ಮಿಥಾಲಿ ಪಡೆಗೆ ಸರಣಿ ಸಮಬಲದ ಒತ್ತಡ
Team Udayavani, Sep 24, 2021, 6:43 AM IST
ಮಕಾಯ್: ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳೆರಡರಲ್ಲೂ ತೀರಾ ಹಿಂದುಳಿದಿರುವ ಭಾರತದ ವನಿತೆಯರು ಶುಕ್ರವಾರ ಆತಿಥೇಯ ಆಸ್ಟ್ರೇಲಿಯ ವಿರುದ್ಧ ದ್ವಿತೀಯ ಏಕದಿನ ಪಂದ್ಯವನ್ನಾಡಲಿದ್ದಾರೆ. ಈಗಾಗಲೇ ಮೊದಲ ಪಂದ್ಯವನ್ನು 9 ವಿಕೆಟ್‌ಗಳಿಂದ ಸೋತ ಮಿಥಾಲಿ ಪಡೆಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಸರಣಿಯನ್ನು ಜೀವಂತವಾಗಿ ಇರಿಸಬೇಕಾದರೆ ಭಾರತ ಇಲ್ಲಿ ಶಕ್ತಿ ಮೀರಿ ಪ್ರಯತ್ನಿಸಬೇಕಿದೆ.
ಮಿಥಾಲಿ ಏಕಾಂಗಿ ಹೋರಾಟ: ಸ್ಮತಿ ಮಂಧನಾ-ಶಫಾಲಿ ವರ್ಮ ಉತ್ತಮ ಆರಂಭ ಒದಗಿಸುವಲ್ಲಿ ಪದೇ ಪದೇ ವಿಫಲವಾಗುತ್ತಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿಯೂ ಈ ಜೋಡಿ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ಎಡವಿತ್ತು. ಒನ್‌ಡೌನ್‌ನಲ್ಲಿಯೂ ಸೂಕ್ತ ಆಟಗಾರ್ತಿಯ ಕೊರತೆ ಎದ್ದು ಕಾಣುತ್ತಿದೆ. 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ನಾಯಕಿ ಮಿಥಾಲಿ ಏಕಾಂಗಿಯಾಗಿ ಹೋರಾಟ ನಡೆಸಬೇಕಾದ ಸ್ಥಿತಿ ಎದುರಿಸುತ್ತಿದ್ದಾರೆ. ಕಳೆದ 5 ಪಂದ್ಯಗಳಲ್ಲಿ ಸತತ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಈ ಪಂದ್ಯದಲ್ಲಿಯೂ ಇವರ ಮೇಲೆ ಹೆಚ್ಚು ಭರವಸೆ ಇರಿಸಲಾಗಿದೆ. ಒಂದೊಮ್ಮೆ “ಲೇಡಿ ಸೆಹವಾಗ್’ ಖ್ಯಾತಿಯ ಶಫಾಲಿ ವರ್ಮ ಸಿಡಿದು ನಿಂತರೆ ತಂಡದ ಬೃಹತ್ ಮೊತ್ತಕ್ಕೆ ಅಡ್ಡಿಯಿಲ್ಲ. ಈ ಪಂದ್ಯದಲ್ಲಿ ಅವರ ಬ್ಯಾಟ್ ಮಾತಾಡಲೇಬೇಕಿದೆ.
ಕೌರ್ ಅನುಮಾನ: ಹೆಬ್ಬೆರಳಿನ ಗಾಯದಿಂದ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಉಪನಾಯಕಿ ಹರ್ಮನ್‌ಪ್ರೀತ್ ಕೌರ್ ಈ ಪಂದ್ಯದಲ್ಲಿಯೂ ಕಣಕ್ಕಿಳಿಯುವುದು ಅನುಮಾನ. ಈ ಬಗ್ಗೆ ಬ್ಯಾಟಿಂಗ್ ಕೋಚ್ ಶಿವಸುಂದರ್ ದಾಸ್ ಮಾಹಿತಿ ನೀಡಿದ್ದು, ಕೌರ್ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ತಿಳಿಸಿದ್ದಾರೆ.
ಆಸೀಸ್ ನಿರಾಳ: ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು 1-0 ಮುನ್ನಡೆ ಪಡೆದಿರುವ ಆಸೀಸ್ ನಿರಾಳವಾಗಿದೆ. ಹೇನ್ಸ್, ಹೀಲಿ, ಲ್ಯಾನಿಂಗ್, ಪೆರ್ರಿ ಮತ್ತು ಮೂನಿ ಸ್ಫೋಟಕ ಬ್ಯಾಟಿಂಗಿಗೆ ಹೆಸರುವಾಸಿ. ಇದರಲ್ಲಿ ಇಬ್ಬರು ಸಿಡಿದು ನಿಂತರೂ ಭಾರತಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನಲಡ್ಡಿಯಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.