ಮುಂಬೈ ಇಂಡಿಯನ್ಸ್- ಪಂಜಾಬ್ ಕಿಂಗ್ಸ್ ಫ್ರಾಂಚೈಸಿಗಳಿಗೆ ಹೊಸ ಕೋಚ್ ಗಳ ನೇಮಕ
Team Udayavani, Sep 16, 2022, 1:40 PM IST
ಮುಂಬೈ: ಮುಂಬರುವ ಐಪಿಎಲ್ ಗೆ ಈಗಾಗಲೇ ತಯಾರಿ ಆರಂಭವಾಗಿದೆ. ಫ್ರಾಂಚೈಸಿಗಳು ತಮ್ಮ ಸಹಾಯಕ ಸಿಬ್ಬಂದಿಗಳ ಬದಲಾವಣೆ ಮಾಡಿಕೊಳ್ಳುತ್ತಿವೆ. ಇತ್ತೀಚೆಗೆ ಸನ್ ರೈಸರ್ಸ್ ಹೈದರಾಬಾದ್ ತಂಡವು ಬ್ರಿಯಾನ್ ಲಾರಾ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿದ ಬೆನ್ನಲ್ಲೇ ಇದೀಗ, ಮುಂಬೈ ಇಂಡಿಯನ್ಸ್- ಪಂಜಾಬ್ ಕಿಂಗ್ಸ್ ಫ್ರಾಂಚೈಸಿಗಳು ತಮ್ಮ ಮುಖ್ಯ ಕೋಚ್ ಗಳನ್ನು ಘೋಷಿಸಿದೆ.
ಮುಂಬೈ ಇಂಡಿಯನ್ಸ್ ಶುಕ್ರವಾರ ಮುಂದಿನ ಐಪಿಎಲ್ ನಿಂದ ತಮ್ಮ ಹೊಸ ಮುಖ್ಯ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ಮಾರ್ಕ್ ಬೌಚರ್ ನೇಮಕವನ್ನು ದೃಢಪಡಿಸಿದೆ. ಈ ವಾರದ ಆರಂಭದಲ್ಲಿ, ಕ್ರಿಕೆಟ್ ಸೌತ್ ಆಫ್ರಿಕಾ ಕೋಚ್ ಹುದ್ದೆಯಿಂದ ಬೌಚರ್ ಕೆಳಗಿಳಿಯುವುದಾಗಿ ಘೋಷಿಸಿದ್ದರು.
ಇದನ್ನೂ ಓದಿ:ಕಳ್ಳನ ಫಜೀತಿ…ರೆಡ್ ಹ್ಯಾಂಡ್ ಸಿಕ್ಕಿಬಿದ್ದು ರೈಲು ಕಿಟಕಿಗೆ ಜೋತು 10 ಕಿ.ಮೀ ಸಾಗಿದ..!
ಈ ವಾರದ ಆರಂಭದಲ್ಲಿ, ಮುಂಬೈ ಇಂಡಿಯನ್ಸ್‌ನ ಮಾಜಿ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಅವರನ್ನು ಫ್ರಾಂಚೈಸಿಯು ಗ್ಲೋಬಲ್ ಪರ್ಫಾರ್ಮೆನ್ಸ್ ಮುಖ್ಯಸ್ಥರನ್ನಾಗಿ ನೇಮಿಸಿತು. ಕ್ರಿಕೆಟ್ ಕಾರ್ಯಾಚರಣೆಯ ನಿರ್ದೇಶಕರಾಗಿದ್ದ ಜಹೀರ್ ಖಾನ್ ಅವರಿಗೂ ಹೊಸ ಜವಾಬ್ದಾರಿಯನ್ನು ನೀಡಿದ್ದು, ಫ್ರಾಂಚೈಸಿಯ ಗ್ಲೋಬಲ್ ಕ್ರಿಕೆಟ್ ಡೆವಲಪ್‌ಮೆಂಟ್ ಮುಖ್ಯಸ್ಥರಾಗಿರುತ್ತಾರೆ.
Presenting आपले नवीन Head Coach – ???? ??????? ?
Paltan, drop a ? to welcome the ?? legend to our #OneFamily ?#DilKholKe #MumbaiIndians @markb46 @OfficialCSA pic.twitter.com/S6zarGJmNM
— Mumbai Indians (@mipaltan) September 16, 2022
ಪಂಜಾಬ್ ಗಿಲ್ಲ ಕುಂಬ್ಳೆ ಬಲ: ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಈ ಬಾರಿ ಕೋಚ್ ಬದಲಾವಣೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಇದೀಗ ಅಧಕೃತವಾಗಿದ್ದು, ಟ್ರೆವರ್ ಬೇಲಿಸ್ ಅವರನ್ನು ಪಂಜಾಬ್ ಕಿಂಗ್ಸ್ ತಮ್ಮ ಹೊಸ ಮುಖ್ಯ ಕೋಚ್ ಆಗಿ ನೇಮಿಸಿದೆ.
ಮುಖ್ಯ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಅವರ ಬದಲಿಗೆ ಟ್ರೆವರ್ ಬೇಲಿಸ್ ಅವರನ್ನು ನೇಮಕ ಮಾಡಲಾಗಿದೆ. 2019ರಲ್ಲಿ ಇಂಗ್ಲೆಂಡ್ ಏಕದಿನ ವಿಶ್ವಕಪ್ ಗೆದ್ದಾಗ ಬೇಲಿಸ್ ಅವರು ಇಂಗ್ಲೆಂಡ್ ಕೋಚ್ ಆಗಿದ್ದರು. ಅಲ್ಲದೆ ಕೋಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆದಾಗ ಮತ್ತು ಬಿಬಿಎಲ್ ನಲ್ಲಿ ಸಿಡ್ನಿ ಸಿಕ್ಸರ್ ಚಾಂಪಿಯನ್ ಆದಾಗ ಆ ತಂಡಗಳ ಕೋಚ್ ಆಗಿದ್ದರು.
? New Coach Alert ?
IPL winner ✅
ODI World Cup winner ✅
CLT20 winner ✅Here’s wishing a very warm welcome to our new Head Coach, Trevor Bayliss. ?
Here’s looking forward to a successful partnership! ?#PunjabKings #SaddaPunjab #TrevorBayliss #HeadCoach pic.twitter.com/UKdKi2Lefi
— Punjab Kings (@PunjabKingsIPL) September 16, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.