ಕ್ರಿಕೆಟಿಗ ರಿಂಕುಗೆ 3 ತಿಂಗಳು ನಿಷೇಧ ಹೇರಿದ ಬಿಸಿಸಿಐ
Team Udayavani, May 31, 2019, 6:00 AM IST
ನವದೆಹಲಿ: ನಿರಾಕ್ಷೇಪಣಾ ಪತ್ರವನ್ನು ಪಡೆಯದೇ ಅಬುಧಾಬಿ ಕ್ರಿಕೆಟ್ ಟಿ20 ಕೂಟವೊಂದರಲ್ಲಿ ಪಾಲ್ಗೊಂಡ ಉತ್ತರ ಪ್ರದೇಶದ ಕ್ರಿಕೆಟಿಗ ರಿಂಕು ಸಿಂಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 3 ತಿಂಗಳು ನಿಷೇಧ ಹೇರಿದೆ.
ರಿಂಕು ಸಿಂಗ್ ಇತ್ತೀಚೆಗೆ ಮುಕ್ತಾಯಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಕೂಟದಲ್ಲಿ ಕೋಲ್ಕತ ನೈಟ್ ರೈಡರ್ ತಂಡವನ್ನು ಪ್ರತಿನಿಧಿಸಿದ್ದರು. ರಿಂಕು ನಿರಾಕ್ಷೇಪಣಾ ಪತ್ರ ಹೊಂದಿಲ್ಲದೆ ದುಬೈ ಕೂಟದಲ್ಲಿ ಪಾಲ್ಗೊಂಡಿದ್ದು ನಿಯಮ ಉಲ್ಲಂಘನೆ.
ಹೀಗಾಗಿ ತಕ್ಷಣಕ್ಕೆ ಅನ್ವಯವಾಗುವಂತೆ ನಿಷೇಧ ಮಾಡಲಾಗುತ್ತಿದೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ಜೂ.1ರಿಂದ ರಿಂಕುಗೆ ಶಿಕ್ಷೆ ಆರಂಭವಾಗಲಿದೆ. ಸದ್ಯ ಶ್ರೀಲಂಕಾ ‘ಎ’ ತಂಡದ ವಿರುದ್ಧ ಸರಣಿಯಲ್ಲಿ ಭಾರತ ‘ಎ’ ತಂಡವನ್ನು ಪ್ರತಿನಿಧಿಸುತ್ತಿರುವ ರಿಂಕು ಸಿಂಗ್ ಮುಂದಿನ ಪಂದ್ಯಗಳಿಂದ ಹೊರಬಿದ್ದಿದ್ದಾರೆ.
21 ವರ್ಷದ ರಿಂಕು ಸಿಂಗ್ ದುಬೈ ಟಿ20ನಲ್ಲಿ ಡೆಕ್ಕನ್ ಗ್ಲಾಡಿಯೆಟರ್ ತಂಡವನ್ನು ಪ್ರತಿನಿಧಿಸಿದ್ದರು. 104 ರನ್ ಜತೆಗೆ 2 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು. ದೇಶಿ ಕ್ರಿಕೆಟ್ ಕೂಟದಲ್ಲಿ ರಿಂಕು 19 ಪಂದ್ಯವನ್ನು ಆಡಿ 71.52 ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದಾರೆ. 24 ಲಿಸ್ಟ್ ‘ಎ’ ಕ್ರಿಕೆಟ್ ಕೂಟದಲ್ಲಿ ಪಾಲ್ಗೊಂಡಿರುವ ಅವರು 43.05 ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.