ಫ್ರೆಂಚ್ ಓಪನ್: ಹಿಂದೆ ಸರಿದ ಚುಂಗ್ ಹಿಯೋನ್
Team Udayavani, May 24, 2018, 6:00 AM IST
ಪ್ಯಾರಿಸ್: ದಕ್ಷಿಣ ಕೊರಿಯಾದ ಅಪಾಯಕಾರಿ ಆಟಗಾರ ಚುಂಗ್ ಹಿಯೋನ್ ಫ್ರೆಂಚ್ ಓಪನ್ ಟೆನಿಸ್ ಪಂದ್ಯಾವಳಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಪಾದದ ನೋವಿನಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದಿದ್ದಾರೆ. ವರ್ಷಾರಂಭದ ಆಸ್ಟ್ರೇಲಿಯನ್ ಓಪನ್‌ನಲ್ಲಿ ಸೆಮಿಫೈನಲ್ ತನಕ ಸಾಗಿದ ಚುಂಗ್ ಹಿಯೋನ್, ರೊಲ್ಯಾಂಡ್ ಗ್ಯಾರೋಸ್‌ನಲ್ಲಿ ರಫೆಲ್ ನಡಾಲ್ ಅವರನ್ನು ಸೋಲಿಸ ಬಲ್ಲ ಸಾಮರ್ಥ್ಯವುಳ್ಳ ಆಟಗಾರನೆಂದು ಗುರುತಿಸಲ್ಪಟ್ಟಿದ್ದರು.
“ಈ ಋತುವಿನುದ್ದಕ್ಕೂ ಪಾದದ ಸೆಳೆತಕ್ಕೊಳ ಗಾಗಿದ್ದೆ. ಇದಕ್ಕೆ ಸಣ್ಣ ಚಿಕಿತ್ಸೆಯ ಅಗತ್ಯವಿದೆ. ಬಳಿಕ ವಿಶ್ರಾಂತಿ ತೆಗೆದುಕೊಳ್ಳಬೇಕಿದೆ’ ಎಂದಿದ್ದಾರೆ ಚುಂಗ್ ಹಿಯೋನ್. ಇದೇ ಕಾರಣಕ್ಕಾಗಿ ಕಳೆದ ತಿಂಗಳ ಹ್ಯೂಸ್ಟನ್ ಮತ್ತು ಬಾರ್ಸಿಲೋನಾ ಓಪನ್ ಕೂಟಗಳಲ್ಲೂ ಹಿಯೋನ್ ಆಡಿರಲಿಲ್ಲ. ಕಳೆದ ತಿಂಗಳಷ್ಟೇ ಜೀವನಶ್ರೇಷ್ಠ 19ನೇ ರ್‍ಯಾಂಕಿಂಗ್ ಪಡೆದ ಹೆಗ್ಗಳಿಕೆ 21ರ ಹರೆಯದ ಹಿಯೋನ್ ಅವರದಾಗಿತ್ತು.
ಅಂಕಿತಾ ನಿರ್ಗಮನ
ಪ್ಯಾರಿಸ್: ಭಾರತದ ಅಂಕಿತಾ ರೈನಾ ಫ್ರೆಂಚ್ ಓಪನ್ ಪ್ರಧಾನ ಸುತ್ತಿಗೇರುವಲ್ಲಿ ವಿಫಲರಾಗಿದ್ದಾರೆ. ಮೊದಲ ಸುತ್ತಿನ ಪಂದ್ಯದಲ್ಲೇ ಅವರು ರಶ್ಯದ ಎವೆನಿಯಾ ರೊಡಿನಾ ವಿರುದ್ಧ 6-3, 7-6 ಅಂತರದ ಸೋಲನುಭವಿಸಿದರು. 10ನೇ ಶ್ರೇಯಾಂಕದ ಎದುರಾಳಿ ವಿರುದ್ಧ ಮೊದಲ ಸೆಟ್ ಕಳೆದುಕೊಂಡ ಬಳಿಕ ತಿರುಗಿ ಬಿದ್ದರೂ ಅಂಕಿತಾಗೆ ಗೆಲುವಿನ ಅಂಕ ಲಭಿಸಲಿಲ್ಲ. ಇವರಿಬ್ಬರ ಹೋರಾಟ ಒಂದು ಗಂಟೆ, 41 ನಿಮಿಷಗಳ ತನಕ ಸಾಗಿತು. “ಇದೊಂದು ಕ್ಲೋಸ್ ಮ್ಯಾಚ್ ಆಗಿತ್ತು. ಅಂಕಿತಾ ಆವೆಯಂಗಳದಲ್ಲಿ ನಿರೀಕ್ಷೆಗೂ ಮಿಗಿಲಾದ ಪ್ರದರ್ಶನ ನೀಡಿದರು’ ಎಂದು ಅಂಕಿತಾ ರೈನಾ ಕೋಚ್ ಹೇಮಂತ್ ಬೆಂಡ್ರೆ ಹೇಳಿದರು.
ಪುರುಷರ ಸಿಂಗಲ್ಸ್‌ನಲ್ಲಿ ಸುಮಿತ್ ನಗಾಲ್ ಕೂಡ ಮೊದಲ ಸುತ್ತಿನಲ್ಲಿ ಸೋಲುಂಡಿದ್ದಾರೆ. ಅವರನ್ನು ಸ್ಲೊವಾಕಿಯಾದ ಮಾರ್ಟಿನ್ ಕ್ಲಿಝಾನ್ 4-6, 6-4, 6-1 ಅಂತರದಿಂದ ಪರಾಭವಗೊಳಿಸಿದರು. ಭಾರತದ ಖ್ಯಾತ ಸಿಂಗಲ್ಸ್ ಆಟಗಾರ ಯೂಕಿ ಭಾಂಬ್ರಿ ಫ್ರೆಂಚ್ ಓಪನ್ ಪ್ರಧಾನ ಸುತ್ತಿಗೆ ನೇರ ಪ್ರವೇಶ ಪಡೆದಿದ್ದಾರೆ. ಭಾಂಬ್ರಿ ಟಾಪ್-100 ರ್‍ಯಾಂಕಿಂಗ್ ಯಾದಿಯಲ್ಲಿ ಕಾಣಿಸಿಕೊಂಡು ಈ ಅರ್ಹತೆ ಸಂಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.