ಏಷ್ಯಾಕಪ್ ವಿಚಾರ : ಪಾಕ್ ಗೆ ತಿರುಗೇಟು ನೀಡಿದ ಕ್ರೀಡಾ ಸಚಿವ ಠಾಕೂರ್
ಭಾರತ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ....
Team Udayavani, Oct 20, 2022, 3:12 PM IST
ನವದೆಹಲಿ : 2023ರಲ್ಲಿ ನಡೆಯಲಿರುವ ಏಷ್ಯಾಕಪ್‌ಗೆ ಸಂಬಂಧಿಸಿದಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಹೇಳಿಕೆಗೆ ಪಾಕಿಸ್ಥಾನದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ತಿರುಗೇಟು ನೀಡಿದ್ದು, ”ಪಾಕಿಸ್ಥಾನದಲ್ಲಿ ಭದ್ರತಾ ಸಮಸ್ಯೆಗಳಿದ್ದು, ಮುಂದಿನ ವರ್ಷ ಭಾರತ ಪ್ರವಾಸ ಕೈಗೊಳ್ಳುವ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸಲಿದೆ” ಎಂದು ಹೇಳಿದ್ದಾರೆ.
”ನೀವು ಯಾವುದೇ ಕ್ರೀಡೆಯಲ್ಲಿ ಭಾರತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಭಾರತ ಕ್ರೀಡೆಗೆ ಅದರಲ್ಲೂ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದೆ. ಆದ್ದರಿಂದ, ಮುಂದಿನ ವರ್ಷ ವಿಶ್ವಕಪ್ ಆಯೋಜಿಸುತ್ತಿರುವುದು ಭವ್ಯವಾದ ಮತ್ತು ಐತಿಹಾಸಿಕ ಘಟನೆಯಾಗಿದೆ. ಪಾಕಿಸ್ಥಾನದಲ್ಲಿ ಭದ್ರತಾ ಸಮಸ್ಯೆಗಳಿರುವುದರಿಂದ ಗೃಹ ಸಚಿವಾಲಯ ನಿರ್ಧಾರ ಕೈಗೊಳ್ಳಲಿದೆ. ಇದು ಕೇವಲ ಕ್ರಿಕೆಟ್ ಅಲ್ಲ. ಭಾರತ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ” ಎಂದು ಪಿಸಿಬಿಗೆ ತಿರುಗೇಟು ನೀಡಿದ್ದಾರೆ.
”ಇದು ಬಿಸಿಸಿಐನ ವಿಷಯವಾಗಿದ್ದು, ಅವರು ಈ ಬಗ್ಗೆ ಪ್ರತಿಕ್ರಿಯಿಸುತ್ತಾರೆ. ಭಾರತವು ಕ್ರೀಡಾ ಶಕ್ತಿಯಾಗಿದೆ, ಅಲ್ಲಿ ಅನೇಕ ವಿಶ್ವಕಪ್‌ಗಳನ್ನು ಆಯೋಜಿಸಲಾಗಿದೆ. 2023ರಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಕೂಡ ನಡೆಯಲಿದೆ ಮತ್ತು ಪ್ರಪಂಚದಾದ್ಯಂತದ ಎಲ್ಲಾ ದೊಡ್ಡ ತಂಡಗಳು ಇದರಲ್ಲಿ ಭಾಗವಹಿಸಲಿವೆ ಎಂದು ಖೇಲೋ ಇಂಡಿಯಾ ಯೂತ್ ಗೇಮ್ಸ್ ಘೋಷಣೆಯ ಸಂದರ್ಭದಲ್ಲಿ ಠಾಕೂರ್ ಹೇಳಿಕೆ ನೀಡಿದ್ದಾರೆ.
ಮುಂದಿನ ವರ್ಷದ ಏಷ್ಯಾ ಕಪ್‌ಗಾಗಿ ಭಾರತ ತಂಡವು ಪಾಕಿಸ್ಥಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆಯ ಹಿನ್ನೆಲೆಯಲ್ಲಿ ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಆಕ್ಷೇಪ ವ್ಯಕ್ತಪಡಿಸಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತುರ್ತು ಸಭೆಯನ್ನು ಕರೆಯಲು ವಿನಂತಿಸಿದ ಒಂದು ದಿನದ ನಂತರ ಸಚಿವರಿಂದ ಈ ಪ್ರತಿಕ್ರಿಯೆ ಬಂದಿದೆ.
ಭಾರತವು ಪಂದ್ಯಾವಳಿಗಾಗಿ ಪಾಕಿಸ್ಥಾನಕ್ಕೆ ಬರದಿದ್ದರೆ ಅಂತಹ ಕ್ರಮವು ಏಕದಿನ ವಿಶ್ವಕಪ್‌ನಲ್ಲಿ ನಮ್ಮ ಭಾಗವಹಿಸುವಿಕೆಗೆ ಧಕ್ಕೆ ತರಬಹುದು ಎಂದು ಪಿಸಿಬಿ ಹೇಳಿ ತುರ್ತು ಸಭೆ ಕರೆಯಲು ಕರೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
Head Coach: ವೆಸ್ಟ್ ಇಂಡೀಸ್ ಎಲ್ಲ ಮಾದರಿಗೂ ಡ್ಯಾರನ್ ಸಮ್ಮಿ ಕೋಚ್
Ind vs WI T20: ದ್ವಿತೀಯ ಟಿ20 ಪಂದ್ಯದಲ್ಲಿ ತಿರುಗಿ ಬಿದ್ದ ವೆಸ್ಟ್ ಇಂಡೀಸ್ ವನಿತೆಯರು
NZ vs ENG Test: ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್‌ಗೆ 423 ರನ್ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.