ವೆಸ್ಟ್‌ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್: ಆಸ್ಟ್ರೇಲಿಯದ ಲಬುಶೇನ್, ಹೆಡ್ ಶತಕ
Team Udayavani, Dec 9, 2022, 6:20 AM IST
ಅಡಿಲೇಡ್: ವೆಸ್ಟ್‌ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲೂ ಆಸ್ಟ್ರೇಲಿಯ ಭರ್ಜರಿ ಪ್ರದರ್ಶನ ನೀಡಿದೆ. ಮಾರ್ನಸ್ ಲಬುಶೇನ್ ಮತ್ತು ಟ್ರ್ಯಾವಿಸ್ ಹೆಡ್ ಅವರ ಅಜೇಯ ಶತಕದ ಸಾಧನೆಯಿಂದ ಆಸ್ಟ್ರೇಲಿಯ ತಂಡವು ಮೊದಲ ದಿನದಾಟದ ಅಂತ್ಯಕ್ಕೆ ಮೂರು ವಿಕೆಟ್ ಕಳೆದುಕೊಂಡು 330 ರನ್ನುಗಳ ಬೃಹತ್ ಮೊತ್ತ ಪೇರಿಸಿದೆ.
ಇನ್ನಿಂಗ್ಸ್ ಆರಂಭಿಸಿದ ಡೇವಿಡ್ ವಾರ್ನರ್ ಮತ್ತು ಉಸ್ಮಾನ್ ಖ್ವಾಜಾ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಆದರೆ ಖ್ವಾಜಾ ಮತ್ತು ನಾಯಕ ಸ್ಟೀವನ್ ಸ್ಮಿತ್ ಎರಡು ರನ್ ಅಂತರದಲ್ಲಿ ಪೆವಿಲಿಯನ್ ಸೇರಿಕೊಂಡಾಗ ತಂಡ ಆಘಾತ ಅನುಭವಿಸಿದ್ದರು. ಆದರೆ ಲಬುಶೇನ್ ಮತ್ತು ಹೆಡ್ ಆಬಳಿಕ ಭರ್ಜರಿ ಪ್ರದರ್ಶನ ನೀಡಿದರಲ್ಲದೇ ಮುರಿಯದ ನಾಲ್ಕನೇ ವಿಕೆಟಿಗೆ 199 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡವನ್ನು ಆಧರಿಸಿದರು. ಇಬ್ಬರೂ ಶತಕ ದಾಖಲಿಸಿ ಸಂಭ್ರಮಿಸಿದ್ದಾರೆ.
ಸಂಕ್ಷಿಪ್ತ ಸ್ಕೋರು: ಆಸ್ಟ್ರೇಲಿಯ ಪ್ರಥಮ ಇನ್ನಿಂಗ್ಸ್: 3 ವಿಕೆಟಿಗೆ 330 (ಖ್ವಾಜಾ 62, ಲಬುಶೇನ್ 120 ಔಟಾಗದೆ, ಟ್ರ್ಯಾವಿಸ್ ಹೆಡ್ 114 ಔಟಾಗದೆ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್‌ಸ್ಲಾಮ್ ಸೆಮೀಸ್‌ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?