ಏಶ್ಯನ್ ಗೇಮ್ಸ್ ; ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ
Team Udayavani, Aug 20, 2018, 12:25 PM IST
ಜಕಾರ್ತಾ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾ ಕೂಟದಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಪದಕ ದೊರೆತಿದೆ. 10 ಮೀಟರ್ ಏರ್ ರೈಫಲ್ ಶೂಟಿಂಗ್ ವಿಭಾಗದಲ್ಲಿ ದೀಪಕ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಸೋಮವಾರ ನಡೆದ ಪುರುಷರ 10 ಮೀಟರ್ ಏರ್ ರೈಫಲ್ ಶೂಟಿಂಗ್ ನ ಅಂತಿಮ ಸುತ್ತಿನಲ್ಲಿ ಭಾರತದ ದೀಪಕ್ ಕುಮಾರ್ ಅವರು 247.7 ಅಂಕಗಳೊಂದಿಗೆ ಬೆಳ್ಳಿ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಚೀನಾದ ಯಾಂಗ್ ಹಾರಾನ್ 249.1 ಅಂಕಗಳಿಸಿ ಚಿನ್ನದ ಪದಕಗಳಿಸಿದರೆ, ಚೀನಾ ತೈಪಿಯ ಶಾವೊಕುವಾನ್ 226.8 ಅಂಕಗಳಿಸಿ ಕಂಚಿನ ಪದಕಕ್ಕೆ ಭಾಜನರಾದರು. ಅಲ್ಲದೇ ಭಾರತದ ಮತ್ತೊಬ್ಬ ಆಟಗಾರರಾದ ರವಿಕುಮಾರ್ ರವರು 205.2 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟರು.
ಏಶ್ಯನ್ ಗೇಮ್ಸ್ ನಲ್ಲಿ ಹರ್ಯಾಣದ ಜಗಜಟ್ಟಿ 24ರ ಹರೆಯದ ಭಜರಂಗ್ ಪೂನಿಯ ಬಂಗಾರದ ಪದಕ ಗಳಿಸುವ ಮೂಲಕ ಖಾತೆ ತೆರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.