ಇಂದು ಬಿಸಿಸಿಐ ವಿಶೇಷ ಸಭೆ: ನಿರೀಕ್ಷೆಗಳ ಭಾರ


Team Udayavani, Jun 26, 2017, 3:45 AM IST

BCCi-25.jpg

ಮುಂಬೈ: ಬಿಸಿಸಿಐ ಬಹು ನಿರೀಕ್ಷಿತಸರ್ವಸದಸ್ಯರ ವಿಶೇಷ ಸಭೆ ಸೋಮವಾರ ನಡೆಯಲಿದೆ. ಒಂದು ರಾಜ್ಯಕ್ಕೆ ಒಂದು ಮತವನ್ನು ರದ್ದು ಮಾಡುವುದು, ಮೂವರು ಸದಸ್ಯರ ಬಿಸಿಸಿಐ ಆಯ್ಕೆ ಸಮಿತಿಯನ್ನು ಮತ್ತೆ ಐದಕ್ಕೇರಿಸುವುದು, 3 ವರ್ಷಗಳ ಕಡ್ಡಾಯ ವಿಶ್ರಾಂತಿಯನ್ನು ರದ್ದು ಮಾಡುವುದು ಸಭೆಯಲ್ಲಿ ಮುಖ್ಯ ಚರ್ಚಾ ವಿಷಯವಾಗಲಿದೆ. ಇದನ್ನು ಹೊರತುಪಡಿಸಿ ಇತ್ತೀಚೆಗೆ ಭಾರತೀಯ ಕ್ರಿಕೆಟ್‌ ಕೋಚ್‌ ಹುದ್ದೆಗೆ ರಾಜೀನಾಮೆ ನೀಡಿರುವ ಅನಿಲ್‌ ಕುಂಬ್ಳೆ ವಿವಾದವೂ ಚರ್ಚೆಗೊಳಗಾಗಲಿದೆ.

ಕುಂಬ್ಳೆ ವಿವಾದ ಸಭೆಯ ವಿಚಾರಸೂಚಿಯಲ್ಲಿಲ್ಲ. ಆದರೂ ಸದಸ್ಯರ ಪ್ರಶ್ನೆಗಳ ಮೇರೆಗೆ ಕುಂಬ್ಳೆ ವಿವಾದವನ್ನು ಪ್ರಸ್ತಾಪಿಸಲು ಯಾವುದೇ ಸಮಸ್ಯೆಯಿಲ್ಲ ಎಂದು ಬಿಸಿಸಿಐ ತಿಳಿಸಿದೆ. 

ಸಭೆಯಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಅನರ್ಹರಾಗಿರುವ ಎನ್‌.ಶ್ರೀನಿವಾಸನ್‌, ನಿರಂಜನ್‌ ಶಾ ಕೂಡ ಭಾಗವಹಿಸಲಿದ್ದಾರೆ. ಈಡೇರಬಹುದೇ ನಿರೀಕ್ಷೆ?: ಬಿಸಿಸಿಐ ಪದಾಧಿಕಾರಿಗಳು, ರಾಜ್ಯ ಕ್ರಿಕೆಟ್‌ ಸಂಸ್ಥೆಗಳು ಸರ್ವೋಚ್ಚ ನ್ಯಾಯಾಲಯದ ಕೆಲವು ನಿರ್ದೇಶನಗಳ ಕುರಿತಂತೆ ತೀವ್ರ ಅಸಮಾಧಾನ ಹೊಂದಿವೆ. ಸರ್ವೋಚ್ಚ ನ್ಯಾಯಾಲಯದಿಂದ ನಿಯಮಿಸಲ್ಪಟ್ಟಿರುವ ಆಡಳಿತಾಧಿಕಾರಿಗಳ ಗಮನಕ್ಕೆ ಇದನ್ನು ತರಲು ಪದೇ ಪದೇ ಯತ್ನಿಸಿದ್ದಾರೆ. ಒಂದು ರಾಜ್ಯಕ್ಕೆ ಒಂದೇ ಮತ, 3 ವರ್ಷಗಳ ಕಡ್ಡಾಯ ವಿಶ್ರಾಂತಿ ರದ್ದು, ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರನ್ನು ಮತ್ತೆ 5ಕ್ಕೇರಿಸುವುದು ಪದಾಧಿಕಾರಿಗಳ ಮುಖ್ಯ ಆಗ್ರಹ. ಇದಕ್ಕೆ ಇದುವರೆಗೆ ಸುಪ್ರೀಂ ನಿಯೋಜಿತ ಆಡಳಿತಾಧಿಕಾರಿಗಳು ನಕಾರ ಸೂಚಿಸುತ್ತಲೇ ಬಂದಿದ್ದಾರೆ. ಆದರೂ ಕೆಲವು ತಿಂಗಳ ಹಿಂದೆ ಈ ಬಗ್ಗೆ ಪನಃ ಪರಿಶೀಲಿಸುವ ಒಂದು ಸುಳಿವನ್ನೂ ನೀಡಿದ್ದಾರೆನ್ನುವುದು ಗಮನಾರ್ಹ.

