ಭಾರತದ ಬಿಗಿ ಬೌಲಿಂಗ್ ಗೆ ಆಸೀಸ್ ತತ್ತರ : ಟೀಮ್ ಇಂಡಿಯಾ 53 ರನ್ ಗಳ ಮುನ್ನಡೆ
Team Udayavani, Dec 18, 2020, 4:37 PM IST
ಅಡಿಲೇಡ್ : ಭಾರತ – ಆಸ್ಟ್ರೇಲಿಯಾ ನಡುವಿನ ಮೊದಲ ಡೇ-ನೈಟ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಮೇಲುಗೈ ಸಾಧಿಸಿದೆ.
ಮೊದಲ ಇನ್ನಿಂಗ್ಸ್ ನಲ್ಲಿ 244 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದ್ದ ಭಾರತ, ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್ 191 ರನ್ ಗೆ
ಆಲೌಟ್ ಮಾಡಿ ಮಿಂಚಿತ್ತು.
ಆಸೀಸ್ ಪರ ಆರಂಭಿಕರಾಗಿ ಕ್ರೀಸ್ ಗಿಳಿದ ಮ್ಯಾಥ್ಯೂ ವೇಡ್ ಹಾಗೂ ಬರ್ನ್ಸ್ ಬುಮ್ರಾ ಬೌಲಿಂಗ್ ದಾಳಿಗೆ ವಿಕೆಟ್ ಒಪ್ಪಿಸಿದರು. ಇಬ್ಬರು ತಲಾ 8 ರನ್ ಪೇರಿಸಿದರು. ಮಾರ್ನಸ್ ಲಬುಶೇನ್ ಕೆಲ ಕಾಲ ಮೈದಾನದಲ್ಲಿ ನಿಂತು ತಂಡಕ್ಕೆ ಆಸರೆಯಾದರು. 47 ರನ್ ಗಳಿಸಿ ಉಮೇಶ್ ಯಾದವ್ ಎಸೆತದಲ್ಲಿ ಲಬುಶೇನ್ ವಿಕೆಟ್ ಒಪ್ಪಿಸಿದರು. ತಂಡದ ಪ್ರಮುಖ ಆಟಗಾರ ಸ್ಟೀವನ್ ಸ್ಮಿತ್ ಕೇವಲ 1 ರನ್ ಗಳಿಸಿ ಅಶ್ವಿನ್ ಗೆ ವಿಕೆಟ್ ಒಪ್ಪಿಸಿ, ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.
ಉಳಿದಂತೆ ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್,ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಹೀಗೆ ಆಸೀಸ್ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಂತು ಬೇರೂರಲು ಭಾರತೀಯ ಬೌಲರ್ ಗಳು ಅವಕಾಶ ಮಾಡಿಕೊಡಲಿಲ್ಲ. ಅಂತಿಮ ಹಂತದಲ್ಲಿ ನಾಯಕ ಟಿಮ್ ಪೇನ್ 73 ರನ್ ಗಳಿಸಿ ತಂಡವನ್ನು ಅಪಾಯದಿಂದ ಪಾರು ಮಾಡುವ ಪ್ರಯತ್ನ ಮಾಡಿದರೂ ಸಹ ಆಟಗಾರರು ನೆರವಾಗಲಿಲ್ಲ.
ಭಾರತದ ಪರ ಅಶ್ವಿನ್ 4 ವಿಕೆಟ್ ಪಡೆದರೆ, ಉಮೇಶ್ ಯಾದವ್ 3 ವಿಕೆಟ್, ಬುಮ್ರಾ 2 ವಿಕೆಟ್ ಪಡೆದು ಮಿಂಚಿದರು.
ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಭಾರತ, ಪ್ರಾರಂಭದಲ್ಲೇ ಪೃಥ್ವಿ ಶಾ ವಿಕೆಟ್ ಕಳೆದುಕೊಂಡಿತ್ತು. ಪೃಥ್ವಿ ಶಾ ಪ್ಯಾಟ್ ಕಮ್ಮಿನ್ಸ್ ಎಸೆತದಲ್ಲಿ 4 ರನ್ ಗಳಿಸಿ ಔಟ್ ಆದರು. 2ನೇ ದಿನದ ಅಂತ್ಯಕ್ಕೆ ಭಾರತ 9 ರನ್ಗೆ 1 ವಿಕೆಟ್ ಕಳೆದುಕೊಂಡು 62 ರನ್ ರನ್ ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಬೆಂಗಳೂರು ಬುಲ್ಸ್ ಗೆ 18ನೇ ಸೋಲು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.