ಆಸ್ಟ್ರೇಲಿಯಾ ಕ್ರಿಕೆಟ್ ಬಿಕ್ಕಟ್ಟು: ಬಾಂಗ್ಲಾ ಪ್ರವಾಸಕ್ಕೂ ಧಕ್ಕೆ?
Team Udayavani, Jul 3, 2017, 3:45 AM IST
ಸಿಡ್ನಿ: ವೇತನ ಪದ್ಧತಿಗೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಮತ್ತು ಆಟಗಾರರ ನಡುವಿನ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಹೀಗಾಗಿ ಇದರ ಕರಿ ನೆರಳು ಆಸ್ಟ್ರೇಲಿಯಾದ ಬಾಂಗ್ಲಾ ಮತ್ತು ಭಾರತ ಪ್ರವಾಸದ ಮೇಲೂ ಬಿದ್ದಿದೆ. ಈ ಹಿಂದಿನ ವೇಳಾ ಪಟ್ಟಿಯಂತೆ ಆಗಸ್ಟ್ನಲ್ಲಿ ಆಸ್ಟ್ರೇಲಿಯಾ ತಂಡ ಟೆಸ್ಟ್ ಸರಣಿ ಆಡಲು ಬಾಂಗ್ಲಾ ಪ್ರವಾಸ ಕೈಗೊಳ್ಳಬೇಕಿತ್ತು. ಅಕ್ಟೋಬರ್ನಲ್ಲಿ ಏಕದಿನ ಸರಣಿಗಾಗಿ ಭಾರತಕ್ಕೆ ಬರುವುದೂ ನಿರ್ಧಾರವಾಗಿದೆ. ಹೊಸ ವೇತನ ಗುತ್ತಿಗೆ ಜಾರಿಯಾಗದ ಪಕ್ಷದಲ್ಲಿ ಈ ಸರಣಿಗಳಲ್ಲಿ ಆಸ್ಟ್ರೇಲಿಯಾ ಭಾಗವಹಿಸುವುದು ಅನುಮಾನವಾಗಿದೆ. ಅದೇ ರೀತಿ ಇಂಗ್ಲೆಂಡ್, ನ್ಯೂಜಿಲೆಂಡ್ ವಿರುದ್ಧದ ಸರಣಿ ಕೂಡ ತೂಗುಯ್ನಾಲೆಯಲ್ಲಿದೆ.
ದ.ಆಫ್ರಿಕಾ “ಎ’ ತಂಡದ ಪ್ರವಾಸಕ್ಕೆ ಬಹಿಷ್ಕಾರ?: ಬಿಗಡಾಯಿಸಿರುವ ವೇತನ ಪದ್ಧತಿ ಸಮಸ್ಯೆಗೆ ಶೀಘ್ರದಲ್ಲಿಯೇ ಪರಿಹಾರ ಕಂಡುಕೊಳ್ಳದಿದ್ದರೆ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧ “ಎ’ ತಂಡದ ಪ್ರವಾಸಕ್ಕೆ ಬಹಿಷ್ಕಾರ ಹಾಕಲಿದ್ದಾರೆ. ಹೀಗಾಗಿ ಟೂರ್ನಿ ರದ್ದಾಗುವ ಸಾಧ್ಯತೆ ಇದೆ. ಆದರೆ ಪ್ರವಾಸಕ್ಕೂ ಮುನ್ನ ನಡೆಯಲಿರುವ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಆಟಗಾರರು ಒಪ್ಪಿಕೊಂಡಿದ್ದಾರೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸಮಸ್ಯೆ ಏನು?: ಈ ಹಿಂದಿನ ವೇತನ ಪದ್ಧತಿಯ ಗುತ್ತಿಗೆಯ ಅವಧಿ ಜು.1ರಂದು ಅಂತ್ಯವಾಗಿದೆ. ಇದೇ ಸಂದರ್ಭದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಹೊಸದಾಗಿ ವೇತನ ಪದ್ಧತಿಯನ್ನು ರಚಿಸಿತ್ತು. ಆದರೆ ಈ ಹೊಸ ಪದ್ಧತಿಗೆ ಆಟಗಾರರು ಒಪ್ಪುತ್ತಿಲ್ಲ. ಅದರಲ್ಲಿ ಕೆಲವು ತಿದ್ದುಪಡಿ ಮಾಡುವಂತೆ ಪಟ್ಟುಹಿಡಿದಿದ್ದಾರೆ. ಆದರೆ ಇದಕ್ಕೆ ಕ್ರಿಕೆಟ್ ಮಂಡಳಿ ಒಪ್ಪುತ್ತಿಲ್ಲ. ಇದರಿಂದಾಗಿ ಪುರುಷ ಮತ್ತು ಮಹಿಳಾ ಕ್ರಿಕೆಟಿಗರು ಸೇರಿದಂತೆ 230 ಆಟಗಾರರು ವೇತನ ಪದ್ಧತಿಯಲ್ಲಿ ಇಲ್ಲದೇ ನಿರುದ್ಯೋಗಿಗಳಾದ ವಿಚಿತ್ರ ಪರಿಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.