ಥಾಣೆ ಕ್ರೀಡಾಂಗಣದಲ್ಲಿ ಅಥ್ಲೀಟ್ಸ್‌ಗೆ ಕಿರಿಕಿರಿ
Team Udayavani, Feb 2, 2019, 2:23 AM IST
ಥಾಣೆ: ಕ್ರಿಕೆಟ್ ಕೂಟಕ್ಕೆ ಅವಕಾಶ ನೀಡಿದ್ದರಿಂದ ಅಥ್ಲೀಟ್‌ಗಳಿಗೆ ಥಾಣೆಯ ಕ್ರೀಡಾಂಗಣದೊಳಕ್ಕೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. ಇದರಿಂದಾಗಿ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತೆ ರಿಲೇ ಓಟಗಾರ್ತಿ ಅದಿತಿ ಸೇರಿದಂತೆ 200ಕ್ಕೂ ಹೆಚ್ಚು ಅಥ್ಲೀಟ್‌ಗಳು ಸಮಸ್ಯೆಗೆ ಒಳಗಾಗಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಸ್ಪೈಕ್ ಶೂ ಹಾಕುವುದರಿಂದ ಹುಲ್ಲು ಹಾಳಾಗುತ್ತದೆ ಎನ್ನುವ ಕಾರಣಕ್ಕೆ ಕ್ರೀಡಾಂಗಣದ ಬಾಗಿಲನ್ನೇ ಮುಚ್ಚಿದ್ದಾರೆ. ಎಂದಿನಂತೆ ಅಭ್ಯಾಸಕ್ಕೆ ಬಂದ ಅಥ್ಲೀಟ್‌ಗಳಿಗೆ ಕ್ರೀಡಾಂಗಣದೊಳಗೆ ಪ್ರವೇಶಿಸಲು ಭದ್ರತಾ ಸಿಬ್ಬಂದಿಗಳು ಅವಕಾಶ ನೀಡಲಿಲ್ಲ. ಈ ವೇಳೆ ಮಾತಿನ ಚಕಮಕಿಯೂ ನಡೆದಿದೆ. ಅಥ್ಲೀಟ್‌ಗಳಿಗಾಗಿ ಇರುವ ಕ್ರೀಡಾಂಗಣವನ್ನು ಕ್ರಿಕೆಟ್‌ಗೆ ಏಕೆ ಕೊಟ್ಟಿದ್ದೀರಿ ಎನ್ನುವ ಪ್ರಶ್ನೆಗಳು ಕೂಡ ಕೇಳಿ ಬಂದಿವೆ. ಮುಂದೆ ಇದೇ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸಿ ಐಪಿಎಲ್ ಕೂಟದ ಕೆಲವು ಪಂದ್ಯಗಳನ್ನು ಆಯೋಜಿಸುವ ಕುರಿತಂತೆ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.