ಏಶ್ಯನ್‌ ಬಾಕ್ಸಿಂಗ್‌ ಭಾರತ ತಂಡದಲ್ಲಿ ಅಮಿತ್‌, ಶಿವ


Team Udayavani, Mar 21, 2019, 12:30 AM IST

boxing.jpg

ಹೊಸದಿಲ್ಲಿ: ಮುಂದಿನ ತಿಂಗಳು ಬ್ಯಾಂಕಾಕ್‌ನಲ್ಲಿ ನಡೆಯಲಿರುವ “ಏಶ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌’ ಪಾಲ್ಗೊಳ್ಳಲಿರುವ ಭಾರತ ತಂಡದಲ್ಲಿ ಅಮಿತ್‌ ಪಂಘಲ್‌, ಶಿವ ಥಾಪ ಸ್ಥಾನ ಪಡೆದಿದ್ದಾರೆ.

ಇದುವರೆಗೆ 49 ಕೆಜಿ ವಿಭಾಗದಲ್ಲಿ  ಸ್ಫರ್ದಿಸುತ್ತಿದ್ದ ಅಮಿತ್‌ ಈ ಬಾರಿ 52 ಕೆಜಿ ವಿಭಾಗದಲ್ಲಿ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲಿದ್ದಾರೆ. ಇಲ್ಲಿ ಅಮಿತ್‌ ಜಯ ಗಳಿಸಿದರೆ ಚೊಚ್ಚಲ ಪಂದ್ಯದಲ್ಲೇ ಚಿನ್ನ ಗೆದ್ದ ದಾಖಲೆ ನಿರ್ಮಿಸಿದಂತಾಗುತ್ತದೆ.  ಕಳೆದ ತಿಂಗಳು “ಸ್ಟ್ರಾಂಜಾ ಮೆಮೋರಿಯಲ್‌’ ಕೂಟದ  49 ಕೆಜಿ ವಿಭಾಗದಲ್ಲಿ  ಚಿನ್ನದ ಪದಕ ಗೆದ್ದಿದ್ದ ಅವರು ಮಾರ್ಚ್‌ ತಿಂಗಳ ಆರಂಭದಲ್ಲಿ ಹೊಸ ತೂಕದ ತರಬೇತಿ ಪಡೆದಿದ್ದಾರೆ. 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ 49 ಕೆಜಿ ವಿಭಾಗದ ಸ್ಪರ್ಧೆ ಇಲ್ಲದ ಕಾರಣ ಅಮಿತ್‌ 52 ಕೆಜಿಗೆ ಬದಲಾಯಿಸಿಕೊಳ್ಳಬೇಕಾದ ಅನಿವಾರ್ಯತೆ ಬಂದಿದೆ.

ಸತತ 4 ಪದಕದತ್ತ ಥಾಪ
ಇತ್ತೀಚಿಗೆ ಫಿನ್‌ಲ್ಯಾಂಡ್ ನ‌ಲ್ಲಿ ನಡೆದ “ಗೀಬೀ ಬಾಕ್ಸಿಂಗ್‌’ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ  ಶಿವ ಥಾಪ ಸತತ 4ನೇ ಪದಕ ಗೆಲ್ಲುವ ತವಕದಲ್ಲಿದ್ದಾರೆ. ಇದಕ್ಕೂ ಮುನ್ನ ಅವರು 2013ರಲ್ಲಿ ಚಿನ್ನ, 2015ರಲ್ಲಿ ಕಂಚು ಹಾಗೂ 2017ರಲ್ಲಿ ಬೆಳ್ಳಿ ಪದಕ ಜಯಿಸಿದ್ದರು. 49 ಕೆಜಿ ವಿಭಾಗದಲ್ಲಿ, ಇತ್ತೀಚೆಗೆ ಮುಕ್ತಾಯಗೊಂಡ ಇರಾನ್‌ನಲ್ಲಿ ನಡೆದ ಮಕ್ರಾನ್‌ ಕಪ್‌ ಕೂಟದಲ್ಲಿ ಚಿನ್ನ ಗೆದ್ದ ದೀಪಕ್‌ ಸಿಂಗ್‌ ಸ್ಪರ್ಧೆಸಲಿದ್ದಾರೆ.

“ಒಲಿಂಪಿಕ್ಸ್‌ನ ತೂಕ ವಿಭಾಗದಂತೆ ಈ ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಯಾರು ಚಿನ್ನ ಅಥವಾ ಬೆಳ್ಳಿ ಪದಕ ಜಯಿಸುತ್ತಾರೋ ಅವರು  ಮುಂದಿನ ವಿಶ್ವ ಚಾಂಪಿಯನ್‌ಶಿಪ್‌ ಕೂಟಕ್ಕೆ ನೇರ ಆಯ್ಕೆಯಾಗಲಿದ್ದಾರೆ’ ಎಂದು ರಾಷ್ಟ್ರೀಯ ಬಾಕ್ಸಿಂಗ್‌ ಕೋಚ್‌ ಸಿ.ಎ. ಕುಟ್ಟಪ್ಪ ಹೇಳಿದ್ದಾರೆ.ಗೀಬೀ ಕೂಟದಲ್ಲಿ ಚಿನ್ನ ಗೆದ್ದ ಕವೀಂದರ್‌ ಸಿಂಗ್‌ 56 ಕೆಜಿ ವಿಭಾಗದಲ್ಲಿ ಸ್ಪರ್ಧೆಸಿದರೆ, ಕಾಮನ್ವೆಲ್ತ್‌ ಗೇಮ್ಸ್‌ ಬೆಳ್ಳಿ ಪದಕ ವಿಜೇತ ಸತೀಶ್‌ ಕುಮಾರ್‌ +91 ಕೆಜಿ  ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

ಪುರುಷರ ತಂಡ
ದೀಪಕ್‌ (46 ಕೆಜಿ), ಅಮಿತ್‌ ಪಂಘಲ್‌ (52 ಕೆಜಿ), ಕವೀಂದರ್‌ ಸಿಂಗ್‌ ಬಿಷ್ಟ್ (56 ಕೆಜಿ), ಶಿವ ಥಾಪ (60 ಕೆಜಿ), ರೋಹಿತ್‌ (64 ಕೆಜಿ), ಆಶಿಷ್‌ (69 ಕೆಜಿ), ಆಶಿಷ್‌ ಕುಮಾರ್‌ (75 ಕೆಜಿ), ಬೃಜೇಶ್‌ ಯಾದವ್‌ (81 ಕೆಜಿ), ನಮನ್‌ ತನ್ವಾರ್‌ (91 ಕೆಜಿ), ಸತೀಶ್‌ ಕುಮಾರ್‌ (+91ಕೆಜಿ).

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.