ಐಸಿಸಿ ರ್ಯಾಂಕಿಂಗ್ ನಲ್ಲಿ ಮೇಲೇರಿದ ರವಿ ಅಶ್ವಿನ್, ಅಯ್ಯರ್ ಮತ್ತು ಉಮೇಶ್
Team Udayavani, Dec 28, 2022, 3:58 PM IST
ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿ ಅಂತ್ಯವಾದ ಕಾರಣದಿಂದ ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಬಿಡುಗಡೆ ಮಾಡಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ರವಿಚಂದ್ರನ್ ಅಶ್ವಿನ್ ಮತ್ತು ಶ್ರೇಯಸ್ ಅಯ್ಯರ್ ಈ ಬಾರಿ ಉತ್ತಮ ಪ್ರಗತಿ ಸಾಧಿಸಿದ್ದಾರೆ.
ಸ್ಪಿನ್ ಬೌಲರ್ ಅಶ್ವಿನ್ ಬೌಲಿಂಗ್ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ್ದು, ಟೆಸ್ಟ್ ಬೌಲಿಂಗ್ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಜಂಟಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಆದರೆ ಅವರು ಆಲ್ ರೌಂಡರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಇಲ್ಲಿ ರವೀಂದ್ರ ಜಡೇಜಾ ಮೊದಲ ಸ್ಥಾನದಲ್ಲಿದೆ.
ಇದನ್ನೂ ಓದಿ:ಜನಸೇವೆಯ ನಾಟಕವಾಡುವ ಗಾಲಿ ರೆಡ್ಡಿ ರಾಜ್ಯದ ಜನತೆಯ ಕೆಲ ಪ್ರಶ್ನೆಗೆ ಉತ್ತರಿಸಲಿ: ಜೆ. ಭಾರಧ್ವಾಜ್
ಈತನ್ಮಧ್ಯೆ, ಅಯ್ಯರ್ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಗೆ ಏರಿದ್ದಾರೆ. ಟೆಸ್ಟ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಯ್ಯರ್ 10 ಸ್ಥಾನ ಮೇಲೆರಿದ್ದು 16ನೇ ರ್ಯಾಂಕ್ ನಲ್ಲಿದ್ದಾರೆ.
ಉಮೇಶ್ ಯಾದವ್ ಅಂತಿಮ ಟೆಸ್ಟ್‌ನಲ್ಲಿ ಐದು ವಿಕೆಟ್‌ಗಳನ್ನು ಉರುಳಿಸಿದ ನಂತರ ಬೌಲರ್‌ಗಳ ಪಟ್ಟಿಯಲ್ಲಿ ಏರಿದರು. ಅವರು ಬೌಲರ್ ಗಳ ಪಟ್ಟಿಯಲ್ಲಿ 5 ಸ್ಥಾನಗಳನ್ನು 33 ನೇ ಸ್ಥಾನಕ್ಕೆ ತಲುಪಿದ್ದಾರೆ.
India stars on the rise in the @MRFWorldwide ICC Men’s Test Player Rankings after thrilling win over Bangladesh 🔥
Details 👇 https://t.co/FbVElpzVjz
— ICC (@ICC) December 28, 2022
ವಿಶೇಷವೆಂದರೆ, ಬಾಂಗ್ಲಾದೇಶದ ಆಟಗಾರರು ಟೆಸ್ಟ್ ರ್ಯಾಂಕಿಂಗ್‌ನಲ್ಲಿಯೂ ಲಾಭ ಗಳಿಸಿದ್ದಾರೆ. ಢಾಕಾ ಟೆಸ್ಟ್‌ನ ಎರಡನೇ ಇನ್ನಿಂಗ್ಸ್ ನಲ್ಲಿ 73 ರನ್ ಗಳಿಸಿದ ನಂತರ ಲಿಟ್ಟನ್ ದಾಸ್ ಬ್ಯಾಟರ್ ಗಳ ಪಟ್ಟಿಯಲ್ಲಿ ಎರಡು ಸ್ಥಾನ ಮೇಲೇರಿ ಈಗ 702 ರೇಟಿಂಗ್‌ಗಳೊಂದಿಗೆ 12 ನೇ ಸ್ಥಾನದಲ್ಲಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ನಾಲ್ಕು ವಿಕೆಟ್ ಗಳನ್ನು ಕಬಳಿಸಿದ ಸ್ಪಿನ್ ಬೌಲರ್ ತೈಜುಲ್ ಇಸ್ಲಾಂ ಬೌಲರ್ ಗಳ ಪಟ್ಟಿಯಲ್ಲಿ ಎರಡು ಸ್ಥಾನಗಳ ಜಿಗಿತದೊಂದಿಗೆ 28 ನೇ ಸ್ಥಾನವನ್ನು ತಲುಪಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.