ಭಜರಂಗ್‌ಗೆ ಒಲಿಯಲಿದೆ ಖೇಲ್‌ ರತ್ನ

ಖ್ಯಾತ ಕುಸ್ತಿಪಟುವಿಗೆ ಪ್ರತಿಷ್ಠಿತ ಗೌರವ; 12 ಸದಸ್ಯರ ಆಯ್ಕೆ ಸಮಿತಿ ನಿರ್ಧಾರ

Team Udayavani, Aug 17, 2019, 6:00 AM IST

Bajrang-Poonia,

ಹೊಸದಿಲ್ಲಿ: ಏಶ್ಯನ್‌ ಗೇಮ್ಸ್‌ ಮತ್ತು ಕಾಮನ್ವೆಲ್ತ್‌ ಗೇಮ್ಸ್‌ ಬಂಗಾರ ಪದಕ ವಿಜೇತ ಕುಸ್ತಿಪಟು ಭಜರಂಗ್‌ ಪೂನಿಯ ಅವರನ್ನು ಪ್ರತಿಷ್ಠಿತ “ರಾಜೀವ್‌ ಗಾಂಧಿ ಖೇಲ್‌ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಎಂ.ಸಿ. ಮೇರಿ ಕೋಮ್‌, ಭೈಚುಂಗ್‌ ಭುಟಿಯ ಅವರನ್ನೊಳಗೊಂಡ 12 ಸದಸ್ಯರ ಆಯ್ಕೆ ಸಮಿತಿ ಭಜರಂಗ್‌ ಪೂನಿಯ ಹೆಸರನ್ನು ಅಂತಿಮಗೊಳಿಸಿತು. ಶುಕ್ರವಾರ ಆರಂಭವಾದ 2 ದಿನಗಳ ಆಯ್ಕೆ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಭಜರಂಗ್‌ ಪೂನಿಯ ಜತೆಗೆ ವಿನೇಶ್‌ ಪೋಗಟ್‌ ಹೆಸರನ್ನೂ ಖೇಲ್‌ ರತ್ನಕ್ಕಾಗಿ ಭಾರತೀಯ ಕುಸ್ತಿ ಫೆಡರೇಶನ್‌ ನಾಮನಿರ್ದೇಶ ಮಾಡಿತ್ತು.
ಮೂಲಗಳ ಪ್ರಕಾರ, ಉಳಿದ ಅರ್ಜುನ ಹಾಗೂ ದ್ರೋಣಾಚಾರ್ಯ ಪ್ರಶಸ್ತಿಗೆ ಕ್ರೀಡಾಪಟುಗಳ ಹೆಸರನ್ನು ಅಂತಿಮಗೊಳಿಸುವ ಮುನ್ನ ಖೇಲ್‌ ರತ್ನಕ್ಕೆ ಇನ್ನೂ ಒಬ್ಬರ ಹೆಸರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಕಳೆದ ವರ್ಷ ವಿರಾಟ್‌ ಕೊಹ್ಲಿ ಮತ್ತು ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು.

“ಖೇಲ್‌ ರತ್ನ ಪ್ರಶಸ್ತಿಗೆ ಭಜರಂಗ್‌ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದು ಅವಿ ರೋಧ ಆಯ್ಕೆಯಾಗಿತ್ತು. ಜಾಗತಿಕ ಮಟ್ಟದಲ್ಲಿ ತೋರ್ಪ ಡಿಸುತ್ತಿರುವ ಸ್ಥಿರವಾದ ಪ್ರದರ್ಶನ ಹಾಗೂ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ ಸಾಧನೆಗಾಗಿ ಭಜರಂಗ್‌ ಅವರನ್ನು ಈ ಪ್ರಶಸ್ತಿಗಾಗಿ ಆರಿಸಲಾಗಿದೆ’ ಎಂಬುದಾಗಿ ಆಯ್ಕೆ ಸಮಿತಿ ಮೂಲಗಳು ತಿಳಿಸಿವೆ.

ಭಜರಂಗ್‌ ಸಾಧನೆ
ಕಳೆದ ವರ್ಷ ಜಕಾರ್ತಾ ಏಶ್ಯಾಡ್‌ನ‌ಲ್ಲಿ ಭಜರಂಗ್‌ 65 ಕೆಜಿ ಫ್ರೀಸ್ಟೈಲ್‌ ಕುಸ್ತಿ ಸ್ಪರ್ಧೆಯಲ್ಲಿ ಬಂಗಾರದ ಪದಕ ಜಯಿಸಿದ್ದರು. ಬಳಿಕ ಗೋಲ್ಡ್‌ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌ನಲ್ಲೂ ಇದೇ ವಿಭಾಗದಲ್ಲಿ ಸ್ವರ್ಣ ಸಾಧನೆ ಮಾಡಿದ್ದರು. ಇತ್ತೀಚೆಗೆ ಟಿಬಿಲಿಸಿ ಗ್ರ್ಯಾನ್‌ಪ್ರಿ ಕೂಟದಲ್ಲಿ ಚಿನ್ನದ ಪದಕ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 2 ಪದಕ ಗೆದ್ದಿರುವ ಭಜರಂಗ್‌, ಚೀನದಲ್ಲಿ ನಡೆದ ಏಶ್ಯನ್‌ ರೆಸ್ಲಿಂಗ್‌ನಲ್ಲೂ ಚಾಂಪಿಯನ್‌ ಆಗಿದ್ದರು. ಮುಂದಿನ ವರ್ಷದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕದ ಭರವಸೆಯಾಗಿದ್ದಾರೆ.

ಪ್ರಶಸ್ತಿ ಯಾವತ್ತೂ ಯೋಗ್ಯರನ್ನು ಹುಡುಕಿಕೊಂಡು ಬರಬೇಕು ಎಂಬುದು ನನ್ನ ಭಾವನೆ. ಈ ಪ್ರತಿಷ್ಠಿತ ಗೌರವಕ್ಕೆ ಅರ್ಹವಾಗುವಷ್ಟು ಸಾಧನೆ ಯನ್ನು ನಾನು ಖಂಡಿತವಾಗಿಯೂ ಮಾಡಿದ್ದೇನೆ.
– ಭಜರಂಗ್‌ ಪೂನಿಯ

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.