ರವಾನಿಸಿದ್ದಾರೆ.

ಪುತ್ತೂರಿನಲ್ಲಿ ಶನಿವಾರ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಶ್ಲಾ ಸುತ್ತಲೇ ಸಿಎಂ ಬಸವರಾಜ ಬೊಮ್ಮಾಯಿ ಅವರ ಕೈ ಬಲಪಡಿಸಿ ಎಂದು ಹೇಳಿ ಸಭಿಕರಿಂದ ಚಪ್ಪಾಳೆ ಹಾಕಿಸುವ ಮೂಲಕ ನಾಯಕತ್ವದ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.

ಈ ಮೂಲಕ ಬಿಜೆಪಿಯ ಪ್ರಬಲ ಮತ ಬ್ಯಾಂಕ್‌ ಎಂದೇ ಪರಿಗಣಿಸಲ್ಪಟ್ಟ ಲಿಂಗಾಯತ ಸಮುದಾಯದಲ್ಲಿ ಮೂಡಿದ್ದ ಅನುಮಾನದ ಎಳೆಯನ್ನು ಕರಗಿಸುವುದಕ್ಕೆ ಅಮಿತ್‌ ಶಾ ಮುಂದಾಗಿದ್ದಾರೆ. ಎರಡು ದಿನಗಳ ಹಿಂದೆ ಬಿ.ವೈ. ವಿಜಯೇಂದ್ರ ಅವರಿಗೆ ಸಂಘಟನಾತ್ಮಕ ಜವಾಬ್ದಾರಿ ನೀಡಿದ ಬಳಿಕ ಲಿಂಗಾಯತ ಸಮು ದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಿಜೆಪಿ ನಡೆಸಿದ ಎರಡನೇ ಪ್ರಯತ್ನ ಇದಾಗಿದೆ.

ತಮ್ಮ ಭಾಷಣದಲ್ಲಿ ಯಡಿಯೂರಪ್ಪ ಅವರನ್ನು ಶ್ಲಾಘಿಸಿದ ಶಾ, ಇಂದು ಕರ್ನಾಟಕದಲ್ಲಿ ರೈತರು ಯಡಿಯೂರಪ್ಪನವರನ್ನು ನೆನಪಿಸಿಕೊಳ್ಳು ತ್ತಾರೆ. ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಬಹಳಷ್ಟಿದೆ ಎಂದಾಗ ನೆರೆದಿದ್ದ ಸಭಿಕರು ಕರತಾಡನದೊಂದಿಗೆ ಅನುಮೋದಿಸಿದರು.

ಬಳಿಕ ಚುನಾವಣೆ ಕುರಿತು ಪ್ರಸ್ತಾವಿಸಿದ ಅಮಿತ್‌ ಶಾ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸರಕಾರಗಳಿಂದ ಅಭಿವೃದ್ಧಿ ಸಾಧ್ಯವಿಲ್ಲ. ಅಭಿವೃದ್ಧಿ ಗಾಗಿ ಬಿಜೆಪಿಯನ್ನು ಪೂರ್ಣ ಬಹುಮತ ದೊಂದಿಗೆ ಬೆಂಬಲಿಸಿ. ಪ್ರಧಾನಿ ಮೋದಿಯ ವರನ್ನು ಬೆಂಬಲಿಸಿ, ರಾಜ್ಯದ ಸಿಎಂ ಬೊಮ್ಮಾಯಿ ಯವರ ಕೈಗಳನ್ನು ಬಲಪಡಿಸಿ. ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು.

“ನೀವು ಬಿಜೆಪಿಗೆ ಮತ ಹಾಕುತ್ತೀರಾ? ಜೋರಾಗಿ ಹೇಳಿ’ ಎಂದು ಕಾರ್ಯಕರ್ತ ರನ್ನು, ಸಭಿಕರನ್ನು ಹುರಿದುಂಬಿಸುವುದರ ಜತೆಗೆ “ಬೊಮ್ಮಾಯಿಯವರ ಕೈಗಳನ್ನು ಬಲಪಡಿಸು ತ್ತೀರಾ?’ ಎಂದು ಪ್ರಶ್ನೆ ಕೇಳಿ ಕಾರ್ಯಕರ್ತರು, ಅಭಿಮಾನಿಗಳಿಂದ ಜೈಕಾರ ಹಾಕಿಸಿದರು.

