ICC rankings ; ನಂಬರ್ 1 ಸ್ಥಾನ ಉಳಿಸಿಕೊಂಡ ಅಶ್ವಿನ್, ಬುಮ್ರಾ 4ನೇ ಸ್ಥಾನಕ್ಕೆ

Team Udayavani, Jan 31, 2024, 4:46 PM IST

1-ssadsad

ದುಬೈ: ಬುಧವಾರ ಬಿಡುಗಡೆಯಾದ ಇತ್ತೀಚಿನ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಭಾರತದ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಕಾಯ್ದುಕೊಂಡಿದ್ದು,ವೇಗಿ ಜಸ್ಪ್ರೀತ್ ಬುಮ್ರಾ ನಾಲ್ಕನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತದ 28 ರನ್‌ಗಳ ಸೋಲಿನಲ್ಲಿಯೂ ಆರು ವಿಕೆಟ್‌ಗಳನ್ನು ಕಬಳಿಸಿದ್ದ ಅಶ್ವಿನ್ 853 ರೇಟಿಂಗ್ ಪಾಯಿಂಟ್‌ ಗಳಿಸಿದ್ದಾರೆ, ಆರು ವಿಕೆಟ್‌ಗಳನ್ನು ಪಡೆದ ವೇಗಿ ಬುಮ್ರಾ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.

ಬೌಲಿಂಗ್ ಪಟ್ಟಿಯಲ್ಲಿ ಅಗ್ರ 10 ರಲ್ಲಿರುವ ಮೂರನೇ ಭಾರತೀಯ, ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಆರನೇ ಸ್ಥಾನದಲ್ಲಿದ್ದಾರೆ. ಜಡೇಜಾ ಅವರು ಟೆಸ್ಟ್ ಆಲ್‌ರೌಂಡರ್ ಆಗಿ ಆಗ್ರ ಶ್ರೇಯಾಂಕದಲ್ಲಿದ್ದಾರೆ.ಆಲ್‌ರೌಂಡರ್ ಇಂಗ್ಲೆಂಡ್ ನ ಜೋ ರೂಟ್ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಹೈದರಾಬಾದ್ ಟೆಸ್ಟ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ್ದರು.

ಬೌಲಿಂಗ್ ಪಟ್ಟಿಯಲ್ಲಿ ರೂಟ್ ಅವರು ಅಶ್ವಿನ್ ಮತ್ತು ಶಕೀಬ್-ಅಲ್-ಹಸನ್ ನಂತರದ ಸ್ಥಾನದಲ್ಲಿದ್ದಾರೆ, ಅಕ್ಷರ್ ಪಟೇಲ್ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬ್ಯಾಟ್ಸ್ ಮ್ಯಾನ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ ಮತ್ತು ಅಗ್ರ 10 ಬ್ಯಾತ್ಸ್ ಮ್ಯಾನ್ ಗಳ ಪೈಕಿ ಏಕೈಕ ಭಾರತೀಯ ಆಟಗಾರರಾಗಿದ್ದಾರೆ. ಭಾರತದ ವಿರುದ್ದದ ಟೆಸ್ಟ್ ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿಭರ್ಜರಿ 196 ರನ್‌ಗಳಿಸಿ ಭಾರತಕ್ಕೆ ಶಾಕ್ ನೀಡಿದ್ದ ಓಲಿ ಪೋಪ್ 20 ಸ್ಥಾನಗಳ ಜಿಗಿತದೊಂದಿಗೆ 15 ನೇ ಸ್ಥಾನಕ್ಕೆ ತಲುಪಿದ್ದಾರೆ.

ಪೋಪ್ ಅವರ ಇಂಗ್ಲೆಂಡ್ ತಂಡದ ಸಹ ಆಟಗಾರ ಬೆನ್ ಡಕೆಟ್ ಅವರು ಭಾರತದ ವಿರುದ್ಧ 35 ಮತ್ತು 47 ರನ್ ಗಳಿಸಿದ ನಂತರ ಐದು ಸ್ಥಾನಗಳನ್ನು ಪ್ರಗತಿ ಸಾಧಿಸಿ 22 ನೇ ಸ್ಥಾನಕ್ಕೇರಿದ್ದಾರೆ.

ಗಬ್ಬಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನ ಆರಂಭಿಕ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಗಳಿಸಿದ ನಂತರ ಆಸ್ಟ್ರೇಲಿಯದ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಎರಡು ಸ್ಥಾನಗಳ ಪ್ರಗತಿ ಸಾಧಿಸಿ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ.

ಆಸ್ಟ್ರೇಲಿಯ ವಿರುದ್ಧ ಅಮೋಘ ಆಟದ ನಂತರ ಮೂವರು ವೆಸ್ಟ್ ಇಂಡೀಸ್ ವೇಗಿಗಳು ತಮ್ಮ ಶ್ರೇಯಾಂಕದಲ್ಲಿ ಪ್ರಗತಿ ಕಂಡಿದ್ದಾರೆ. ಕೆಮರ್ ರೋಚ್ ಎರಡು ಸ್ಥಾನ ಮೇಲೇರಿ 17ನೇ ಸ್ಥಾನಕ್ಕೆ ತಲುಪಿದ್ದು, ಅಲ್ಜಾರಿ ಜೋಸೆಫ್ ನಾಲ್ಕು ಸ್ಥಾನ ಮೇಲೇರಿ 33ನೇ ಸ್ಥಾನಕ್ಕೆ ತಲುಪಿದ್ದಾರೆ ಮತ್ತು ಗಬ್ಬಾದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಶಮರ್ ಜೋಸೆಫ್ 42 ಸ್ಥಾನಗಳ ಏರಿಕೆ ಕಂಡು ಶ್ರೇಯಾಂಕದಲ್ಲಿ 50ನೇ ಸ್ಥಾನಕ್ಕೆ ತಲುಪಿದ್ದಾರೆ.

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.