BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
Team Udayavani, Nov 21, 2024, 12:28 PM IST
ಪರ್ತ್: ಶುಕ್ರವಾರ (ನ.22) ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದೆ. ಪರ್ತ್ (Perth) ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.
ಮೊದಲ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ (Rohit Sharma) ಅಲಭ್ಯರಾಗಲಿದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ (Jasprit Bumrah) ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ತಮ್ಮ ತಂಡವು ನ್ಯೂಜಿಲ್ಯಾಂಡ್ ವಿರುದ್ಧ ತವರಿನಲ್ಲಿ ಅಭೂತಪೂರ್ವ 0-3 ಸೋಲಿನ ಭಾರವನ್ನು ಹೊತ್ತಿಲ್ಲ ಎಂದು ಬುಮ್ರಾ ಹೇಳಿದ್ದಾರೆ.
ನೀವು ಗೆದ್ದರೂ ಶೂನ್ಯದಿಂದಲೇ ಆರಂಭಿಸುತ್ತೀರಿ, ಸೋತರೂ ಹಾಗೆಯೇ. ಹೀಗಾಗಿ ನಾವು ಭಾರತದಿಂದ ಯಾವುದೇ ಸೋಲಿನ ಭಾರವನ್ನು ಹೊತ್ತು ತಂದಿಲ್ಲ. ನಾವು ಕಿವೀಸ್ ಸರಣಿಯಿಂದ ಒಂದಷ್ಟು ವಿಚಾರಗಳನ್ನು ಕಲಿತಿದ್ದೇವೆ. ಆದರೆ ಅಂದಿನ ಪರಿಸ್ಥಿತಿ ಬೇರೆ ಇತ್ತು ಎಂದರು ಬುಮ್ರಾ.
ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ಅನ್ನು ಅಂತಿಮಗೊಳಿಸಿದೆ ಯಾದರೂ ಅದನ್ನು ಟಾಸ್ ಸಮಯದಲ್ಲೇ ಬಹಿರಂಗಪಡಿಸುವುದಾಗಿ ಬುಮ್ರಾ ಹೇಳಿದರು.
“ನಾವು ನಮ್ಮ ಆಡುವ ಬಳಗವನ್ನು ಅಂತಿಮಗೊಳಿಸಿದ್ದೇವೆ ಮತ್ತು ಪಂದ್ಯದ ಆರಂಭದ ಮೊದಲು ನಾಳೆ ಬೆಳಿಗ್ಗೆ ನಿಮಗೆ ತಿಳಿಯುತ್ತದೆ” ಎಂದು ನಾಯಕ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.