Asia Cup ; ಪತರುಗುಟ್ಟಿದ ಪಾಕಿಸ್ಥಾನ ; ಭಾರತಕ್ಕೆ ಅತ್ಯಮೋಘ ಜಯ

ಕುಲದೀಪ್ ಯಾದವ್ 5 ವಿಕೆಟ್ ಸಾಧನೆ...

Team Udayavani, Sep 11, 2023, 11:05 PM IST

1-sadasdas

ಕೊಲಂಬೊ: ಇಲ್ಲಿನ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಸೋಮವಾರ ಮುಂದುವರಿದ ಏಷ್ಯಾ ಕಪ್ ಸೂಪರ್‌ ಫೋರ್‌ ಏಕದಿನ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅತ್ಯಮೋಘ ನಿರ್ವಹಣೆ ತೋರಿ ಪಾಕಿಸ್ಥಾನಕ್ಕೆ ಭಾರಿ ಸೋಲಿನ ಶಾಕ್ ನೀಡಿದೆ.

ಮಳೆ ಅಡ್ಡಿಯ ನಡುವೆ ಸಾಗಿದ ಮೀಸಲು ದಿನದ ಪಂದ್ಯದಲ್ಲಿ 357 ರನ್ ಗಳ ಸವಾಲು ಪಡೆದ ಪಾಕಿಸ್ಥಾನ 32 ಓವರ್ ಗಳಲ್ಲಿ 128 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡಿತು. ಭಾರತ 228 ರನ್ ಗಳ ಭಾರಿ ಗೆಲುವು ಸಾಧಿಸಿತು. ಪಾಕ್ ನ ಕೊನೆಯಲ್ಲಿ ಬರಬೇಕಾದ ನಸೀಮ್ ಮತ್ತು ಹ್ಯಾರಿಸ್ ಫೀಲ್ಡಿಂಗ್ ಮಾಡುವಾಗ ಗಾಯದೊಂದಿಗೆ ಹೊರ ಹೋಗಿದ್ದು ,ಅವರು ಬ್ಯಾಟಿಂಗ್‌ಗೆ ಬರದ ಕಾರಣ 8 ವಿಕೆಟ್ ಕಳೆದುಕೊಂಡಾಗಲೇ ಆಟ ಮುಗಿಯಿತು.

ಕುಲದೀಪ್ ಯಾದವ್ ಅವರು 5 ವಿಕೆಟ್ ಪಡೆದು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 8 ಓವರ್ ಗಳಲ್ಲಿ 25 ರನ್ ಬಿಟ್ಟುಕೊಟ್ಟರು. 9 ರನ್ ಗಳಿಸಿದ್ದ ವೇಳೆ ಇಮಾಮ್-ಉಲ್-ಹಕ್ ಅವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಎಸೆದ ಚೆಂಡು ಹಕ್ ಬ್ಯಾಟ್ ಗೆ ತಗುಲಿ ಶುಭ್ ಮನ್ ಗಿಲ್ ಅವರ ಕೈಸೇರಿತು. 10 ರನ್ ಗಳಿಸಿದ್ದ ನಾಯಕ ಬಾಬರ್ ಆಜಂ ಅವರನ್ನು ಹಾರ್ದಿಕ್ ಪಾಂಡ್ಯ ಬೌಲ್ಡ್ ಮಾಡಿ ಶಾಕ್ ನೀಡಿದರು.

