Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ
Team Udayavani, Sep 28, 2023, 8:32 AM IST
ಹ್ಯಾಂಗ್‌ಝೂ: ಏಶಿಯನ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ.
ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರ ಪುರುಷರ 10 ಮೀಟರ್ ಏರ್ ಪಿಸ್ತೂಲ್ ತಂಡದಲ್ಲಿ ಒಟ್ಟು 1734 ಅಂಕ ಗಳಿಸುವ ಮೂಲಕ ಚಿನ್ನ ಗೆದ್ದರು. ಚೀನಾವನ್ನು ಕೇವಲ ಒಂದು ಅಂತರದಲ್ಲಿ ಸೋಲಿಸುವ ಮೂಲಕ ಭಾರತದ ಪುರುಷರ ತಂಡ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.
ವಿಯೆಟ್ನಾಂ ಪ್ರಬಲ ಪ್ರದರ್ಶನ ನೀಡಿ ಒಟ್ಟು 1730 ಅಂಕಗಳೊಂದಿಗೆ ಕಂಚಿನ ಪದಕವನ್ನು ಪಡೆದುಕೊಂಡಿತು. 580 ಅಂಕಗಳನ್ನು ಗಳಿಸಿದ ಸರಬ್ಜೋತ್ ಐದನೇ ಸ್ಥಾನವನ್ನು ಪಡೆದುಕೊಂಡರೆ, ಅರ್ಜುನ್ 578 ಅಂಕಗಳೊಂದಿಗೆ ವೈಯಕ್ತಿಕ ಅರ್ಹತಾ ಸ್ಪರ್ಧೆಯಲ್ಲಿ ಎಂಟನೇ ಸ್ಥಾನ ಪಡೆದರು. ಇವರಿಬ್ಬರೂ ಇಂದು ನಡೆಯಲಿರುವ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್‌ನಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ.
ಈ ಮೂಲಕ ಪ್ರಸಕ್ತ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 24ನೇ ಪದಕ ಹಾಗೂ ಶೂಟಿಂಗ್ ಸ್ಪರ್ಧೆಯಲ್ಲಿ ನಾಲ್ಕನೇ ಚಿನ್ನದ ಪದಕ ಲಭಿಸಿದಂತಾಗಿದೆ.
🥇🇮🇳 GOLD! Congratulations to Arjun Singh Cheema, Sarabjot Singh, Shiva Narwal on securing the Gold medal in the Men’s 10m Air Pistol Team event.
⏩ Follow @thebharatarmy on Instagram and X for instant updates on the Asian Games 2022.
📷 Pic belongs to the respective owners •… pic.twitter.com/iZW11k8g5Y
— The Bharat Army (@thebharatarmy) September 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.