ಒಂದು ವೇಳೆ “ಒಂದು ರಾಜ್ಯಕ್ಕೆ ಒಂದೇ ಮತ’ ರದ್ದಾದರೆ ವಿದರ್ಭ, ಮಹಾರಾಷ್ಟ್ರ, ಮುಂಬೈ, ಸೌರಾಷ್ಟ್ರ, ಗುಜರಾತ್‌, ಬರೋಡಾ ಕ್ರಿಕೆಟ್‌ ಸಂಸ್ಥೆಗಳು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲಿವೆ. ಜೊತೆಗೆ
ರೈಲ್ವೇಸ್‌, ಸರ್ವೀಸಸ್‌ನಂತಹ ರಾಜ್ಯಗಳೇ ಅಲ್ಲದ ಕ್ರಿಕೆಟ್‌ ಸಂಸ್ಥೆಗಳೂ ಮತವನ್ನು ಉಳಿಸಿಕೊಳ್ಳುವ ಅವಕಾಶವಿದೆ.

ಬಿಸಿಸಿಐ ಆಯ್ಕೆ ಸಮಿತಿಯನ್ನು ನ್ಯಾಯ  ಪೀಠ 3ಕ್ಕಿಳಿಸಿತ್ತು. ಆದರೆ ದೇಶೀಯ ಕ್ರಿಕೆಟ್‌ ಪಂದ್ಯಗಳನ್ನು ವೀಕ್ಷಿಸಲು ಈ
ಸಂಖ್ಯೆ ಸಾಲುವುದಿಲ್ಲ, ಮತ್ತೆ ಐದಕ್ಕೇರಿಸಬಹುದೆನ್ನುವುದು ಬಿಸಿಸಿಐ ಆಗ್ರಹ. ಈ ಬಗ್ಗೆಯೂ ಒಮ್ಮತದ ನಿರ್ಧಾರ ಆಗುವ ಸಾಧ್ಯತೆಯಿದೆ.

ಬಿಸಿಸಿಐಗೆ ತೊಡಕಾಗಿರುವ ಮತ್ತೂಂದು ಮುಖ್ಯ ನಿರ್ಧಾರ ಪ್ರತಿ ಪದಾಧಿಕಾರಿಯ ಅವಧಿ ಮುಗಿದ ಮೇಲೆ 3 ವರ್ಷಗಳ
ಕಡ್ಡಾಯ ವಿಶ್ರಾಂತಿ ಪಡೆಯಬೇಕೆಂಬ ನ್ಯಾಯಪೀಠದ ನಿರ್ದೇಶನ. ಹೀಗಾದರೆ ಬಂಗಾಳ ಕ್ರಿಕೆಟ್‌ ಸಂಸ್ಥೆ ಕಾರ್ಯದರ್ಶಿ ಸೌರವ್‌ ಗಂಗೂಲಿ ಕೂಡ ತಮ್ಮ ಅವಧಿ ಮುಗಿದ ನಂತರ ವಿಶ್ರಾಂತಿ ಪಡೆಯಬೇಕಾಗಿ ಬರುತ್ತದೆ. ಇದನ್ನೂ ರದ್ದು ಮಾಡಿ ಎಂದು ಕೋರಿಕೊಳ್ಳುವ ಸಾಧ್ಯತೆಯಿದೆ.

ಶ್ರೀನಿ, ನಿರಂಜನ್‌ ಶಾ ಭಾಗವಹಿಸಬಹುದೇ?: ಸದ್ಯದ ಲೆಕ್ಕಾಚಾರಗಳ ಪ್ರಕಾರ ತಮಿಳುನಾಡು ಕ್ರಿಕೆಟ್‌ ಸಂಸ್ಥೆ ಪ್ರತಿನಿಧಿಯಾಗಿ ಸಭೆಯಲ್ಲಿ ಎನ್‌.ಶ್ರೀನಿವಾಸನ್‌ ಭಾಗವಹಿಸಲಿದ್ದಾರೆ. ಹಾಗೆಯೇ ಬಿಸಿಸಿಐ ಮಾಜಿ ಕಾರ್ಯದರ್ಶಿ ನಿರಂಜನ್‌ ಶಾ ಕೂಡ ಭಾಗವಹಿಸಲಿದ್ದಾರೆ. 70 ವರ್ಷ ಮೇಲ್ಪಟ್ಟಿರುವುದರಿಂದ ಇಬ್ಬರೂ ಸಭೆಯಲ್ಲಿ ಪಾಲ್ಗೊಳ್ಳಲು ಅನರ್ಹರಾಗಿದ್ದಾರೆ. ಆದರೆ ಸಭೆಗೆ ಯಾರು ಬರಬೇಕು, ಬರಬಾರದು ಎನ್ನುವುದನ್ನು ನಿರ್ಬಂಧಿಸುವುದು ನಮ್ಮ
ಜವಾಬ್ದಾರಿಯಲ್ಲ ಎಂದು ಆಡಳಿತಾಧಿಕಾರಿ ವಿನೋದ್‌ ರಾಯ್‌ ಹೇಳುವ ಮೂಲಕ ಶ್ರೀನಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಟಾಪ್ ನ್ಯೂಸ್

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5 ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5 ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.