ಪಾಕಿಸ್ಥಾನದ ಪ್ರಮುಖ ಬ್ಯಾಟ್ಸ್ ಮ್ಯಾನ್ ಗಳು ಭಾರತದ ಬಿಗು ಬೌಲಿಂಗ್ ವ್ಯೂಹ ದೊಳಗೆ ಸಿಲುಕಿ ನಲುಗಿದರು. 9 ರನ್ ಗಳಿಸಿದ್ದ ವೇಳೆ ಇಮಾಮ್-ಉಲ್-ಹಕ್ ಅವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಎಸೆದ ಚೆಂಡು ಹಕ್ ಬ್ಯಾಟ್ ಗೆ ತಗುಲಿ ಶುಭ್ ಮನ್ ಗಿಲ್ ಅವರ ಕೈಸೇರಿತು. 10 ರನ್ ಗಳಿಸಿದ್ದ ನಾಯಕ ಬಾಬರ್ ಆಜಂ ಅವರನ್ನು ಹಾರ್ದಿಕ್ ಪಾಂಡ್ಯ ಬೌಲ್ಡ್ ಮಾಡಿ ಶಾಕ್ ನೀಡಿದರು. 27 ರನ್ ಗಳಿಸಿದ್ದ ಫಖರ್ ಜಮಾನ್ ಅವರನ್ನು ಕುಲದೀಪ್ ಯಾದವ್ ಬೌಲ್ಡ್ ಮಾಡಿದರು. ಮೊಹಮ್ಮದ್ ರಿಜ್ವಾನ್ 2 ರನ್ ಗಳಿಗೆ ನಿರ್ಗಮಿಸಿದರು.ಶಾರ್ದೂಲ್ ಠಾಕೂರ್ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ಪೆವಿಲಿಯನ್ ಕಡೆಗೆ ಮರಳಿದರು.

ಶತಕದ ಜುಗಲ್ ಬಂದಿ
ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಅತ್ಯಮೋಘ ಶತಕಗಳನ್ನು ಸಿಡಿಸಿ ಭಾರತದ ಬ್ಯಾಟಿಂಗ್ ಬಲ ಸಾಬೀತುಪಡಿಸಿದ್ದಾರೆ. ಭಾರತ 50 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 356 ರನ್ ಗಳ ಸವಾಲಿನ ಮೊತ್ತವನ್ನು ಕಲೆಹಾಕಿತು. ಕೊಹ್ಲಿ 122 ರನ್ ಗಳಿಸಿ ಅಜೇಯರಾಗಿ ಉಳಿದರು.93 ಎಸೆತಗಳಲ್ಲಿ ಆಕರ್ಷಕ 9 ಬೌಂಡರಿ ಮತ್ತು 3 ಸಿಕ್ಸರ್ ಅವರ ಇನ್ನಿಂಗ್ಸ್ ನ ಆಕರ್ಷಣೆಯಾಗಿತ್ತು. ಜವಾಬ್ದಾರಿಯುತ ಆಟವಾಡಿದ ರಾಹುಲ್ ಅಜೇಯ 111 ರನ್ ಗಳಿಸಿದರು.106 ಎಸೆತಗಳಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ಅವರ ಆಟದ ಆಕರ್ಷಣೆಯಾಗಿತ್ತು. 3 ನೇ ವಿಕೆಟ್ ಗೆ ಇಬ್ಬರು 233 ರನ್ ಜತೆಯಾಟವಾಡಿದ್ದು ಇದು ಏಷ್ಯಾ ಕಪ್ ಇತಿಹಾಸದಲ್ಲಿ ಭಾರತದ ಅತೀ ದೊಡ್ಡ ಜತೆಯಾಟವಾಗಿದೆ.

ನಿನ್ನೆ ಭಾರಿ ಮಳೆಯಿಂದ ಪಂದ್ಯ ಮುಂದೂಡಿಕೆಯಾದ ವೇಳೆ 24.1 ಓವರ್ ಗಳಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. 8 ರನ್ ಗಳಿಸಿದ್ದ ಕೊಹ್ಲಿ ಮತ್ತು 17 ರನ್ ಗಳಿಸಿದ್ದ ರಾಹುಲ್ ಇಂದು ಆಕರ್ಷಕ ಜತೆಯಾಟವನ್ನು ಆಡಿದರು. ಪಾಕಿಸ್ಥಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ನಾಯಕ ರೋಹಿತ್ ಶರ್ಮಾ 56 ರನ್ ಶುಭಮನ್ ಗಿಲ್ 58 ರನ್ ಗಳಿಸಿ ಔಟಾಗಿದ್ದರು.

ಟಾಪ್ ನ್ಯೂಸ್

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.