Women’s Asia Cup ಇಂದು ಸೆಮಿಫೈನಲ್ ಹೋರಾಟ: ಭಾರತ vs ಬಾಂಗ್ಲಾ, ಪಾಕ್ vs ಲಂಕಾ
Team Udayavani, Jul 26, 2024, 6:40 AM IST
ಡಂಬುಲ: ವನಿತಾ ಏಷ್ಯಾ ಕಪ್ ಕ್ರಿಕೆಟ್ ಕೂಟದ ಸೆಮಿಫೈನಲ್ ಹೋರಾಟ ಶುಕ್ರವಾರ ಡಂಬುಲದಲ್ಲಿ ನಡೆಯಲಿದೆ. ಮೊದಲ ಸೆಮಿಫೈನಲ್‌ನಲ್ಲಿ ಪ್ರಶಸ್ತಿ ಗೆಲ್ಲುವ ಹಾಟ್ ಫೇವರಿಟ್ ಭಾರತವು ಬಾಂಗ್ಲಾದೇಶವನ್ನು ಎದುರಿಸಲಿದೆ. ಎರಡನೇ ಸೆಮಿಫೈನಲ್ಸ್ ಪಾಕಿಸ್ಥಾನ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಜು. 28ರಂದು ಫೈನಲ್ ಹೋರಾಟ ಜರಗಲಿದೆ.
ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಶ್ರೇಷ್ಠ ಆಟಗಾರ್ತಿಯರನ್ನು ಒಳಗೊಂಡ ಭಾರತ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಲೀಗ್ ಹಂತದಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಅಮೋಘ ಗೆಲುವು ದಾಖಲಿಸಿದ ಭಾರತ ಸೆಮಿಫೈನಲಿಗೇರಿದೆ. ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮತಿ ಮಂಧನಾ ಅವರ ಪ್ರಚಂಡ ಫಾರ್ಮ್ ಸೆಮಿಫೈನಲ್‌ನಲ್ಲೂ ಮುಂದುವರಿಯುವ ನಿರೀಕ್ಷೆಯಿದೆ.
ಒಟ್ಟಾರೆ 158 ರನ್ ಗಳಿಸಿರುವ ಶಫಾಲಿ ಈ ಕೂಟದಲ್ಲಿ ಗರಿಷ್ಠ ರನ್ ಗಳಿಸಿದವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು ನಿಗರ್ ಸುಲ್ತಾನಾ ನೇತೃತ್ವದ ತಂಡದ ನಿಧಾನಗತಿಯ ಬೌಲರಗಳ ದಾಳಿಯನ್ನು ಸಮರ್ಥವಾಗಿ ಎದುರಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ ಒದಗಿಸುವ ಸಾಧ್ಯತೆಯಿದೆ. ಆದರೆ ಹರ್ಮನ್‌ಪ್ರೀತ್ ಕೌರ್ ಪಡೆ ಬಾಂಗ್ಲಾವನ್ನು ಹಗುರವಾಗಿ ಕಾಣುವ ಸಾಧ್ಯತೆಯಿಲ್ಲ. ಕೆಲವೊಂದು ದಿನ ಬಾಂಗ್ಲಾ ಅಪಾಯಕಾರಿ ತಂಡವಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂಬುದನ್ನು ಭಾರತೀಯ ತಂಡ ತಿಳಿದಿದೆ.
ಲೀಗ್ ಹಂತದಲ್ಲಿ ಭಾರತವು ಅನುಕ್ರಮವಾಗಿ ಪಾಕಿಸ್ಥಾನ, ಯುಎಇ ಮತ್ತು ನೇಪಾಲ ತಂಡವನ್ನು ಅಧಿಕಾರಯುತವಾಗಿ ಸೋಲಿಸಿದ ಸಾಧನೆ ಮಾಡಿ ಅಜೇಯ ತಂಡವಾಗಿ ತನ್ನ ಶಕ್ತಿಯನ್ನು ಪ್ರದರ್ಶಿಸಿದೆ. ಶಫಾಲಿ, ಸ್ಮತಿ ಅವರಲ್ಲದೇ ಹರ್ಮನ್‌ಪ್ರೀತ್, ರಿಚಾ ಘೋಷ್, ದೀಪ್ತಿ ಶರ್ಮ, ಜೆಮಿಮಾ ರಾಡ್ರಿಗಸ್, ಪೂಜಾ ವಸ್ತ್ರಾಕರ್ ಉತ್ತಮ ಫಾರ್ಮ್ನಲ್ಲಿದ್ದಾರೆ. ಬೌಲಿಂಗ್‌ನಲ್ಲಿಯೂ ಭಾರತೀಯ ತಂಡ ಬಲಿಷ್ಠವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.