T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Team Udayavani, Jun 30, 2024, 8:09 PM IST
ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಸಮರ ಜಯಿಸಿ ಎರಡನೇ ಬಾರಿಗೆ T20 ವಿಶ್ವಕಪ್ ಮುಡಿಗೇರಿಸಿಕೊಂಡ ರೋಹಿತ್ ಶರ್ಮ ಬಳಗಕ್ಕೆ ಬಿಸಿಸಿಐ ಭಾನುವಾರ ಭರ್ಜರಿ ಬಹುಮಾನ ಘೋಷಿಸಿದೆ.
ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಬಹುಮಾನ ಘೋಷಿಸಿದ್ದಾರೆ. ”ಐಸಿಸಿ ಪುರುಷರ T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ತಂಡವು ಪಂದ್ಯಾವಳಿಯ ಉದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬಂದಿಗೆ ಅಭಿನಂದನೆಗಳು’ ಎಂದು ಪೋಸ್ಟ್ ಮಾಡಿದ್ದಾರೆ.
ರೋಚಕ ಹೋರಾಟದಲ್ಲಿ ಜಯಿಸಿದ ಬಳಿಕ ಭಾರತದೆಲ್ಲೆಡೆ ಕ್ರಿಕೆಟ್ ಪ್ರೇಮಿಗಳು ಸಂಭ್ರಮ ಆಚರಿಸಿಕೊಳ್ಳುತ್ತಿದ್ದಾರೆ. ತಂಡದ ಮೂವರು ಹಿರಿಯ ಆಟಗಾರರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರು ಗೆಲುವಿನ ಸಂಭ್ರಮಾಚರಣೆಯ ವೇಳೆಯಲ್ಲೇ T20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ.
I am pleased to announce prize money of INR 125 Crores for Team India for winning the ICC Men’s T20 World Cup 2024. The team has showcased exceptional talent, determination, and sportsmanship throughout the tournament. Congratulations to all the players, coaches, and support… pic.twitter.com/KINRLSexsD
— Jay Shah (@JayShah) June 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.