ಫಿಕ್ಸಿಂಗ್: ಶ್ರೀಶಾಂತ್‌ಗೆ ಗ್ರಹಣ ಮೋಕ್ಷ
Team Udayavani, Aug 8, 2017, 11:30 AM IST
ಕೊಚ್ಚಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಕೇರಳ ವೇಗಿ ಎಸ್. ಶ್ರೀಶಾಂತ್ ಮೇಲೆ ಬಿಸಿಸಿಐ ಹೇರಿದ ಆಜೀವ ನಿಷೇಧವನ್ನು ಕೇರಳ ಹೈಕೋರ್ಟ್ ತೆರವು ಗೊಳಿಸಿದೆ.
2 ವರ್ಷದ ಹಿಂದೆ ದಿಲ್ಲಿ ಅಧೀನ ನ್ಯಾಯಾಲಯ ಕೂಡ ಶ್ರೀಶಾಂತ್ ಅವರನ್ನು ನಿರಪರಾಧಿ ಎಂದು ಘೋಷಿಸಿತ್ತು. ಆದರೂ ಬಿಸಿಸಿಐ ನಿಷೇಧ ಹಿಂದಕ್ಕೆ ತೆಗೆದುಕೊಂಡಿರಲಿಲ್ಲ. ಕೇರಳ ಕ್ರಿಕೆಟಿಗನಿಗೆ ಕ್ರಿಕೆಟ್ ಕೂಟಗಳಲ್ಲಿ ಆಡುವ ಅವಕಾಶ ನೀಡಿರಲಿಲ್ಲ. ಕೆಲವು ತಿಂಗಳ ಹಿಂದೆಯಷ್ಟೇ ಬಿಸಿಸಿಐಗೆ ಸ್ಕಾಟ್ಲೆಂಡ್ ಲೀಗ್‌ನಲ್ಲಿ ಆಡಲು ನಿರಾಕ್ಷೇಪಣಾ ಪತ್ರವನ್ನು ಶ್ರೀಶಾಂತ್ ಕೇಳಿದ್ದರು. ಇದನ್ನು ಬಿಸಿಸಿಐ ನಿರಾಕರಿಸಿತ್ತು. ಈ ಬೆನ್ನಲ್ಲೇ ಶ್ರೀಶಾಂತ್ ಕೇರಳ ಹೈಕೋರ್ಟ್‌ನಲ್ಲಿ ಬಿಸಿಸಿಐ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ನ್ಯಾಯಮೂರ್ತಿ ಮುಹಮ್ಮದ್ ಮುಷ್ತಾಕ್ ಏಕಸದಸ್ಯ ಪೀಠ ಸೋಮವಾರ ಕೈಗೆತ್ತಿ ಕೊಂಡಿತು. ಬಿಸಿಸಿಐ ಶ್ರೀಶಾಂತ್ ವಿರುದ್ಧ ಉದ್ದೇಶ ಪೂರ್ವಕವಾಗಿ ಪ್ರಕರಣ ಕೈಗೆತ್ತಿಕೊಂಡಂತಿದೆ ಎಂದು ಅಭಿ ಪ್ರಾಯಪಟ್ಟಿತು. ಮಾತ್ರವಲ್ಲ ಶ್ರೀಶಾಂತ್ ಮೇಲಿನ ನಿಷೇಧ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಸೂಚಿಸಿತು. ಈ ಎಲ್ಲ ಬೆಳವಣಿಗೆಗಳಿಗೆ ಬಿಸಿಸಿಐಗೆ ಈಗ ಹಿನ್ನಡೆಯಾಗಿದೆ.
ಸುಪ್ರೀಂ ಮೆಟ್ಟಿಲೇರಲಿದೆ ಬಿಸಿಸಿಐ?
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಸಿಸಿಐ ಮುಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಈ ಹಿಂದೆ ದಿಲ್ಲಿ ಅಧೀನ ನ್ಯಾಯಾಲಯ ಫಿಕ್ಸಿಂಗ್‌ಗೆ ಸಂಬಂಧ ಪಟ್ಟಂತೆ ಶ್ರೀಶಾಂತ್ ರನ್ನು ನಿರಪರಾಧಿ ಎಂದು ಪ್ರಕಟಿಸಿತ್ತು. ಇದೀಗ ಕೇರಳ ಹೈಕೋರ್ಟ್ ಕೂಡ ಶ್ರೀಶಾಂತ್ ನಿರಪರಾಧಿ ಎಂದಿದೆ. ಇದೆಲ್ಲದರಿಂದ ಬಿಸಿಸಿಐ ತಲೆಕೆಡಿಸಿಕೊಂಡಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಮುಂದುವರಿಯುವುದಾಗಿ ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್ ಬುಮ್ರಾ ಹೆಸರು
First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್ ಡ್ರಾ
ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್
INDvAUS; ಅಭಿಮಾನಿಗಳ ಕಣ್ಣು ಕೆಂಪಗಾಗಿಸಿದ ಹೆಡ್ ವಿಚಿತ್ರ ಸೆಲೆಬ್ರೇಶನ್: ಇದರ ಅರ್ಥವೇನು?
INDvsAUS; ಮಾನಸಿಕವಾಗಿ ಕಾಡುತ್ತಿದೆ..: ಮೆಲ್ಬೋರ್ನ್ ಸೋಲಿನ ಬಳಿಕ ನಾಯಕ ರೋಹಿತ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.