ಬರ್ಮಿಂಗ್‌ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್: ಪದಕ ನಿರೀಕ್ಷೆಯೊಂದಿಗೆ ಗುರುರಾಜ್ ಪಯಣ
61 ಕೆಜಿ ವಿಭಾಗದಲ್ಲಿ ದೇಶಕ್ಕೆ ಮೊದಲ ಪದಕ ತರುವ ಗುರಿ
Team Udayavani, Jul 4, 2022, 6:50 AM IST
ಕುಂದಾಪುರ: ನಾಲ್ಕು ವರ್ಷಗಳ ಹಿಂದೆ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ 21ನೇ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು, ಭಾರತಕ್ಕೆ ಮೊತ್ತಮೊದಲ ಪದಕ ತಂದಿತ್ತ ಕುಂದಾಪುರ ಮೂಲದ ವೇಟ್‌ಲಿಫ್ಟರ್ ಗುರುರಾಜ್ ಈಗ ಮತ್ತೂಂದು ಪದಕದ ನಿರೀಕ್ಷೆಯೊಂದಿಗೆ ಇಂಗ್ಲೆಂಡ್‌ಗೆ ಪಯಣ ಬೆಳೆಸಿದ್ದಾರೆ.
ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಜು. 28ರಿಂದ ಆ. 8ರ ವರೆಗೆ 22ನೇ ಕಾಮನ್ವೆಲ್ತ್ ಗೇಮ್ಸ್ ನಡೆಯಲಿದ್ದು, ಗುರುರಾಜ್ ಅವರನ್ನೊಳಗೊಂಡ ಭಾರತೀಯ ವೇಟ್‌ಲಿಫ್ಟರ್‌ಗಳ ತಂಡ ಈಗಾಗಲೇ ತೆರಳಿದೆ.
ವಂಡ್ಸೆ ಸಮೀಪದ ಚಿತ್ತೂರಿನ ಚಾಲಕರಾಗಿರುವ ಮಹಾಬಲ ಪೂಜಾರಿ ಹಾಗೂ ಪದ್ದು ಪೂಜಾರಿ ದಂಪತಿ ಪುತ್ರನಾಗಿರುವ ಗುರುರಾಜ್, ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆಲ್ಲುವ ವಿಶ್ವಾಸ ದೊಂದಿಗೆ ಕಣಕ್ಕಿಳಿಯುತ್ತಿದ್ದಾರೆ. ಅವರೀಗ ವಾಯು ಸೇನೆಯ ಉದ್ಯೋಗಿಯಾಗಿದ್ದಾರೆ. ಕಳೆದ ಒಂದು ವರ್ಷ ದಿಂದ ಪಟಿಯಾಲದಲ್ಲಿ ತರಬೇತಿ ಶಿಬಿರದಲ್ಲಿ ಪಾಲ್ಗೊಂ ಡಿದ್ದು, ಅಲ್ಲಿಂದಲೇ ಬರ್ಮಿಂಗ್‌ಹ್ಯಾಮ್‌ಗೆ ತೆರಳಿದ್ದಾರೆ.
61 ಕೆಜಿ ವಿಭಾಗದಲ್ಲಿ ಸ್ಪರ್ಧೆ
ಕಳೆದ ಬಾರಿ ಪುರುಷರ 56 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಗುರುರಾಜ್ ಒಟ್ಟು 249 ಕೆಜಿ (111+138) ಭಾರ ಎತ್ತಿ ಬೆಳ್ಳಿ ಪದಕ ಗೆದ್ದು, ವೈಯಕ್ತಿಕ ಶ್ರೇಷ್ಠ ನಿರ್ವಹಣೆಯನ್ನು ಸರಿಗಟ್ಟಿದರು. ಇದು ಅವರ ಚೊಚ್ಚಲ ಕಾಮನ್ವೆಲ್ತ್ ಗೇಮ್ಸ್ ಆಗಿತ್ತು. ಈ ಬಾರಿ 61 ಕೆಜಿ ವಿಭಾಗದಲ್ಲಿ ಗುರುರಾಜ್ ಸ್ಪರ್ಧಿಸುತ್ತಿದ್ದು, ಈ ವಿಭಾಗದಲ್ಲಿ ಭಾರತಕ್ಕೆ ಈವರೆಗೆ ಪದಕ ಒಲಿದಿಲ್ಲ. ಗುರುರಾಜ್ ಸ್ಪರ್ಧೆಯಿಂದಾಗಿ ಪದಕ ನಿರೀಕ್ಷೆ ಮೂಡಿದೆ.
ಧೈರ್ಯ ತುಂಬಿದ ಹೆತ್ತವರು
ಎರಡನೇ ಬಾರಿಗೆ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ತನಗೆ ತಂದೆ-ತಾಯಿ ಧೈರ್ಯ ತುಂಬಿದ್ದಾರೆ. ಅವರು ಆತ್ಮವಿಶ್ವಾಸದ ಮಾತುಗಳನ್ನಾಡಿ ಹಾರೈಸಿದ್ದಾರೆ ಎನ್ನುವುದಾಗಿ ಗುರುರಾಜ್ ಹೇಳಿಕೊಂಡಿದ್ದಾರೆ.
ಪದಕದ ನಿರೀಕ್ಷೆಯಲ್ಲಿದ್ದೇನೆ…
ಬರ್ಮಿಂಗ್‌ಹ್ಯಾಮ್‌ನಿಂದ “ಉದಯವಾಣಿ’ ಜತೆ ಮಾತನಾಡಿದ ಗುರುರಾಜ್, ಕಳೆದ ಬಾರಿ 56 ಕೆಜಿಯಲ್ಲಿ ಸ್ಪರ್ಧಿಸಿದ್ದು, ಈ ಬಾರಿ 61 ಕೆಜಿಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಜು. 30ರಂದು ನನ್ನ ಸ್ಪರ್ಧೆ ನಡೆಯಲಿದೆ. ಕಠಿನ ಅಭ್ಯಾಸದಲ್ಲಿ ತೊಡಗಿದ್ದು, ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದು ಮುಖ್ಯ. ಈ ವಿಭಾಗದಲ್ಲಿ ಪ್ರಬಲ ಪೈಪೋಟಿ ಯಿದ್ದು, ಪದಕ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ.
-ಪ್ರಶಾಂತ್ ಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.