ಆರ್ಚರಿ ಅಸೋಸಿಯೇಶನ್ ಅಮಾನತು
ಮಾರ್ಗದರ್ಶಿ ಸೂತ್ರ ಪಾಲಿಸದ ಹಿನ್ನೆಲೆಯಲ್ಲಿ ಈ ಕ್ರಮ
Team Udayavani, Aug 9, 2019, 9:28 AM IST
ಕೋಲ್ಕತಾ: ಎರಡು ಸಮಾನಾಂತರ ಮಂಡಳಿ ಗಳನ್ನು ಚುನಾಯಿಸುವ ಮೂಲಕ ಮಾರ್ಗದರ್ಶಿ ಸೂತ್ರವನ್ನು ಪಾಲಿಸದ ಭಾರತೀಯ ಆರ್ಚರಿ ಅಸೋಸಿಯೇಶನನ್ನು (ಎಎಐ) ಗುರುವಾರ “ವಿಶ್ವ ಆರ್ಚರಿ’ (ಡಬ್ಲ್ಯುಎ) ಅಮಾನತುಗೊಳಿಸಿದೆ; ಈ ತಿಂಗಳ ಅಂತ್ಯದೊಳಗೆ ಸಮಸ್ಯೆ ಪರಿಹರಿಸುವಂತೆ ಸೂಚಿಸಿದೆ.
ಅಮಾನತು ನಿರ್ಧಾರ ಸೋಮವಾರದಿಂದ ಜಾರಿಗೆ ಬರಲಿದೆ. ಆದರೆ ಆ. 19ರಿಂದ 25ರ ವರೆಗೆ ಮ್ಯಾಡ್ರಿಡ್‌ನಲ್ಲಿ ನಡೆಯಲಿರುವ ವಿಶ್ವ ಆರ್ಚರಿ ಯೂತ್ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಬಿಲ್ಗಾರರು ಕೊನೆಯ ಸಲ ಭಾರತೀಯ ಧ್ವಜದಡಿ ಭಾಗವಹಿಸಬಹುದಾಗಿದೆ.
ಜೂನ್‌ನಲ್ಲೇ ನಿರ್ಧಾರ
ಎಎಐಯನ್ನು ಅಮಾನತು ಗೊಳಿಸುವ ನಿರ್ಧಾರವನ್ನು ವಿಶ್ವ ಆರ್ಚರಿ ಜೂನ್‌ನಲ್ಲೇ ತೆಗೆದುಕೊಂಡಿತ್ತು. ಜುಲೈ ಅಂತ್ಯದೊಳಗೆ ಸಮಸ್ಯೆ ಪರಿಹರಿಸಲು ಡಬ್ಲ್ಯುಎ ಕಾರ್ಯಕಾರಿ ಮಂಡಳಿ ಗಡು ವಿಧಿಸಿತ್ತು. ಆದರೆ ಯಾವುದೇ ಬೆಳವಣಿಗೆ ಕಾಣದ ಹಿನ್ನೆಲೆಯಲ್ಲಿ ಅಮಾನತು ಆದೇಶವನ್ನು ಜಾರಿಗೊಳಿಸಲಾಗಿದೆ ಎಂದು ಡಬ್ಲ್ಯುಎ ಪ್ರಧಾನ ಕಾರ್ಯದರ್ಶಿ ಟಾಮ್ ಡೀಲೆನ್ ತಿಳಿಸಿದ್ದಾರೆ.
ಆಗಸ್ಟ್ ತಿಂಗಳೊಳಗೆ ಯಾವುದೇ ಪರಿಹಾರ ಕಾಣದಿದ್ದರೆ ಮುಂಬರುವ ಏಶ್ಯನ್ ಚಾಂಪಿಯನ್‌ಶಿಪ್ ಮತ್ತು ಏಶ್ಯನ್ ಪ್ಯಾರಾ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಬಿಲ್ಗಾರರು ಭಾಗವಹಿಸುವ ಬಗ್ಗೆ ಕಾರ್ಯಕಾರಿ ಸಮಿತಿ ನಿರ್ಧಾರ ತೆಗೆದು ಕೊಳ್ಳಲಿದೆ ಎಂದು ಡೀಲೆನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.