ಸಿಡ್ನಿ ಪ್ರಶಸ್ತಿ ಗೆದ್ದ ಕೆರ್ಬರ್
Team Udayavani, Jan 14, 2018, 6:00 AM IST
ಸಿಡ್ನಿ: ಮಾಜಿ ನಂಬರ್ ವನ್ ಆಟಗಾರ್ತಿ, ಜರ್ಮನಿಯ ಆ್ಯಂಜೆಲಿಕ್ ಕೆರ್ಬರ್ ಸಿಡ್ನಿ ಇಂಟರ್‌ನ್ಯಾಶನಲ್ ವನಿತಾ ಸಿಂಗಲ್ಸ್ ಟೆನಿಸ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಶನಿವಾರದ ಫೈನಲ್ ಕಾಳಗದಲ್ಲಿ ಅವರು ತವರಿನ ಭರವಸೆಯ ಆಟಗಾರ್ತಿ ಆ್ಯಶ್ಲಿ ಬಾರ್ಟಿ ವಿರುದ್ಧ 6-4, 6-4 ಅಂತರದ ಜಯ ಸಾಧಿಸಿದರು.
ಎರಡು ಬಾರಿಯ ಗ್ರ್ಯಾನ್‌ಸ್ಲಾಮ್ ವಿಜೇತೆಯಾಗಿರುವ ಕೆರ್ಬರ್ 2017ರ ಋತುವನ್ನು ಬಹಳ ನಿರಾಶಾದಾಯಕವಾಗಿ ಮುಗಿಸಿದ್ದರು. ಈಗ 2018ರ ಆರಂಭದಲ್ಲೇ ಯಶಸ್ಸಿನ ರುಚಿ ಅನುಭವಿಸಿದ್ದು, ಆಸ್ಟ್ರೇಲಿಯನ್ ಓಪನ್‌ಗೆ ಹೊಸ ಹುಮ್ಮಸ್ಸಿನಲ್ಲಿ ಸಜ್ಜಾಗಿದ್ದಾರೆ.
29ರ ಹರೆಯದ ಎಡಗೈ ಆಟಗಾರ್ತಿ ಕೆರ್ಬರ್ ಕಳೆದ ಎಪ್ರಿಲ್ ಬಳಿಕ ಆಡುತ್ತಿರುವ ಮೊದಲ ಫೈನಲ್ ಇದಾಗಿದೆ. “ಮತ್ತೆ ಅಮೋಘ ಟೆನಿಸ್ ಪ್ರದರ್ಶನ ನೀಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಕೃತಜ್ಞತೆಗಳು’ ಎಂದು ಕೆರ್ಬರ್ ಗೆಲುವಿನ ಬಳಿಕ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.