Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ
Team Udayavani, Sep 18, 2024, 5:45 AM IST
ಕರಾಚಿ: ಪಾಕಿಸ್ಥಾನದಲ್ಲಿ ಮುಂದಿನ ವರ್ಷ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆ ಸಹಿತ ಇತರ ವ್ಯವಸ್ಥೆಗಳ ಪರಿಶೀಲನೆಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ನ ಐವರು ಸದಸ್ಯರ ನಿಯೋಗವು ಮಂಗಳವಾರ ಕರಾಚಿಗೆ ಆಗಮಿಸಿತು.
ಐಸಿಸಿಯ ಕಾರ್ಯಕ್ರಮ ಮತ್ತು ಭದ್ರತಾ ವಿಭಾಗದ ಉನ್ನತ ಅಧಿಕಾರಿಗಳು ಹಾಗೂ ಕ್ರಿಕೆಟ್ ಮತ್ತು ಪ್ರೊಡಕ್ಷನ್ ವಿಭಾಗದ ಜನರಲ್ ಮ್ಯಾನೇಜರ್ ಈ ನಿಯೋಗದಲ್ಲಿದ್ದರು. ಕಳೆದ ಎಪ್ರಿಲ್ ಬಳಿಕ ಐಸಿಸಿಯ ಪಿಚ್ ಸಲಹೆಗಾರ ಆ್ಯಂಡಿ ಅಟ್ಕಿನ್ಸನ್ ಅವರು ಮೂರು ಬಾರಿ ಪಾಕಿಸ್ಥಾನಕ್ಕೆ ಭೇಟಿ ನೀಡಿ ಮಾರ್ಗದರ್ಶನ ನೀಡಿದ್ದಾರೆ.
ಪಾಕಿಸ್ಥಾನ ಭೇಟಿ ವೇಳೆ ಐಸಿಸಿ ನಿಯೋಗವು ಕೆಲವು ತಿಂಗಳ ಹಿಂದೆ ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಸಿದ್ಧಪಡಿಸಿ ಕಳುಹಿಸಿದ್ದ ಪಂದ್ಯಾವಳಿಯ ತಾತ್ಕಾಲಿಕ ವೇಳಾಪಟ್ಟಿ ಕುರಿತು ಚರ್ಚೆ ನಡೆಸಲಿದೆ. ಈ ಕೂಟದಲ್ಲಿ ಭಾರತೀಯ ತಂಡ ಭಾಗವಹಿಸುವ ಸಾಧ್ಯತೆಯಿದೆ ಮತ್ತು ಭಾರತ ಆಡುವ ಎಲ್ಲ ಪಂದ್ಯಗಳು ಲಾಹೋರ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಒಂದು ವೇಳೆ ಭಾರತ ಸರಕಾರ ಭಾರತೀಯ ತಂಡವನ್ನು ಪಾಕಿಸ್ಥಾನಕ್ಕೆ ಕಳುಹಿಸಲು ಅವಕಾಶ ನೀಡದಿದ್ದರೆ ಏನು ಮಾಡಬಹುದು ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.