BCCI ಚಿಂತನೆ; ದೇಶೀಯ ಕ್ರಿಕೆಟ್ಗೆ ಹೊಸ ರೂಪ
Team Udayavani, May 12, 2024, 6:30 AM IST
ಮುಂಬಯಿ: 2024-25ನೇ ಸಾಲಿಯ ದೇಶೀಯ ಕ್ರಿಕೆಟ್ ಪಂದ್ಯಾವಳಿಗಳಿಗೆ ಸಂಬಂಧಿಸಿದಂತೆ ಹಿಂದೆಂದೂ ಕಂಡಿರದಂತಹ ಬದಲಾವಣೆಗಳನ್ನು ತರಲು ಬಿಸಿಸಿಐ ನಿರ್ಧರಿಸಿದೆ. ಪಂದ್ಯಾವಳಿಯ ದಿನಾಂಕ ಇನ್ನೂ ಘೋಷಣೆ ಮಾಡಿರದಿದ್ದರೂ ಬದಲಾವಣೆಗಳನ್ನು ತರಲು ಪ್ರಸ್ತಾವ ಮಂಡಿಸಿದೆ.
2 ಹಂತಗಳಲ್ಲಿ ರಣಜಿ
ಪ್ರತಿಷ್ಠಿತ ರಣಜಿ ಟ್ರೋಫಿಯನ್ನು 2 ವಿಭಾಗಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ದುಲೀಪ್ ಟ್ರೋಫಿಯ ಬಳಿಕ ಮೊದಲ 5 ಪಂದ್ಯಗಳನ್ನು ನಡೆಸಿದರೆ, ಕೊನೆಯ ಪಂದ್ಯಗಳು ಹಾಗೂ ನಾಕ್ಔಟ್ ಪಂದ್ಯಗಳನ್ನು ವಿಜಯ್ ಹಜಾರೆ ಟ್ರೋಫಿ ಬಳಿಕ ನಡೆಸಲು ತೀರ್ಮಾನಿಸಲಾಗಿದೆ. ರಣಜಿ ಪಂದ್ಯಗಳ ನಡುವಲ್ಲಿ ವೈಟ್ ಬಾಲ್ ಟೂರ್ನಿಗಳಾದ ಇರಾನಿ, ಸಯ್ಯದ್ ಮುಷ್ತಾಕ್ ಅಲಿ, ವಿಜಯ್ ಹಜಾರೆ ಟ್ರೋಫಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಆಟಗಾರರಿಗೆ ವಿಶ್ರಾಂತಿ ನೀಡುವ ಸಲುವಾಗಿ ಈ ವಿಧಾನ ಅನುಸರಿಸಲಾಗುತ್ತಿದೆ ಎಂದು ಜಯ್ ಶಾ ಹೇಳಿದ್ದಾರೆ.
ರಾಷ್ಟ್ರೀಯ ಆಯ್ಕೆಗಾರರು ಭಾಗಿ
ಮುಂಬರುವ ದುಲೀಪ್ ಟ್ರೋಫಿಗೆ 4 ತಂಡಗಳ ಆಟಗಾರರನ್ನು ರಾಷ್ಟ್ರೀಯ ಆಯ್ಕೆಗಾರರು ಆಯ್ಕೆ ಮಾಡಲಿದ್ದಾರೆ. ಈ ಮೊದಲು ವಲಯಾಧಾರಿತವಾಗಿ ಆಟಗಾರರನ್ನು ಆಯ್ಕೆ ಮಾಡಲಾಗುತ್ತಿತ್ತು.
ಪಂದ್ಯಗಳ ನಡುವಿನ ಅಂತರ ಹೆಚ್ಚಳ
ರಣಜಿ ಪಂದ್ಯಗಳ ನಡುವೆ ಸದ್ಯಕ್ಕೆ ಮೂರರಿಂದ ನಾಲ್ಕು ದಿನಗಳ ಅಂತರ ನೀಡಲಾಗುತ್ತಿದೆ. ಇದನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಆಟಗಾರರು ಗಾಯಗೊಳ್ಳುವುದನ್ನು ತಪ್ಪಿಸಲು ಮತ್ತು ನಿಗದಿತವಾಗಿ ವಿಶ್ರಾಂತಿ ತೆಗೆದುಕೊಳ್ಳುವು ದಕ್ಕಾಗಿ ಈ ನಿಯಮ ಜಾರಿ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ
Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.