World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್
Team Udayavani, Sep 24, 2023, 5:58 PM IST
ಮುಂಬೈ: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಅವರು ವಿಶ್ವಕಪ್ 2023 ರಲ್ಲಿ ಅಸಾಧಾರಣ ಬ್ಯಾಟಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಮಾಜಿ ಬ್ಯಾಟರ್ ಗೌತಮ್ ಗಂಭೀರ್ ಅಭಿಪ್ರಾಯ ಪಟ್ಟಿದ್ದಾರೆ.
ರೋಹಿತ್ ಶರ್ಮಾ, ಕೇನ್ ವಿಲಿಯಮ್ಸನ್, ವಿರಾಟ್ ಕೊಹ್ಲಿ ಮತ್ತು ಜೋ ರೂಟ್ ಅವರಂತಹ ದಿಗ್ಗಜರನ್ನು ಬಾಬರ್ ಮೀರಿಸಬಹುದು ಎಂದು ಗಂಭೀರ್ ಹೇಳಿದರು.
ಮುಲ್ತಾನ್ ನಲ್ಲಿ ನಡೆದ ಏಷ್ಯಾ ಕಪ್ ನ ಆರಂಭಿಕ ಪಂದ್ಯದಲ್ಲಿ ಬಲಗೈ ಆಟಗಾರ ಬಾಬರ್ ಅಜಂ ನೇಪಾಳ ವಿರುದ್ಧ 151 ರನ್ ಗಳಿಸಿದ್ದರು. ಆದರೆ ನಂತರ ಪಂದ್ಯಗಳಲ್ಲಿ ಅವರು ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು.
“ಬಾಬರ್ ಅಜಂ ಈ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ತೋರಬಹುದು. ಬ್ಯಾಟಿಂಗ್ ಮಾಡಲು ತುಂಬಾ ಸಮಯವಿರುವ ಬಹಳಷ್ಟು ಆಟಗಾರರನ್ನು ನಾನು ನೋಡಿದ್ದೇನೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೇನ್ ವಿಲಿಯಮ್ಸನ್ ಮತ್ತು ಜೋ ರೂಟ್ ಇದ್ದಾರೆ ಎಂದು ನಾನು ಭಾವಿಸುತ್ತೇನೆ, ಆದರೆ ಬಾಬರ್ ಅಜಮ್ ವಿಭಿನ್ನ ಮಟ್ಟದ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಗಂಭೀರ್ ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಬಾಬರ್ ಪ್ರಸ್ತುತ ಏಕದಿನ ಕ್ರಿಕೆಟ್ ನಲ್ಲಿ ಅಗ್ರ ಶ್ರೇಯಾಂಕದ ಬ್ಯಾಟರ್ ಆಗಿದ್ದು, 108 ಪಂದ್ಯಗಳಿಂದ 58.16 ಸರಾಸರಿಯಲ್ಲಿ 5409 ರನ್ ಗಳಿಸಿದ್ದಾರೆ. 19 ಶತಕಗಳು ಮತ್ತು 28 ಅರ್ಧ ಶತಕಗಳೊಂದಿಗೆ 89.12 ಸ್ಟ್ರೈಕ್-ರೇಟ್ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.