ಉಸ್ತುವಾರಿಗಳ ಜತೆಗೆ “ಪ್ರಧಾನ’ ಸಭೆ
ಬೆಂಗಳೂರು: ರಾಜ್ಯ ಬಿಜೆಪಿ ಚುನಾವಣ ಉಸ್ತುವಾರಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಫೆ. 18ರಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದ್ದು, ಕ್ಷೇತ್ರ ಚುನಾವಣ ಉಸ್ತುವಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆ ಮೂಲಕ ಬಿಜೆಪಿಯ ಚುನಾವಣೆ ತಾಲೀಮು ಇನ್ನಷ್ಟು ಚುರುಕಾಗಲಿದೆ. ಸಮಗ್ರ ಉಸ್ತುವಾರಿಗಳ ಆಗಮನದ ದಿನವೇ ಕ್ಷೇತ್ರವಾರು ಉಸ್ತುವಾರಿಗಳ ಜತೆಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ ಈ ಸಭೆಗೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಡಲಾಗಿದೆ. 224 ಕ್ಷೇತ್ರಗಳ ಉಸ್ತುವಾರಿಗಳಿಗೂ ಮಾಹಿತಿ ನೀಡಲಾಗಿದ್ದು, ವಹಿಸಲಾದ ಕ್ಷೇತ್ರದ ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಬರುವಂತೆ ಸೂಚಿಸಲಾಗಿದೆ. ಈ ಸಭೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಇರುವ ವಾಸ್ತವ ಚಿತ್ರಣದ ಬಗ್ಗೆ ಒಂದು ಹಂತದ ಮಾಹಿತಿ ಲಭ್ಯವಾಗುವುದರಿಂದ ಮುಂದಿನ ತಂತ್ರಗಾರಿಕೆ ದೃಷ್ಟಿಯಿಂದ ಮಹತ್ವದ್ದಾಗಿದೆ.

ಒಂದೇ ಬಾಣ; ನಾಲ್ಕು ಹಕ್ಕಿ !
ಲಿಂಗಾಯತ ಸಮುದಾಯಕ್ಕೆ ಬಿಜೆಪಿ ನೀಡುವ ಆದ್ಯತೆಯಲ್ಲಿ ಕೊರತೆಯಾಗದು ಎಂಬ ಸಂದೇಶವನ್ನು ಶಾ ರವಾನಿಸಿದ್ದಾರೆ. ನಾಯಕತ್ವ ಬದಲಾವಣೆ ಸಾಧ್ಯತೆಯನ್ನೂ ತಳ್ಳಿ ಹಾಕಿ ಚುನಾವಣೆ ಎದುರಿಸುವುದು ಬೊಮ್ಮಾಯಿ ನೇತೃತ್ವದಲ್ಲೇ ಎಂಬುದನ್ನು ಮತ್ತೂಮ್ಮೆ ಖಚಿತಪಡಿಸಿದ್ದಾರೆ. ಕುಮಾರಸ್ವಾಮಿ ಅಸ್ತ್ರಕ್ಕೂ ಈ ಮೂಲಕ ಪ್ರತ್ಯುತ್ತರ ನೀಡಿದಂತಾಗಿದೆ. ಬಿಎಸ್‌ವೈ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೂ ಉತ್ತರ ನೀಡಿದಂತಾಗಿದೆ.

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ
ಸೋಮವಾರ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರವಿವಾರ ಸಂಜೆ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಸೋಮವಾರ ಏರೋ ಇಂಡಿಯಾ ಶೋ-2023 ಉದ್ಘಾಟಿಸಲಿದ್ದಾರೆ.

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.