ಗ್ರ್ಯಾಂಡ್‌ ಫಿನಾಲೆಗೂ ಮುನ್ನ ಅಫ್ಘಾನ್‌ ಟೆಸ್ಟ್‌


Team Udayavani, Sep 25, 2018, 12:37 PM IST

afg.jpg

ದುಬಾೖ: ಏಶ್ಯ ಕಪ್‌ ಕ್ರಿಕೆಟ್‌ನಲ್ಲಿ ಸೋಲಿಲ್ಲದ ಸರದಾರನಾಗಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿರುವ ಭಾರತ, ಮಂಗಳವಾರದ ತನ್ನ ಅಂತಿಮ ಸೂಪರ್‌-4 ಪಂದ್ಯದಲ್ಲಿ ಅಫ್ಘಾನಿಸ್ಥಾನ ವಿರುದ್ಧ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಲಿದೆ. ರವಿವಾರ ಪಾಕಿಸ್ಥಾನವನ್ನು ಸದೆಬಡಿದ ರೀತಿಯನ್ನು ಗಮನಿಸಿದಾಗ ಟೀಮ್‌ ಇಂಡಿಯಾ ಅಫ್ಘಾನ್‌ ತಂಡಕ್ಕೂ ಅಂಜಿಕೆ ಹುಟ್ಟಿಸುವುದು ಖಚಿತ ಎನ್ನಲಡ್ಡಿಯಿಲ್ಲ.

ಈಗಾಗಲೇ ಫೈನಲ್‌ ಪ್ರವೇಶಿಸಿರುವ ಭಾರತಕ್ಕೆ, ಹಾಗೆಯೇ ಕೂಟದಿಂದ ಹೊರಬಿದ್ದಿರುವ ಅಫ್ಘಾನಿಸ್ಥಾನಕ್ಕೆ ಇದು ಮಹತ್ವದ ಪಂದ್ಯವೇನಲ್ಲ. ಇಲ್ಲಿನ ಫ‌ಲಿತಾಂಶದಿಂದ ಇತ್ತಂಡಗಳಿಗೆ ಆಗಬೇಕಾದ್ದೇನೂ ಇಲ್ಲ. ಆದರೆ ಇದು ಪ್ರತಿಷ್ಠೆಯ ಕಾಳಗವೆಂಬುದು ಸುಳ್ಳಲ್ಲ. ಬದ್ಧ ಎದುರಾಳಿ ಪಾಕಿಸ್ಥಾನಕ್ಕೇ 2 ಸಲ ಶಾಕ್‌ ಟ್ರೀಟ್‌ಮೆಂಟ್‌ ನೀಡಿರುವ ಭಾರತ, ಅಫ್ಘಾನಿಸ್ಥಾನದಂಥ ಅನನುಭವಿ ತಂಡದ ವಿರುದ್ಧ ಜಾರದಂತೆ ಎಚ್ಚರ ವಹಿಸಬೇಕಿದೆ. ಸೋತರೆ ಮರ್ಯಾದೆ ಪ್ರಶ್ನೆ!

ಹಾಗೆಯೇ ಈಗಾಗಲೇ ನಿರ್ಗಮಿ ಸಿದರೂ ಭಾರತದ ವಿರುದ್ಧ ಗೆದ್ದರೆ ಅದು ಅಫ್ಘಾನಿಸ್ಥಾನಕ್ಕೆ ಚಾಂಪಿಯನ್‌ ಆದಷ್ಟೇ ಸಂಭ್ರಮ ತರುವ ಸಂಗತಿ. ಕಾರಣ, ಭಾರತ ಫೈನಲಿಸ್ಟ್‌ ತಂಡ ತಾನೆ! ಅಸYರ್‌ ಅಫ್ಘಾನ್‌ ಬಳಗ ಇಂಥದೊಂದು ಪ್ರಯತ್ನಕ್ಕೆ ಮುಂದಾಗುವುದರಲ್ಲಿ ಅನುಮಾನವಿಲ್ಲ.

ಭಾರತದ ಮೀಸಲು ಸಾಮರ್ಥ್ಯ ಪರೀಕ್ಷೆ ?
ಫೈನಲ್‌ ಟಿಕೆಟ್‌ ಲಭಿಸಿರುವುದರಿಂದ ಈ ಪಂದ್ಯಕ್ಕಾಗಿ ಭಾರತ ತನ್ನ ಮೀಸಲು ಸಾಮರ್ಥ್ಯವನ್ನು ಪರಿಚಯಿಸುವ ಸಾಧ್ಯತೆ ಇದೆ. ಮುಖ್ಯವಾಗಿ ಮಧ್ಯಮ ಕ್ರಮಾಂಕದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಕೊಳ್ಳಬಹುದು. ಸರಣಿಯುದ್ದಕ್ಕೂ ಆರಂಭಿಕರಾದ ಶಿಖರ್‌ ಧವನ್‌ (327) ಮತ್ತು ರೋಹಿತ್‌ ಶರ್ಮ (269) ಅವರೇ ರನ್‌ ಪ್ರವಾಹ ಹರಿಸುತ್ತ ಬಂದಿದ್ದಾರೆ. ಉಳಿದವರಿಗೆ ಹೆಚ್ಚಿನ ಅವಕಾಶ ಲಭಿಸಿದರೆ ಹೇಗೆ ಬ್ಯಾಟಿಂಗ್‌ ನಡೆಸಿಯಾರೆಂಬ ಪ್ರಶ್ನೆಗೆ ತುರ್ತಾಗಿ ಉತ್ತರ ಕಂಡುಕೊಳ್ಳಬೇಕಿದೆ.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.