ಜಾರಿ ನಿರ್ದೇಶನಾಲಯದಿಂದ ಬಿಸಿಸಿಐ ಅಧಿಕಾರಿಗಳ ವಿಚಾರಣೆ
Team Udayavani, Mar 9, 2018, 6:40 AM IST
ಮುಂಬಯಿ: ಬಿಸಿಸಿಐ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (ಎಫ್ಇಎಂಎ) ಉಲ್ಲಂಘಿಸಿರುವ ಆರೋಪ ಎದುರಾಗಿದೆ. ಈ ಕುರಿತಂತೆ ಜಾರಿ ನಿರ್ದೇಶನಾಲಯ ಬಿಸಿಸಿಐ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ.
2009ರಲ್ಲಿ ಐಪಿಎಲ್ ವಿದೇಶದಲ್ಲಿ ನಡೆದಿತ್ತು. ಆಗ ಬಿಸಿಸಿಐ ಅಧ್ಯಕ್ಷರಾಗಿ ಶಶಾಂಕ್ ಮನೋಹರ್ ಇದ್ದರು. ಅವರು ಖರ್ಚಾಗಿಂತ ಕಡಿಮೆ ಹಣವನ್ನು ತೋರಿಸಲಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಐಪಿಎಲ್ ಕುರಿತಂತೆ ತೆಗೆದುಕೊಂಡ ನಿರ್ಧಾರಗಳಲ್ಲಿ ಎಷ್ಟೋ ವಿಷಯ ತನಗೆ ಗೊತ್ತೇ ಇರಲಿಲ್ಲ ಎಂದಿದ್ದಾರೆ. ಇದು ಪ್ರಕರಣಕ್ಕೆ ಟ್ವಿಸ್ಟ್ ನೀಡಿದೆ. ಒಟ್ಟಾರೆ ಹಣದ ದುರುಪಯೋಗ ನಡೆದಿದೆ ಎನ್ನುವ ಸಾಧ್ಯತೆ ದಟ್ಟವಾಗಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಸಿಸಿಐನ ಮುಖ್ಯ ಹಣಕಾಸು ನಿರ್ವಹಣಾ ಅಧಿಕಾರಿ ಪ್ರಸನ್ನ ಕಣ್ಣನ್, ಲಲಿತ್ ಮೋದಿ ಪರ ವಾದ ಮಾಡಿದ್ದ ವಕೀಲ ಸ್ವದೀಪ್ ಸಿಂಗ್ ಮತ್ತು ಅಭಿಷೇಕ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ತೀವ್ರ ವಿಚಾರಣೆ ನಡೆಸುತ್ತಿದೆ. ಸದ್ಯ ಯಾವುದೇ ಮಾಹಿತಿಯೂ ಹೊರಬಿದ್ದಿಲ್ಲ. ಶ್ರೀನಿವಾಸನ್ ಆಗ ಬಿಸಿಸಿಐನಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದರು. ಲಲಿತ್ ಮೋದಿ ಐಪಿಎಲ್‌ನ ಸಂಸ್ಥಾಪಕರಾಗಿದ್ದರು. ಇವರಿಬ್ಬರೂ ಈಗ ಬಿಸಿಸಿಐನಿಂದ ಅಮಾನತುಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.