BCCI: ಹಾರ್ದಿಕ್ ಪಾಂಡ್ಯ ನಾಯಕತ್ವ ಕಳೆದುಕೊಳ್ಳಲು ಅಜಿತ್ ಅಗರ್ಕರ್ ಕಾರಣ!
Team Udayavani, Jul 21, 2024, 4:04 PM IST
ಮುಂಬೈ: ಟೀಂ ಇಂಡಿಯಾದ ಮುಂದಿನ ನಾಯಕ ಎಂದೇ ಬಿಂಬಿಸಲಾಗಿದ್ದ ಹಾರ್ದಿಕ್ ಪಾಂಡ್ಯ (Hardik Pandya) ಅವರ ಕನಸು ನುಚ್ಚುನೂರಾಗಿದೆ. ರೋಹಿತ್ ಶರ್ಮಾ (Rohit Sharma) ಅವರು ಟಿ20 ಕ್ರಿಕೆಟ್ ಗೆ ವಿದಾಯ ಹೇಳಿದ ಬಳಿಕ ಹಾರ್ದಿಕ್ ಅವರನ್ನೇ ಚುಟುಕು ಮಾದರಿ ಕ್ರಿಕೆಟ್ ತಂಡದ ನಾಯಕರನ್ನಾಗಿ ಮಾಡಲಾಗಿತ್ತು ಎಂದು ಹೇಳಲಾಗಿತ್ತು. ಆದರೆ ಕೆಲ ದಿನಗಳ ಹಿಂದೆ ಪ್ರಕಟಿಸಲಾದ ಲಂಕಾ ಪ್ರವಾಸದ ತಂಡದಲ್ಲಿ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ಯಾದವ್ (Surya Kumar Yadav) ಅವರಿಗೆ ನಾಯಕತ್ವ ನೀಡಲಾಗಿದೆ.
ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನಾಯಕ ಸೂರ್ಯಕುಮಾರ್ ಅವರಿಗೆ ಉಪನಾಯಕರಾಗಿ ಶುಭ್ಮನ್ ಗಿಲ್ ಅವರನ್ನು ನೇಮಿಸಲಾಗಿದೆ. ಹೊಸ ಕೋಚ್ ಆಗಿ ನೇಮಕವಾದ ಗೌತಮ್ ಗಂಭೀರ್ ಅವರ ಕಾರಣದಿಂದ ಪಾಂಡ್ಯ ನಾಯಕತ್ವ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿತ್ತು.
ಆದರೆ ಟಿ20 ತಂಡದ ನಾಯಕತ್ವ ಬದಲಾವಣೆಯಲ್ಲಿ ಗೌತಮ್ ಗಂಭೀರ್ ಮಾತ್ರವಲ್ಲದೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಪಾತ್ರವೂ ಇದೆ ಎಂದು ಪಿಟಿಐ ವರದಿ ಮಾಡಿದೆ.
ಮುಖ್ಯ ಆಯ್ಕೆಗಾರ ಅಗರ್ಕರ್ ಅವರು ಹಾರ್ದಿಕ್ ಅವರ ಪಂದ್ಯ ತಂತ್ರದ ಅರಿವಿನ ಬಗ್ಗೆ ಸಂತಸಗೊಂಡಿಲ್ಲ. ಅಂತಾರಾಷ್ಟ್ರೀಯ ನಾಯಕನಿಗೆ ಇರಬೇಕಾದಷ್ಟು ತಂತ್ರಗಾರಿಕೆಯ ಸಮರ್ಥತೆ ಪಾಂಡ್ಯಗಿಲ್ಲ ಎಂದು ಅಜಿತ್ ಅಭಿಪ್ರಾಯಪಟ್ಟಿದ್ದಾರೆ ಎಂದು ವರದಿ ಹೇಳಿದೆ.
ಮುಂದಿನ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಕ್ರಿಕೆಟ್ ಜೀವನ ಸುಲಲಿತವಾಗಿ ಇರುವುದಿಲ್ಲ ಎಂದು ಮತ್ತೊಮ್ಮೆ ಸಾಬೀತಾಗಿದೆ. ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಪಾಂಡ್ಯ ಬಯಸಿದರೆ, ಅವರು ಬರೋಡಾ ತಂಡದ ಪರವಾಗಿ ವಿಜಯ್ ಹಜಾರೆ ಟ್ರೋಫಿಯನ್ನು ಡಿಸೆಂಬರ್ ನಲ್ಲಿ ಆಡಬೇಕಾಗುತ್ತದೆ. ಅಲ್ಲಿ ಬೌಲಿಂಗ್ ಮಾಡಿ ತನ್ನ ಫಿಟ್ನೆಸ್ ಸಾಬೀತು ಪಡಿಸಬೇಕಿದೆ ಎಂದು ಸೂಚಿಸಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.