ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್
Team Udayavani, Mar 30, 2023, 6:04 PM IST
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2023) ನ ಬಹು ನಿರೀಕ್ಷಿತ ಸೀಸನ್ ಮಾರ್ಚ್ 31 ರಂದು ಶುಕ್ರವಾರ ಪ್ರಾರಂಭವಾಗಲಿದ್ದು, ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಎಂಎಸ್ ಧೋನಿ ಎಂದಿನಂತೆ ಸಿಎಸ್‌ಕೆಯನ್ನು ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ ಅವರು ಗುಜರಾತ್ ಟೈಟಾನ್ಸ್ ನಾಯಕತ್ವ ವಹಿಸಲಿದ್ದಾರೆ.
ಕೂಟಕ್ಕೆ ಮುಂಚಿತವಾಗಿ ನಾಯಕರು ಟ್ರೋಫಿಯ ಜೊತೆಗೆ ಫೋಟೋಶೂಟ್ ಗೆ ಮಾಡಿಸಿಕೊಂಡಿದ್ದಾರೆ. ಆದರೆ, ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಇದರಿಂದ ತಪ್ಪಿಸಿಕೊಂಡಿದ್ದು, ಸನ್‌ರೈಸರ್ಸ್ ಹೈದರಾಬಾದ್ ನ ನಾಯಕ ಏಡೆನ್ ಮಾರ್ಕ್ರಮ್ ಅವರ ಬದಲಿಗೆ ಅವರ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರು ಭಾಗವಹಿಸಿದ್ದಾರೆ. ಇದನ್ನು ಕಂಡು ಅಭಿಮಾನಿಗಳು ಹೈದರಾಬಾದ್ ನಾಯಕನನ್ನು ಬದಲಾಯವಣೆ ಮಾಡಿದೆಯೇ ಎಂದು ಗೊಂದಲಕ್ಕೆ ಒಳಗಾಗಿದ್ದಾರೆ.
ಆದರೆ ಹೈದರಾಬಾದ್ ತಂಡದ ನಾಯಕ ಏಡೆನ್ ಮಾರ್ಕ್ರಮ್ ಅವರು ದಕ್ಷಿಣ ಆಫ್ರಿಕಾದ ರಾಷ್ಟ್ರೀಯ ತಂಡದ ಸೇವೆಯಲ್ಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಆಡುತ್ತಿದ್ದಾರೆ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಮೊದಲ ಪಂದ್ಯಕ್ಕೆ ಅಲಭ್ಯರಾಗುತ್ತಿದ್ದು, ಭುವನೇಶ್ವರ್ ಕುಮಾರ್ ತಂಡವನ್ನು ಮುನ್ನಡೆಸಲಿದ್ದಾರೆ.
Game Face 🔛
ARE. YOU. READY for #TATAIPL 2023❓ pic.twitter.com/eS5rXAavTK
— IndianPremierLeague (@IPL) March 30, 2023
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.