3 ತಿಂಗಳಲ್ಲಿ ಕೆ.ಎಲ್. ರಾಹುಲ್- ಅಥಿಯಾ ಶೆಟ್ಟಿ ವಿವಾಹ?
Team Udayavani, Jul 13, 2022, 7:20 AM IST
ಮುಂಬಯಿ: ಕ್ರಿಕೆಟಿಗ ಕೆ.ಎಲ್. ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಇನ್ನು ಮೂರು ತಿಂಗಳಲ್ಲಿ ವಿವಾಹವಾಗಲಿದ್ದಾರೆಯೇ? ಹೀಗೊಂದು ಸುದ್ದಿ ಹರಿದಾಡುತ್ತಿದೆ. ಇದನ್ನು ಅಥಿಯಾ ತಂದೆ ಸುನೀಲ್ ಶೆಟ್ಟಿ ನಿರಾಕರಿಸಿ, ಆ ಬಗ್ಗೆ ಯಾವುದೇ ಅಂತಿಮ ತೀರ್ಮಾನಗಳಾಗಿಲ್ಲ ಎಂದು ಹೇಳಿದ್ದಾರೆ.
“ಇಂಡಿಯಾ ಟುಡೇ’ ವರದಿ ಪ್ರಕಾರ, ರಾಹುಲ್ ಅವರ ಅಪ್ಪ ಅಮ್ಮ, ಅಥಿಯಾ ಪೋಷಕರೊಂದಿಗೆ ಮಾತನಾಡಲು ಇತ್ತೀಚೆಗೆ ಮುಂಬಯಿಗೆ ತೆರಳಿದ್ದರಂತೆ. ರಾಹುಲ್-ಅಥಿಯಾ ಇತ್ತೀಚೆಗೆ ಮನೆಯೊಂದನ್ನು ಜಂಟಿಯಾಗಿ ಕೊಂಡಿದ್ದಾರೆ. ಮದುವೆ ಬಳಿಕ ಅಲ್ಲೇ ಇರುತ್ತಾರೆ ಎನ್ನಲಾಗಿದೆ. ಈ ಜೋಡಿ ಇತ್ತೀಚೆಗೆ ಜರ್ಮನಿಗೆ ತೆರಳಿದೆ. ರಾಹುಲ್ ಅಲ್ಲೇ ಚಿಕಿತ್ಸೆ ಪಡೆದಿದ್ದಾರೆ.
ಈ ಜೋಡಿ ಆಗಾಗ ಒಟ್ಟಿಗಿರುವ ಚಿತ್ರಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಲೇ ಇವೆ. ಅಥಿಯಾ ಅವರು ರಾಹುಲ್ ಜತೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೂಟಗಳಿಗೂ ತೆರಳಿದ್ದಾರೆ. ಅಥಿಯಾ ಸಹೋದರ ಅಹನ್ ಶೆಟ್ಟಿ ಅವರ “ತಡಪ್’ ಚಿತ್ರದ ಪ್ರೀಮಿಯರ್ ಶೋನಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.