ಇನ್ನೆಂದೂ ಆಸ್ಟ್ರೇಲಿಯಾ ಪರ ಕ್ರಿಕೆಟ್ ಆಡಲ್ಲ: ವಾರ್ನರ್
Team Udayavani, Apr 1, 2018, 6:20 AM IST
ಸಿಡ್ನಿ: ಜೀವನದಲ್ಲಿ ಇನ್ನೆಂದು ಆಸ್ಟ್ರೇಲಿಯಾ ಪರ ಕ್ರಿಕೆಟ್ ಆಡಲಾರೆ ಎಂದು ಚೆಂಡು ವಿರೂಪ ಪ್ರಕರಣದಿಂದ 12 ತಿಂಗಳು ನಿಷೇಧಕ್ಕೆ ತುತ್ತಾದ ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ ಗಳಗಳನೆ ಕಣ್ಣೀರು ಸುರಿಸುತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದಾರೆ.
ಶನಿವಾರ ಸಿಡ್ನಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾರ್ನರ್, ಕೇಪ್‌ಟೌನ್ ಟೆಸ್ಟ್‌ನಲ್ಲಿ ನಡೆದ ಚೆಂಡು ವಿರೂಪದ ಸಂಪೂರ್ಣ ಜವಾಬ್ದಾರಿಯನ್ನು ನಾನು ಹೊರುತ್ತೇನೆ. ಈ ತಪ್ಪಿಗಾಗಿ ಕ್ರಿಕೆಟ್ ಅಭಿಮಾನಿಗಳು, ಬೆಂಬಲಿಗರು, ಸಹ ಆಟಗಾರರು ಮತ್ತು ಆಸ್ಟ್ರೇಲಿಯಾ ಜನತೆಯಲ್ಲಿ ಕ್ಷಮೆಯಾಚಿಸುತ್ತೇನೆ ಎಂದರು.
ಆಸ್ಟ್ರೇಲಿಯಾ ಪರ ಕ್ರಿಕೆಟ್ ಆಡುವ ಕನಸು ಕಂಡು ಅದನ್ನು ನನಸು ಮಾಡಿಕೊಂಡಿದ್ದೆ. ಆದರೆ, ತಪ್ಪು ಮಾಡಿ ಅವಕಾಶ ಕಳೆದುಕೊಂಡಿದ್ದೇನೆ. ಮತ್ತೆ ರಾಷ್ಟ್ರೀಯ ತಂಡದಲ್ಲಿ ಆಡುವ ಸಣ್ಣ ಭರವಸೆ ಇತ್ತು. ಆದರೆ ಅದು ಎಂದಿಗೂ ಆಗುವುದಿಲ್ಲ….ಎಂದು ಭಾವುಕರಾದರು.
ಜೀವನದುದ್ದಕ್ಕೂ ಕಾಡಲಿದೆ:
ತಂಡವನ್ನು ಗೆಲ್ಲಿಸುವುದೇ ನನ್ನ ಉದ್ದೇಶವಾಗಿತ್ತು. ಆದರೆ ತಪ್ಪು ಮಾರ್ಗ ಕ್ರಿಕೆಟ್ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಅಂದುಕೊಂಡಿರಲಿಲ್ಲ. ಇದೆಲ್ಲ ಹೇಗೆ ನಡೆಯಿತು. ವ್ಯಕ್ತಿಯಾಗಿ ನಾನು ಯಾರು? ಎಂಬ ಪ್ರಶ್ನೆಗಳಿಗೆ ಮುಂದಿನ ದಿನಗಳಲ್ಲಿ ಉತ್ತರ ಕಂಡುಕೊಳ್ಳುತ್ತೇನೆ. ಕುಟುಂಬದ ಜತೆ ಹೆಚ್ಚಿನ ಸಮಯಕಳೆಯಲು ಇಚ್ಛಿಸುತ್ತೇನೆ. ಜೀವನದುದ್ದಕ್ಕೂ ನನ್ನ ನೆರವಿಗೆ ನಿಂತ ಪತ್ನಿ ಮತ್ತು ನನ್ನ ಜತೆಗಿರುವ ಮಗಳಲ್ಲಿಯೂ ಕ್ಷಮೆಯಾಚಿಸುತ್ತೇನೆ ಎಂದರು.
ಪ್ರಕರಣ ಏನು?
ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ಬ್ಯಾನ್‌ಕ್ರಾಫ್ಟ್ ಚೆಂಡು ವಿರೂಪಗೊಳಿಸಿದ್ದರು. ಇದು, ಕ್ಯಾಮರಾದಲ್ಲಿ ಸೆರೆಯಾಗಿತ್ತು. ನಂತರ ತಂಡದ ನಾಯಕ ತಪ್ಪನ್ನು ಒಪ್ಪಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸ್ಟೀವನ್ ಸ್ಮಿತ್ ಮತ್ತು ಡೇವಿಡ್ ವಾರ್ನರ್‌ಗೆ 12 ತಿಂಗಳು ಮತ್ತು ಬ್ಯಾನ್‌ಕ್ರಾಫ್ಟ್ಗೆ 9 ತಿಂಗಳು ನಿಷೇಧ ಹೇರಿದೆ. ಕಳೆದ 2 ದಿನದ ಹಿಂದೆ ಸ್ಮಿತ್ ಕೂಡ ಸುದ್ದಿಗೋಷ್ಠಿ ನಡೆಸಿ ಕಣ್ಣೀರು ಹಾಕುತ್ತಾ ಕ್ಷಮೆಯಾಚಿಸಿದ್ದರು.
ವಾರ್ನರ್ ಸಾಧನೆ:
ತಾರಾ ಆಟಗಾರನಾಗಿರುವ ಡೇವಿಡ್ ವಾರ್ನರ್ ಹಲವಾರು ಪಂದ್ಯಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. 2011ರಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 74 ಟೆಸ್ಟ್ ಆಡಿ 6363 ರನ್ ಬಾರಿಸಿದ್ದಾರೆ. ಅದರಲ್ಲಿ 21 ಶತಕ, 29 ಅರ್ಧಶತಕ ಸೇರಿವೆ. 2009ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 106 ಪಂದ್ಯಗಳಿಂದ 4343 ರನ್ ದಾಖಲಿಸಿದ್ದಾರೆ. ಅದರಲ್ಲಿ 14 ಶತಕ, 17 ಅರ್ಧಶತಕ ಸೇರಿವೆ. 2009ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 70 ಪಂದ್ಯಗಳಿಂದ 1792 ರನ್ ದಾಖಲಿಸಿದ್ದಾರೆ. ಅದರಲ್ಲಿ 13 ಅರ್ಧಶತಕ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.