ಅರ್ಜುನ: ಧವನ್, ಸ್ಮತಿ ಶಿಫಾರಸು
Team Udayavani, Apr 26, 2018, 6:00 AM IST
ಹೊಸದಿಲ್ಲಿ: ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ವನಿತಾ ಆಟಗಾರ್ತಿ ಸ್ಮತಿ ಮಂಧನಾ ಅವರ ಹೆಸರನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಶಿಫಾರಸು ಮಾಡಿದೆ ಎಂದು ಬಿಸಿಸಿಐಯ ಪ್ರಭಾರ ಕಾರ್ಯದರ್ಶಿ ಅಮಿತಾಭ್ ಚೌಧರಿ ತಿಳಿಸಿದ್ದಾರೆ.
32ರ ಹರೆಯದ ಧವನ್ ಪ್ರಸ್ತುತ ಐಪಿಎಲ್‌ನಲ್ಲಿ ಸನ್‌ರೈಸರ್ ಹೈದರಾಬಾದ್ ತಂಡದ ಪರ ಆಡುತ್ತಿದ್ದಾರೆ. ಅವರು ಭಾರತ ಪರ ಮೂರು ಮಾದರಿಯ ಕ್ರಿಕೆಟ್‌ನಲ್ಲೂ ಆಡುತ್ತಿದ್ದಾರೆ. 2013ರಲ್ಲಿ ಆಸ್ಟ್ರೇಲಿಯ ವಿರುದ್ಧ ಟೆಸ್ಟ್‌ಗೆ ಪಾದಾರ್ಪಣೆಗೈದ ಪಂದ್ಯದಲ್ಲಿ ಶತಕ ಸಿಡಿಸಿದ ಬಳಿಕ ಅವರು ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದಾರೆ.
21ರ ಹರೆಯದ ಸ್ಮತಿ ಮಂಧನಾ ವನಿತಾ ಕ್ರಿಕೆಟ್ ತಂಡವು ಕಳೆದ ವರ್ಷ ಐಸಿಸಿ ವನಿತಾ ವಿಶ್ವಕಪ್‌ನಲ್ಲಿ ಫೈನಲ್ ಹಂತಕ್ಕೇರಲು ಪ್ರಮುಖ ಪಾತ್ರ ವಹಿಸಿದ್ದರು. ಈ ವರ್ಷ ಶ್ರೇಷ್ಠ ನಿರ್ವಹಣೆ ನೀಡುತ್ತಿರುವ ಅವರು ಐಸಿಸಿ ವನಿತಾ ರ್‍ಯಾಂಕಿಂಗ್‌ನಲ್ಲಿ ತನ್ನ ಜೀವನಶ್ರೇಷ್ಠ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಕಳೆದ 9 ಇನ್ನಿಂಗ್ಸ್ ಗಳಲ್ಲಿ ಮಂಧನಾ ಐದು ಅರ್ಧಶತಕ ಸಹಿತ 531 ರನ್ ಗಳಿಸಿದ್ದಾರೆ.
ವಿಶ್ವ ಇಲೆವೆನ್ ತಂಡದಲ್ಲಿ ಹಾರ್ದಿಕ್, ದಿನೇಶ್
ವಿಶ್ವ ಇಲೆವೆನ್ ತಂಡದಲ್ಲಿ ಭಾರತದ ಪ್ರತಿನಿಧಿಯಾಗಿ ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ಅವರ ಹೆಸರನ್ನು ಬಿಸಿಸಿಐ ನೀಡಿದೆ. ಲಾರ್ಡ್ಸ್ ನಲ್ಲಿ ಮೇ 31ರಂದು ನಡೆಯುವ ಸಹಾಯಾರ್ಥ ಟ್ವೆಂಟಿ20 ಪಂದ್ಯದಲ್ಲಿ ವಿಶ್ವ ಇಲೆವೆನ್ ತಂಡವು ವೆಸ್ಟ್‌ಇಂಡೀಸ್ ತಂಡವನ್ನು ಎದುರಿಸಲಿದೆ. ಕಳೆದ ವರ್ಷ ಕೆರಿಬಿಯನ್‌ನಲ್ಲಿ ಸಂಭವಿಸಿದ ಭೀಕರ ಸುಂಟರಗಾಳಿಯಿಂದ ಹಾನಿಗೊಳಗಾದ ಕ್ರೀಡಾಂಗಣಗಳನ್ನು ಪುನರ್ ನಿರ್ಮಿಸುವ ಉದ್ದೇಶದಿಂದ ನಿಧಿ ಸಂಗ್ರಹಕ್ಕಾಗಿ ಈ ಸಹಾಯಾರ್ಥ ಪಂದ್ಯವನ್ನು ಆಯೋಜಿಸಲಾಗಿದೆ.
ಹಾಲಿ ಟ್ವೆಂಟಿ20 ವಿಶ್ವ ಚಾಂಪಿಯನ್ ಆಗಿರುವ ವೆಸ್ಟ್‌ಇಂಡೀಸ್ ತಂಡವನ್ನು ಕಾರ್ಲೋಸ್ ಬ್ರಾತ್‌ವೇಟ್ ಮುನ್ನಡೆಸಲಿದ್ದಾರೆ. ಕ್ರಿಸ್ ಗೇಲ್, ಮಾರ್ಲಾನ್ ಸಾಮ್ಯುಯೆಲ್ಸ್, ಬದ್ರಿ, ಆ್ಯಂಡ್ರೆ ರಸೆಲ್ ಮುಂತಾದವರು ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.