Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Team Udayavani, Nov 8, 2024, 3:20 PM IST
ಮುಂಬೈ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy 2025) ಕೂಟವು ಪಾಕಿಸ್ತಾನದಲ್ಲಿಯೇ ಆಯೋಜನೆಗೊಳ್ಳುವುದು ಬಹುತೇಕ ಖಚಿತವಾಗಿದೆ. 2025ರ ಫೆಬ್ರವರಿಯಲ್ಲಿ ಏಕದಿನ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಕೂಟವು ನಡೆಯಲಿದೆ.
ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾಗವಹಿಸುವ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕೃತವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ (ICC) ಪತ್ರ ಬರೆದಿದೆ. ಇತ್ತೀಚಿನ ವರದಿಗಳ ಪ್ರಕಾರ, ಭದ್ರತೆಯ ಕಾರಣದಿಂದ ದುಬೈನಲ್ಲಿ ಭಾರತದ ಪಂದ್ಯಗಳನ್ನು ಆಯೋಜನೆ ಮಾಡಲು ಬಿಸಿಸಿಐ ಐಸಿಸಿ ಗೆ ವಿನಂತಿಸಿದೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜನೆ ಮಾಡಲಿದೆ. ಮುಂದಿನ ವರ್ಷ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಕೂಟವು ನಡೆಯಲಿದೆ. ಐಸಿಸಿಗೆ ಪಿಸಿಬಿ ಸಲ್ಲಿಸಿರುವ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳನ್ನು ಲಾಹೋರ್ ನಲ್ಲಿ ನಡೆಸಲು ಯೋಜಿಸಲಾಗಿದೆ.
ಆದರೆ ರಾಜಕೀಯ ಮತ್ತು ಭದ್ರತಾ ಕಾರಣಗಳಿಗೆ ಟೀಂ ಇಂಡಿಯಾವು ಪಾಕಿಸ್ತಾನ ಪ್ರವಾಸ ಮಾಡುತ್ತಿಲ್ಲ. ಯಾವುದೇ ಕಾರಣಕ್ಕೂ ಪಾಕಿಸ್ತಾನದಲ್ಲಿ ಆಡಲು ಬರುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ.
ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನದ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ಸ್ಟೇಡಿಯಂಗಳ ನವೀಕರಣ ಮಾಡಲಾಗಿದೆ. ಹೀಗಾಗಿ ಪಾಕಿಸ್ತಾನದಿಂದ ಸಂಪೂರ್ಣ ಕೂಟವನ್ನು ಸ್ಥಳಾಂತರಿಸುವುದು ಅಸಾಧ್ಯ ಎನ್ನಲಾಗಿದೆ. ಇದೇ ವೇಳೆ ಭಾರತದ ಪಂದ್ಯಗಳನ್ನು ದುಬೈಗೆ ಶಿಫ್ಟ್ ಮಾಡಲು ಬಿಸಿಸಿಐ ಮನವಿ ಮಾಡಿದೆ.
“ಇದು ನಮ್ಮ ನಿಲುವು ಮತ್ತು ಯಾವುದೇ ಕಾರಣ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ನಾವು ಅವರಿಗೆ (ಐಸಿಸಿ) ಪತ್ರ ಬರೆದಿದ್ದೇವೆ ಮತ್ತು ನಮ್ಮ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಕೇಳಿಕೊಂಡಿದ್ದೇವೆ” ಎಂದು ಬಿಸಿಸಿಐ ಮೂಲವೊಂದ್ನು ಉಲ್ಲೇಖಿಸಿ ದಿ ಇಂಡಿಯಾ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.