ಟೆಸ್ಟ್ ತಂಡಕ್ಕೆ ರೋಹಿತ್ ಸೇರ್ಪಡೆ: ಮೊದಲ ಟೆಸ್ಟ್ ನಂತರ ಕ್ಯಾಪ್ಟನ್ ಕೊಹ್ಲಿ ಭಾರತಕ್ಕೆ!
Team Udayavani, Nov 10, 2020, 9:03 AM IST
ನವದೆಹಲಿ: ಆಸ್ಟ್ರೇಲಿಯ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡಗಳನ್ನು ಪರಿಷ್ಕರಿಸಲಾಗಿದೆ. ಐಪಿಎಲ್ ವೇಳೆ ಗಾಯಾಳಾಗಿ ಮೂರೂ ತಂಡಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ ಫಿಟ್‌ನೆಸ್ ಸಮಸ್ಯೆಯಿಂದಾಗಿ, ಮೊದಲು ನಡೆಯುವ ಏಕದಿನ ಹಾಗೂ ಟಿ20 ಸರಣಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಇದೇ ವೇಳೆ ತಂದೆಯಾಗಲಿರುವ ವಿರಾಟ್ ಕೊಹ್ಲಿ ಮೊದಲ ಟೆಸ್ಟ್ ಪಂದ್ಯದ ಬಳಿಕ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದರು.
ಗಾಯಾಳಾಗಿರುವ ಅನುಭವಿ ವೇಗಿ ಇಶಾಂತ್ ಶರ್ಮ ಚೇತರಿಸಿಕೊಂಡರೆ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲಾಗುವುದು ಎಂದೂ ಶಾ ತಿಳಿಸಿದರು.
ಭುಜದ ನೋವಿಗೆ ಸಿಲುಕಿರುವ ವಿಶಿಷ್ಟ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಟಿ20 ತಂಡದಿಂದ ಕೈಬಿಡಲಾಗಿದೆ. ಈ ಸ್ಥಾನ ಎಡಗೈ ವೇಗಿ ಟಿ.ನಟರಾಜನ್ ಪಾಲಾಗಿದೆ. ಗಾಯಾಳು ಕೀಪರ್ ಸಹಾ ಬಗ್ಗೆ ಕಾದು ನೋಡಲು ನಿರ್ಧರಿಸಲಾಗಿದೆ. ಹೆಚ್ಚುವರಿ ಕೀಪರ್ ಆಗಿ ಸಂಜು ಸ್ಯಾಮ್ಸನ್ ಏಕದಿನ ತಂಡವನ್ನು ಸೇರಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.