AUSvsNZ: ಕಿವೀಸ್ ಸರಣಿಗೆ ತಂಡ ಪ್ರಕಟಿಸಿದ ಆಸೀಸ್; ಕಮಿನ್ಸ್ ಇದ್ದರೂ ಮಾರ್ಷ್ ಗೆ ನಾಯಕತ್ವ
Team Udayavani, Feb 6, 2024, 3:15 PM IST
ಸಿಡ್ನಿ: ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಆಡುತ್ತಿರುವ ಆಸ್ಟ್ರೇಲಿಯಾ ಮುಂದಿನ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದೆ. ವಿಂಡೀಸ್ ವಿರುದ್ಧದ ಸೀಮಿತ ಓವರ್ ಸರಣಿಗೆ ವಿಶ್ರಾಂತಿ ಪಡೆದಿದ್ದ ಹಿರಿಯ ಆಟಗಾರರು ಮತ್ತೆ ಸ್ಥಾನ ಪಡೆದಿದ್ದಾರೆ.
ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾ ತಂಡಕ್ಕೆ ಮರಳಿದ್ದಾರೆ. ಮಿಚೆಲ್ ಮಾರ್ಷ್ ನೇತೃತ್ವದಲ್ಲಿ 15 ಜನರ ಬಲಿಷ್ಠ ತಂಡ ಪ್ರಕಟಿಸಲಾಗಿದೆ. ತಂಡದಲ್ಲಿ ಪ್ಯಾಟ್ ಕಮಿನ್ಸ್ ಇದ್ದರೂ ಮಾರ್ಷ್ ಗೆ ನಾಯಕತ್ವದ ಹೊಣೆ ವಹಿಸಲಾಗಿದೆ.
ಇತ್ತೀಚೆಗೆಷ್ಟೇ ಟೆಸ್ಟ್ ಮತ್ತು ಏಕದಿನದಿಂದ ನಿವೃತ್ತಿಯಾಗಿರುವ ಡೇವಿಡ್ ವಾರ್ನರ್ ಅವರು ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲದೆ ಇತ್ತೀಚೆಗೆ ಗಾಯಗೊಂಡಿದ್ದ ಗ್ಲೆನ್ ಮ್ಯಾಕ್ಸವೆಲ್ ಅವರ ತಂಡದಲ್ಲಿದ್ದಾರೆ.
The Trans-Tasman rivalry is set to resume!
The following 15 players will soon head to New Zealand for three T20Is against the @BLACKCAPS. pic.twitter.com/Mf8SEHBiVv
— Cricket Australia (@CricketAus) February 6, 2024
ಕಿವೀಸ್ ವಿರುದ್ಧದ ಸರಣಿಯು ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್‌ಎ) ನಲ್ಲಿ ಮುಂಬರುವ ಟಿ20 ವಿಶ್ವಕಪ್‌ಗೆ ಮೊದಲು ಆಸೀಸ್ ಆಡುತ್ತಿರುವ ಕೊನೆಯ ಟಿ20 ಸರಣಿಯಾಗಿದೆ.
ಆಸೀಸ್ ತಂಡ
ಮಿಚೆಲ್ ಮಾರ್ಷ್ (ನಾ), ಪ್ಯಾಟ್ ಕಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸವೆಲ್, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.