Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Team Udayavani, Jan 9, 2025, 1:13 PM IST
ನವದೆಹಲಿ: ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಇನ್ನು ಕೆಲವೇ ದಿನಗಳಲ್ಲಿ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ಆದರೆ ಭಾರತೀಯ ತಂಡದಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜ, ವೇಗಿ ಮೊಹಮ್ಮದ್ ಶಮಿ ಮತ್ತು ಬ್ಯಾಟರ್ ಕೆ.ಎಲ್.ರಾಹುಲ್ಗೆ ಸ್ಥಾನ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ.
ಫೆ.19ರಿಂದ ಪಾಕಿಸ್ತಾನದ ಆತಿಥ್ಯದಲ್ಲಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯಲಿದ್ದು, ಈ ಸಂಬಂಧ ವಾರಾಂತ್ಯದೊಳಗೆ ಬಿಸಿಸಿಐ, 15 ಜನರ ಭಾರತೀಯ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ.
ಜಡೇಜ ಮತ್ತು ರಾಹುಲ್ ಹೇಳಿಕೊಳ್ಳುವ ಫಾರ್ಮ್ನaಲ್ಲಿ ಇಲ್ಲ. ಅತ್ತ ಮೊಣಕಾಲು ಗಾಯಕ್ಕೀಡಾಗಿರುವ ಶಮಿ, ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಬಗ್ಗೆ ಎನ್ಸಿಎ ಇನ್ನೂ ಮಾಹಿತಿ ನೀಡಿಲ್ಲ. ಅಲ್ಲದೆ ಶಮಿ, 2023ರ ನವೆಂಬರ್ನಲ್ಲಿ ಏಕದಿನ ವಿಶ್ವಕಪ್ನಲ್ಲಿ ಕೊನೇ ಬಾರಿ ಭಾರತ ಪರ ಆಡಿದ್ದರು. ಅಲ್ಲಿಂದ ಶಮಿ ತಂಡದಿಂದ ಹೊರಗುಳಿದಿದ್ದಾರೆ.
ಈ ಕಾರಣಗಳಿಂದ ಜಡೇಜ, ಶಮಿ ಮತ್ತು ರಾಹುಲ್ ಈ ಮೂವರಿಗೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ, ಚಾಂಪಿಯನ್ಸ್ ಟ್ರೋಫಿಗಾಗಿ ಭಾರತೀಯ ತಂಡದಲ್ಲಿ ಸ್ಥಾನ ನೀಡುವುದು ಅನುಮಾನ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್ ಫೈನಲ್ಗೆ
Team India; ಕಿವೀಸ್ ಸರ್ಜನ್ ಭೇಟಿಯಾದ ಬುಮ್ರಾ: ಚಾಂಪಿಯನ್ಸ್ ಟ್ರೋಫಿಗೆ ಅನುಮಾನ?
SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.