ಎರಡು ಹಂತಗಳಲ್ಲಿ ರಣಜಿ ಟ್ರೋಫಿ ನಡೆಸಲು ಬಿಸಿಸಿಐ ಚಿಂತನೆ
Team Udayavani, Jan 15, 2021, 8:55 AM IST
ಹೊಸದಿಲ್ಲಿ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಸಲದ ದೇಶಿ ಕ್ರಿಕೆಟ್ ಋತು ವಿಳಂಬವಾಗಿ ಆರಂಭಗೊಂಡಿದೆ. ಹೀಗಿದ್ದರೂ ಪ್ರತಿಷ್ಠಿತ ರಣಜಿ ಟ್ರೋಫಿ ಪಂದ್ಯಾವಳಿಯನ್ನು ನಡೆಸಲು ಬಿಸಿಸಿಐ ಪಣತೊಟ್ಟಿದೆ. ಅದರಂತೆ ಮುಂದಿನ ತಿಂಗಳಿನಿಂದ ಎರಡು ಹಂತಗಳಲ್ಲಿ ಕೂಟವನ್ನು ನಡೆಸಲು ಚಿಂತನೆ ನಡೆಸಿದೆ.
ಜ. 17 ರಂದು ನಡೆಯುವ ಬಿಸಿಸಿಐ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಪ್ರಸಕ್ತ ನಡೆಯುತ್ತಿರುವ ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋμಯ ಬಯೋ ಬಬಲ್ ಮಾದರಿಯಂತೆ ರಣಜಿ ಟ್ರೋಫಿ ಕೂಟವನ್ನು ಆಯೋಜಿಸಲು ಬಿಸಿಸಿಐ ಯೋಜನೆ ರೂಪಿಸಿದೆ. ರಣಜಿ ಕೂಟ ನಡೆಯುವುದು ಶೇ. 90ರಷ್ಟು
ಖಚಿತ. ಎಲ್ಲ ಪಂದ್ಯಗಳು ಸಯ್ಯದ್ ಮುಷ್ತಾಕ್ ಅಲಿ ಕೂಟದಂತೆ ನಡೆಯಲಿವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿರುವುದು ಅನುಮಾನಕ್ಕೆ ತೆರೆ ಎಳೆದಂತಾಗಿದೆ.
14ನೇ ಆವೃತ್ತಿಯ ಐಪಿಎಲ್ ಕೂಟಕ್ಕೂ ಮುನ್ನ ಫೆಬ್ರವರಿ-ಮಾರ್ಚ್ ನಲ್ಲಿ ಎರಡು ತಿಂಗಳ ಕಾಲ ರಣಜಿ ಲೀಗ್ ಪಂದ್ಯಗಳನ್ನು ಆಯೋಜಿಸಿ ಬಳಿಕ ನಾಕೌಟ್ ಪಂದ್ಯಗಳನ್ನು ನಡೆಸುವುದು ಬಿಸಿಸಿಐ ಯೋಜನೆಯಾಗಿದೆ.
ಬಿಸಿಸಿಐ ಅಜೆಂಡಾ: ಜ. 17ರ ಬಿಸಿಸಿಐ ಸಭೆಯಲ್ಲಿ ರಣಜಿ ಟ್ರೋಫಿ ಆಯೋಜನೆಯ ಜತೆಗೆ ಒಟ್ಟು 7 ಪ್ರಮುಖ ಅಜೆಂಡಾಗಳಿರಲಿವೆ. 2023-31ರ ಐಸಿಸಿ ವೇಳಾಪಟ್ಟಿ, ಮುಂದಿನ ವರ್ಷದ ಐಪಿಎಲ್‌ನಲ್ಲಿ ತಂಡಗಳನ್ನು 10ಕ್ಕೆ ಏರಿಸುವ ನಿಟ್ಟಿನಲ್ಲಿ ಹೆಚ್ಚಿನ ಅವಧಿ ಮೀಸಲಿಡುವುದು, ಜತೆಗೆ ಟಿ20 ವಿಶ್ವಕಪ್ ತೆರಿಗೆ ವಿನಾಯಿತಿ, ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಕಟ್ಟಡದ ಬಗ್ಗೆಯೂ ಚರ್ಚೆ ನಡೆಯಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.