ಆಸ್ಟ್ರೇಲಿಯನ್ ಓಪನ್: ಮರ್ರೆ, ಜೊಕೊ, ನಿಶಿಕೋರಿ ಔಟ್
Team Udayavani, Jan 5, 2018, 9:06 AM IST
ಲಂಡನ್: ಬ್ರಿಟನ್ನ ಖ್ಯಾತ ಟೆನಿಸ್ ಆಟಗಾರ ಆ್ಯಂಡಿ ಮರ್ರೆ ಮುಂಬರುವ ಆಸ್ಟ್ರೇಲಿಯನ್ ಓಪನ್ ಟೆನಿಸ್ ಕೂಟದಿಂದ ಹಿಂದಕ್ಕೆ ಸರಿದಿದ್ದಾರೆ. ಅವರು ಸೊಂಟ ನೋವಿನಿಂದ ಬಳಲುತ್ತಿರುವುದರಿಂದ ಜ.15ರಿಂದ ಆರಂಭವಾಗಲಿರುವ ಕೂಟದಲ್ಲಿ ಪಾಲ್ಗೊಳ್ಳುತ್ತಿಲ್ಲ
ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ 12 ಗ್ರ್ಯಾನ್ ಸ್ಲಾಮ್ ಗೆದ್ದಿರುವ ಸರ್ಬಿಯಾದ ಜೊಕೊವಿಚ್, ಜಪಾನ್ನ ನಿಶಿಕೋರಿಯಂತಹ ಪ್ರಮುಖರು ಕೂಡ ಕೂಟದಿಂದ ಹಿಂದಕ್ಕೆ ಸರಿದಿರುವುದನ್ನು ಘೋಷಿಸಿದ್ದಾರೆ. ಜೊಕೊವಿಚ್ ಮೊಣಕೈ ನೋವಿನಿಂದ ಬಳಲುತ್ತಿದ್ದಾರೆ. ನಿಶಿಕೋರಿ ಕಳೆದ ಆಗಸ್ಟ್ನಲ್ಲಿ ಗಾಯಕ್ಕೆ ತುತ್ತಾಗಿ ಕೂಟಗಳಿಂದ ದೂರವಿದ್ದರು.
ಒಟ್ಟಾರೆ ಹೊಸ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಬೇಕು ಎಂದು ಕನಸು ಕಾಣುತ್ತಿದ್ದ ದಿಗ್ಗಜ ಆಟಗಾರರಿಗೆ ಈಗ ದೊಡ್ಡ ನಿರಾಸೆಯಾಗಿದೆ ಎನ್ನುವುದಷ್ಟು ಸತ್ಯ. 30 ವರ್ಷದ ಮರ್ರೆ ಕಳೆದ ಕೆಲವು ದಿನಗಳಿಂದ ತೀವ್ರ ಸೊಂಟ ನೋವಿನಿಂದ ಬಳಲುತ್ತಿದ್ದಾರೆ. ಕಳೆದ ವರ್ಷವೂ ಇವರು ಗಾಯಗೊಂಡಿದ್ದರು. ಪ್ರಮುಖ ಎಟಿಪಿ ಕೂಟವೊಂದನ್ನು ಕಳೆದುಕೊಂಡಿದ್ದರು. ಇದೇ ವೇಳೆ ಪ್ರತಿಕ್ರಿಯಿಸಿರುವ ಮರ್ರೆ, ಮೆಲ್ಬರ್ನ್ ಕೂಟದಲ್ಲಿ ಪಾಲ್ಗೊಳ್ಳಲು ಆಗದಿರುವುದಕ್ಕೆ ಬೇಸರವಿದೆ. ಶೀಘ್ರದಲ್ಲೇ ನನ್ನ ಕುಟುಂಬ ಸದಸ್ಯರನ್ನು ಕೂಡಿಕೊಳ್ಳಲಿದ್ದೇನೆ. ಮತ್ತೆ ಟೆನಿಸ್ಗೆ ಮರಳುವ ವಿಶ್ವಾಸವಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.